ವಿಶ್ವ ಪಾರಂಪರಿಕ ಪಟ್ಟಿಗೆ ಪಟ್ಟದಕಲ್ಲು

ಜಾತಿ ಸಮೀಕ್ಷೆ ವರದಿ ಮುಂದಿನ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Team Udayavani, Dec 13, 2019, 6:15 AM IST

ಬೆಂಗಳೂರು: ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮ ತಾಣವಾಗಿರುವ ಪಟ್ಟದಕಲ್ಲನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಟ್ಟದಕಲ್ಲು ಅಭಿವೃದ್ಧಿ ದೃಷ್ಟಿಯಿಂದ ಮಲಪ್ರಭಾ ನದಿಯ ದಂಡೆಯಲ್ಲಿ 29.25 ಕೋಟಿ ರೂ.ವೆಚ್ಚದಲ್ಲಿ ವಾಣಿಜ್ಯ ಸಮುಚ್ಚಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಈ ಪ್ಲಾಜಾದಲ್ಲಿ ರೆಸ್ಟೊರೆಂಟ್‌, ಬಯಲು ರಂಗ ಮಂದಿರ, ಸ್ಥಳೀಯ ಕಲೆಗಳ ಪ್ರದರ್ಶನ ಕೇಂದ್ರ, ಪ್ರವಾಸಿಗರ ವಿಶ್ರಾಂತಿ ಕೇಂದ್ರ ಎಲ್ಲವನ್ನೂ ಒಂದೇ ಸೂರಿನಡಿ ನಿರ್ಮಿಸಲಾಗುವುದು ಎಂದು ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಈಗಾಗಲೇ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಕಟ್ಟಡದಲ್ಲಿ ಹಂಪಿ ವಿವಿ ಕೇಂದ್ರ ಇರುವುದನ್ನು
ಹೊರತುಪಡಿಸಿ, ಬೇರೆ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ಆರ್ಯ ವೈಶ್ಯ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ತೀರ್ಮಾನ, ಶಿಕ್ಷಣ ಹಾಗೂ
ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಹಿಂದುಳಿದ ವರ್ಗದ ಆಯೋಗದಿಂದ ವರದಿ ಪಡೆಯಬೇಕಾಗುತ್ತದೆ. ನಂತರ ಮೀಸಲಾತಿ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೆ ಉಪಸಮಿತಿ:
ಎಸ್‌ಸಿ ಹಾಗೂ ಎಸ್‌ಟಿ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ

ಮಾಡಲು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಜಗದೀಶ್‌ ಶೆಟ್ಟರ್‌, ಅಶ್ವತ್ಥ್ ನಾರಾಯಣ, ಸುರೇಶ್‌ ಕುಮಾರ್‌ ಹಾಗೂ ಶ್ರೀರಾಮುಲು
ಸದಸ್ಯರಾಗಿದ್ದಾರೆ ಎಂದು ಹೇಳಿದರು. ಮಹಿಳಾ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು ಮಂಡ್ಯ, ಚಾಮರಾಜನಗರ, ಕಲಬುರಗಿ, ಕೋಲಾರ, ಹಾಸನ, ಧಾರವಾಡದಲ್ಲಿ ಪ್ರತ್ಯೇಕ ವಸತಿ ನಿಲಯ.ಕಟ್ಟಲು 15 ಕೋಟಿ ರೂ.ಗಳ ಆಡಳಿತಾತ್ಮಕ
ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಜಾತಿ ಸಮೀಕ್ಷೆ ವರದಿ ಚರ್ಚೆ ಮುಂದೂಡಿಕೆ: ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿಂದುಳಿದ
ವರ್ಗಗಳ ಆಯೋಗದಿಂದ ನಡೆಸಿದ್ದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ)
ವರದಿಯ ಬಗ್ಗೆ ಗುರುವಾರ ನಡೆದ ಸಂಪುಟದಲ್ಲಿ ವಿಷಯ ಪ್ರಸ್ತಾಪವಾಗಿದ್ದು, ಈ ಬಗ್ಗೆ ಮುಂದಿನ ಸಂಪುಟ
ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸುವ ಸಲುವಾಗಿ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆಯನ್ನು ಕಾನೂನು ಬಾಹಿರವಾಗಿ ನಡೆಸಿದೆ
ಎನ್ನುವ ಕಾರಣಕ್ಕೆ ಆ ವರದಿಯನ್ನು ಒಪ್ಪಿಕೊಳ್ಳಬೇಕೆ ಅಥವಾ ಬೇಡವೇ ಎನ್ನುವ ಕುರಿತು ಬಿಜೆಪಿ ಸರ್ಕಾರ
ಗೊಂದಲಕ್ಕೆ ಸಿಲುಕಿದೆ ಎನ್ನಲಾಗಿದ್ದು, ಈ ಕಾರಣಕ್ಕೆ ಅದನ್ನು ಚರ್ಚಿಸದೇ ಮುಂದೂಡಲಾಗಿದೆ ಎಂದು
ತಿಳಿದು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ