ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!


Team Udayavani, Apr 16, 2024, 6:45 AM IST

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ಪುತ್ತೂರು: ಧಗ ಧಗಿಸುತ್ತಿರುವ ಬೇಸಗೆಬಿಸಿಗೆ ಎಳೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಿಗೆ ಸೀಮಿತ ವಾಗಿದ್ದ ದೀರ್ಘ‌ ರಜಾ ಅವಧಿಯನ್ನು ಎಲ್ಲ ಜಿಲ್ಲೆ ಗಳಿಗೂ ಅನ್ವಯಿಸಲಾಗಿದೆ.

ಅಂಗನವಾಡಿ ಕೇಂದ್ರಗಳಿಗೆ ಇದೇ ಮೊದಲ ಬಾರಿಗೆ ಗರಿಷ್ಠ ರಜೆ ಘೋಷಿಸಲಾಗಿದೆ. ಹೀಗಾಗಿ ಬಿಸಿಲಿನ ಧಗೆಯಲ್ಲಿ ಮಕ್ಕಳು ಅಂಗವಾಡಿಗೆ ಹೋಗಿಬರುವ ಸಂಕಷ್ಟದಿಂದ ಪಾರಾಗಿದ್ದಾರೆ.

ರಜೆ ಆರಂಭ
ಪ್ರತೀ ವರ್ಷದಂತೆ ಈ ಬಾರಿಯು 15 ದಿನಗಳ ಅವಧಿಗೆ ಅಂಗನವಾಡಿಗಳಿಗೆ ರಜೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಪುಟಾಣಿಗಳ ಹಿತದೃಷ್ಟಿಯಿಂದ ಸಮಯ ಪರಿಷ್ಕರಿಸಿ ಎ. 15ರಿಂದ ಮೇ 26ರ ತನಕ ಬೇಸಗೆ ರಜೆ ಘೋಷಿಸಲಾಗಿದೆ. ಅಂದರೆ ಒಟ್ಟು 41 ದಿನಗಳರಜೆ ದೊರೆತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ರಿಗೆ ಎ. 15ರಿಂದ ಮೇ 11ರ ತನಕ 8ರಿಂದ ಮಧ್ಯಾಹ್ನ 12 ಗಂಟೆ ತನಕ ಕೇಂದ್ರಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದ್ದು ಮೇ 11 ರಿಂದ 26 ರ ತನಕ ಅಂಗನವಾಡಿ ಸಿಬಂದಿ ಗಳಿಗೆ ರಜೆ ಘೋಷಿಸಲಾಗಿದೆ.

ಬಿಸಿಲ ಝಳ
ಈ ಬಾರಿ ವಯಸ್ಕರಿಗೆ ಬಿಸಿಲಿನ ಝಳ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂತಹವು ದರಲ್ಲಿ ಪುಟಾಣಿಗಳು ಅಂಗನವಾಡಿಗೆಗಳಿಗೆ ಹೋಗಿ ಬರಬೇಕಾದ ಪರಿಸ್ಥಿತಿ ತೀರಾ ಕಷ್ಟಕರವಾದದು. ಹೀಗಾಗಿ ಕೆಲವು ಜಿಲ್ಲೆಗಳ ಅಂಗನವಾಡಿ ಕಾರ್ಯ ಕರ್ತೆ ಯರ ಮತ್ತು ಸಹಾ ಯಕಿ ಯರ ಸಂಘಟನೆಗಳ ದೀರ್ಘ‌ ರಜೆ ನೀಡು ವಂತೆ ಮನವಿ ಸಲ್ಲಿಸಿದ್ದರು. ಅದರಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕಾರ್ಯನಿರ್ವಹಣ ಸಮಯ ಪರಿಷ್ಕರಿಸಲಾಗಿತ್ತು. ಉಳಿದ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಬೇಕು ಎನ್ನುವ ಬೇಡಿಕೆಗೆ ಇಲಾಖೆ ಅಸ್ತು ನೀಡಿದೆ. ಏರುತ್ತಿರುವ ತಾಪಮಾನದ ಜತೆಗೆ ಲೋಕಸಭಾ ಚುನಾವಣೆಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಕೆಲಸ ನಿರ್ವಹಣೆ ಇರುವುದು, ಅಂಗನವಾಡಿ ಕೇಂದ್ರಗಳನ್ನು ಮತಗಟ್ಟೆಗಳನ್ನಾಗಿ ಗುರುತಿಸಿರುವುದು ಕೂಡ ರಜೆ ಪರಿಷ್ಕರಣೆಗೆ ಕಾರಣಗಳಲ್ಲಿ ಒಂದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪೌಷ್ಟಿಕ ಆಹಾರ ವಿತರಣೆಗೆ ಸೂಚನೆ
ರಜಾ ಅವಧಿಯಲ್ಲಿ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನಿಯಮ ಅನುಸಾರ ಆಹಾರ ಪೂರೈಕೆ ಮಾಡಬೇಕು. ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಅಡಚಣೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಬಿಸಿಲಿನ ತೀವ್ರತೆ, ಚುನಾವಣ ಕಾರಣಗಳಿಂದ ಈ ಬಾರಿ ಎ. 15ರಿಂದ ಮೇ 26ರ ತನಕ ಅಂಗನವಾಡಿ ಮಕ್ಕಳಿಗೆ ವಿಶೇಷ ರಜೆ ನೀಡಲಾಗಿದೆ. ಇದರಲ್ಲಿ ಮೇ 15ರಿಂದ 26ರ ತನಕ ಬೇಸಗೆ ರಜೆಯು ಸೇರಿದೆ. ಆಹಾರವನ್ನು ಮಕ್ಕಳ ಮನೆಗೆ ನೀಡಲಾಗುತ್ತದೆ. ಇಷ್ಟು ದೀರ್ಘ‌ ರಜೆ ನೀಡಿರುವುದು ಇದೇ ಮೊದಲು.
– ಕುಮಾರಕೃಷ್ಣ, ಮಕ್ಕಳ ರಕ್ಷಣ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲೆ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.