ಫೆ. 12: ಮಣಿಪಾಲ ಮ್ಯಾರಥಾನ್‌; ಮಕ್ಕಳ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ಯತ್ನ

15 ಸಾವಿರ ಓಟಗಾರರು ಭಾಗವಹಿಸುವ ನಿರೀಕ್ಷೆ

Team Udayavani, Feb 8, 2023, 6:20 AM IST

ಫೆ. 12: ಮಣಿಪಾಲ ಮ್ಯಾರಥಾನ್‌; ಮಕ್ಕಳ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ಯತ್ನ

ಉಡುಪಿ: ಮಣಿಪಾಲದ ಮಾಹೆ ವಿ.ವಿ., ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಅಸೋಸಿಯೇಶನ್‌, ಬೆಂಗಳೂರಿನ ಎನ್‌ಇಬಿ ಸ್ಪೋರ್ಟ್ಸ್, ರೋಟರಿ ಕ್ಲಬ್‌ ಹಾಗೂ ಐಸಿಐಸಿಐ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್‌ನ ಬಗ್ಗೆ ಅರಿವು ಮೂಡಿಸಲು ಫೆ. 12ರಂದು 5ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ ನಡೆಯಲಿದೆ ಎಂದು ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು.

ಭಾರತ ಮಾತ್ರವಲ್ಲದೆ ವಿದೇಶದಿಂದಲೂ ಮ್ಯಾರ ಥಾನ್‌ಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 42 ಕಿ.ಮೀ. ಪೂರ್ಣ ಮ್ಯಾರಥಾನ್‌, 21 ಕಿ.ಮೀ. ಅರ್ಧ ಮ್ಯಾರಥಾನ್‌, 10 ಕಿ.ಮೀ. ಓಟ, 5 ಕಿ.ಮೀ. ಓಟ, 3 ಕಿ.ಮೀ. ರೋಟರಿ ಮನೋರಂಜನ ಓಟದ ಜತೆಗೆ ಈ ವರ್ಷ ವಿಕಲಚೇತನರಿಗೆ ವೀಲ್‌ಚೇರ್‌ ಓಟ ಕೂಡ ಇರಲಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಣಿಪಾಲ ಮ್ಯಾರಥಾನ್‌ ಪ್ರಯುಕ್ತ ಅಂದು ಮಧ್ಯಾಹ್ನದ ವರೆಗೂ ಗ್ರೀನ್ಸ್‌ನಲ್ಲಿ ವಿವಿಧ ಕಾರ್ಯಕ್ರಮ ಗಳು ನಡೆಯಲಿದೆ. ಮಾಹಿತಿಗಾಗಿ http://manipal [email protected] ಸಂಪ ರ್ಕಿಸಬಹುದು.

ಮಣಿಪಾಲ ಮ್ಯಾರಥಾನ್‌ ಸುಮಾರು 16.5 ಲಕ್ಷದಷ್ಟು ಬಹುಮಾನವನ್ನು ವಿವಿಧ ವಿಭಾಗದಲ್ಲಿ ನೀಡಲಿದೆ. ಮ್ಯಾರಥಾನ್‌ನಿಂದ ಸಂಗ್ರಹವಾದ ನಿಧಿಯನ್ನು ಮಕ್ಕಳ ಕ್ಯಾನ್ಸರ್‌ ಬಗ್ಗೆ ಅರಿವು ಮತ್ತು ಅದರ ಚಿಕಿತ್ಸೆಗೆ ಸದ್ಭಳಕೆ ಮಾಡಿಕೊಳ್ಳಲಾಗುವುದು ಎಂದರು.

ಸಾರ್ವಜನಿಕರಿಗೂ ಅವಕಾಶ
ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಮ್ಯಾರಥಾನ್‌ ಓಟವು ಮಾಹೆ ಕ್ಯಾಂಪಸ್‌ನ ಫುಡ್‌ಕೋರ್ಟ್‌ನಿಂದ ಆರಂಭಗೊಂಡು, ಸಿಂಡಿಕೇಟ್‌ ವೃತ್ತ, ಕಾಯಿನ್‌ ವೃತ್ತ, ಪೆರಂಪಳ್ಳಿ ಚರ್ಚ್‌, ಅಂಬಾಗಿಲು, ಕಲ್ಸಂಕ ವೃತ್ತ, ಎಂಜಿಎಂ ಕಾಲೇಜಿನ ವರೆಗೂ ಬಂದು ವಾಪಸ್‌ ಅದೇ ಮಾರ್ಗದಲ್ಲಿ ಫುಡ್‌ಕೋರ್ಟ್‌ ತಲುಪಿದರೆ 21 ಕಿ.ಮೀ. ಆಗಲಿದೆ. ಫುಲ್‌ ಮ್ಯಾರಥಾನ್‌ಗೆ ಇದೇ ಮಾರ್ಗದಲ್ಲಿ ಎರಡು ಸುತ್ತು ಓಡಬೇಕಾಗುತ್ತದೆ. ಬಹುಮಾನ ವಿತರಣೆ ಬೆಳಗ್ಗೆ 9 ಗಂಟೆಯ ಅನಂತರ ನಡೆಯಲಿದೆ. ಫುಲ್‌ ಮ್ಯಾರಥಾನ್‌ಗೆ 200ಕ್ಕೂ ಅಧಿಕ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ಓಟದಲ್ಲಿ ಪಾಲ್ಗೊಳ್ಳಲಿದ್ದಾರೆ. 3 ಕಿ.ಮೀ. ಓಟದಲ್ಲಿ ಸಾರ್ವಜನಿಕರೆಲ್ಲರೂ ಪಾಲ್ಗೊಳ್ಳಲು ಅವಕಾಶವಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಜಿಲ್ಲೆಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ದೃಷ್ಟಿ ಯಿಂದ ಶಾಲಾಕಾಲೇಜು ವಿದ್ಯಾರ್ಥಿಗಳಿಗೆ 3 ಕಿ.ಮೀ. ಓಟ ನಡೆಸಲಾಗುವುದು. ಎಲ್ಲ ವಿಭಾಗದಲ್ಲೂ ಪ್ರಥಮ ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಇರಲಿದೆ. ವಿದೇಶದಿಂದಲೂ ಸಾಕಷ್ಟು ಸಂಖ್ಯೆಯ ಆ್ಯತ್ಲೀಟ್‌ಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಮಣಿಪಾಲ ಮ್ಯಾರಥಾನ್‌ ಅಂತಾರಾಷ್ಟ್ರೀಯ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಹಾಗೂ ಅಂತಾರಾಷ್ಟ್ರೀಯ ಮ್ಯಾರಥಾನ್‌ ಅಸೋಸಿಯೇಶನ್‌(ಎಎಂಐಎಸ್‌) ಮಾನ್ಯತೆಯನ್ನು ಪಡೆದುಕೊಂಡಿದೆ.

ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಸೋಸಿಯೇಶನ್‌ ಅಧ್ಯಕ್ಷ ಡಾ| ಕೆಂಪರಾಜ್‌ ಎಚ್‌.ಬಿ., ಬೆಂಗಳೂರಿನ ಎನ್‌ಇಬಿ ಸ್ಪೋರ್ಟ್ಸ್ ನಿರ್ದೇಶಕ ನಾಗರಾಜ ಅಡಿಗ, ಮಾಹೆ ಸ್ಪೋರ್ಟ್ಸ್ ಕೌನ್ಸಿಲ್‌ನ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌, ಐಸಿಐಸಿಐ ಬ್ಯಾಂಕ್‌ನ ಮಧು ದೀಕ್ಷಿತ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು