ಸಿದ್ದು ಸರ್ಕಾರದ ಪಶುಭಾಗ್ಯಕ್ಕೆ ಪಕ್ಷಾತೀತ ಬೇಡಿಕೆ

Team Udayavani, Jan 29, 2020, 3:10 AM IST

siddu-sarka

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಜನಪ್ರಿಯ ಪಶುಭಾಗ್ಯ ಯೋಜನೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಬೇಡಿಕೆ ಹೆಚ್ಚಿದ್ದು, ಪಕ್ಷ ಬೇಧ ಮರೆತು ಶಾಸಕರು ಈ ಯೋಜನೆಯ ಬೆನ್ನು ಬಿದ್ದಿದ್ದಾರೆ.

ಸಿದ್ದರಾಮಯ್ಯ ಅವಧಿಯಲ್ಲಿ ಕೃಷಿ ಕೂಲಿ ಕಾರ್ಮಿಕರು ಹಾಗೂ ಸಣ್ಣ ರೈತರಿಗೆ ಕೃಷಿಯೊಂದಿಗೆ ಉಪ ಕಸುಬಾಗಿ ಕೈಗೊಳ್ಳಲು ಪಶು ಭಾಗ್ಯ ಯೋಜನೆ ಜಾರಿಗೊಳಿಸಲಾಗಿತ್ತು. ಈ ಯೋಜನೆಯನ್ನು ರಾಜ್ಯದ 30 ಜಿಲ್ಲೆಗಳಲ್ಲಿ ಬೆಂಗಳೂರಿನ 18 ವಿಧಾನ ಸಭಾ ಕ್ಷೇತ್ರಗಳನ್ನು ಹೊರತು ಪಡಿಸಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಹೊಂದಿರುವ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ.

ಪಕ್ಷಬೇಧ ಮರೆತು ಬೇಡಿಕೆ: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪಶುಭಾಗ್ಯ ಯೋಜನೆಯನ್ನು ಜಾರಿಗೆ ತರಲಾ ಗಿದ್ದರೂ, ಈ ಯೋಜನೆಯ ಬಗ್ಗೆ ಎಲ್ಲ ಕ್ಷೇತ್ರ ಗಳಲ್ಲಿಯೂ ಬೇಡಿಕೆ ಹೆಚ್ಚಿದೆ. ಸಾಮಾನ್ಯ ಬಡ ಕೂಲಿ ಕಾರ್ಮಿಕರು ಹಾಗೂ ಸಣ್ಣ ಹಿಡುವಳಿದಾರರು ಕೃಷಿ ಯೊಂದಿಗೆ ಉಪ ಕಸುಬಾಗಿ ಈ ಯೋಜನೆ ಕೈಗೆತ್ತಿ ಕೊಳ್ಳಲು ಉಪಯುಕ್ತ ವಾಗಿರುವುದರಿಂದ ಜನರಿಂದ ಹೆಚ್ಚು ಬೇಡಿಕೆ ಇದೆ.

ಕ್ಷೇತ್ರದ ಜನರ ಬೇಡಿಕೆಗೆ ತಕ್ಕಂತೆ ಯೋಜನೆ ತಲುಪಿಸಲು ಶಾಸಕರು ಹೆಚ್ಚಿನ ಪ್ರಮಾಣದಲ್ಲಿ ಫ‌ಲಾನುಭವಿಗಳ ಆಯ್ಕೆಗೆ ಅವಕಾಶ ಕಲ್ಪಿಸುವಂತೆ ಪಶು ಸಂಗೋಪನಾ ಸಚಿವರ ಮೇಲೆ ಒತ್ತಡ ಹೇರುತ್ತಿದ್ದಾರೆಂದು ತಿಳಿದು ಬಂದಿದೆ. ಶಾಸಕರ ಈ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಳ್ಳಲು ಪಶು ಸಂಗೋಪನಾ ಸಚಿವರು ನಿರ್ಧರಿಸಿದ್ದಾರೆ.

ಅನುದಾನದ ಕೊರತೆ: ಪಶು ಭಾಗ್ಯ ಯೋಜನೆ ನೀರೀಕ್ಷಿತ ಮಟ್ಟದಲ್ಲಿ ಜನರಿಗೆ ತಲುಪಿಲ್ಲ ಮತ್ತು ಉತ್ತಮ ಯೋಜನೆಯಾಗಿರುವುದರಿಂದ ಹೆಚ್ಚಿನ ಜನರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಯೋಜನಾ ಮಂಡಳಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ, ಸರ್ಕಾರಕ್ಕೆ ಬೇಡಿಕೆಗೆ ತಕ್ಕಂತೆ ಯೋಜನೆಯನ್ನು ಅನುಷ್ಠಾನಗೊಳಿಸಲು ಹಣಕಾಸಿನ ಕೊರತೆ ಎದುರಾಗಿದೆ.

ಪ್ರತಿ ವರ್ಷ ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ದಿಂದ ಸುಮಾರು 2 ರಿಂದ 3 ಸಾವಿರ ಫ‌ಲಾನುಭವಿಗಳಿಂದ ಬೇಡಿಕೆ ಬರುತ್ತಿದೆ. ಆದರೆ, ಇಡೀ ರಾಜ್ಯದಲ್ಲಿ ವಾರ್ಷಿಕ ಸುಮಾರು 5 ರಿಂದ 6 ಸಾವಿರ ಫ‌ಲಾನುಭವಿಗಳಿಗೆ ವಿಧಾನಸಭಾವಾರು ಆಯ್ಕೆ ಮಾಡಿ ಹಂಚಿಕೆ ಮಾಡಲಾಗುತ್ತದೆ. ಈ ಯೋಜನೆಗೆ ಬಜೆಟ್‌ನಲ್ಲಿ ಕೇವಲ 17 ಕೋಟಿ ರೂ.ಮಾತ್ರ ಮೀಸಲಿಡಲಾಗಿದೆ. ಇದರಿಂದ ಬೇಡಿಕೆಗೆ ತಕ್ಕಷ್ಟು ಫ‌ಲಾನುಭವಿಗಳಿಗೆ ಯೋಜನೆಯನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಏನಿದು ಯೋಜನೆ?: ಪಶು ಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಫ‌ಲಾನುಭವಿಗಳ ಆಯ್ಕೆಗೆ ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸ ಲಾಗುತ್ತದೆ. ಆ ಸಮಿತಿಯಲ್ಲಿ ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫ‌ಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫ‌ಲಾನುಭವಿಗಳಿಗೆ 60 ಸಾವಿರ ರೂ. ಬ್ಯಾಂಕ್‌ಗಳ ಮೂಲಕ ಸಾಲ ಒದಗಿಸಲಾಗುತ್ತದೆ.

ಸಾಮಾನ್ಯ ವರ್ಗದ ಫ‌ಲಾನುಭವಿಗಳಿಗೆ ಶೇ.50 ರಷ್ಟು ರಿಯಾಯ್ತಿ ನೀಡಲಾಗುತ್ತದೆ. ಎಸ್ಸಿ ಹಾಗೂ ಎಸ್ಟಿ ಸಮುದಾಯದ ಫ‌ಲಾನುಭವಿಗಳಿಗೆ ಶೇ. 90ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಆಯ್ಕೆಯಾದ ಫ‌ಲಾನುಭವಿ ಈ ಯೋಜನೆ ಅಡಿಯಲ್ಲಿ ಹಸು, ಕುರಿ, ಮೇಕೆ, ಹಂದಿ ಖರೀದಿ ಮಾಡಲು ಅವಕಾಶವಿದೆ. ಕಳೆದ ಐದು ವರ್ಷದಲ್ಲಿ ಪಶು ಪಾಲನಾ ಇಲಾಖೆಯಲ್ಲಿ ಯಾವುದಾದರೂ ಸವಲತ್ತು ಪಡೆದಿದ್ದರೆ, ಪಶು ಭಾಗ್ಯ ಯೋಜನೆ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ.

ಎಸ್ಸಿಪಿ ಟಿಎಸ್‌ಪಿ ಹಣ ವರ್ಗಾವಣೆಗೆ ಪತ್ರ: ಪಶು ಭಾಗ್ಯ ಯೋಜನೆ ಅಡಿಯಲ್ಲಿ ಎಸ್‌ಟಿಪಿ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಮೀಸಲಿಟ್ಟ ಹಣ ಖರ್ಚಾಗದೇ ಇರುವುದರಿಂದ, ಯೋಜನೆಗೆ ಮೀಸಲಿಟ್ಟ ಹಣ ವ್ಯರ್ಥವಾಗುತ್ತಿರುವುದರಿಂದ ಆ ಹಣವನ್ನು ಸಾಮಾನ್ಯ ವರ್ಗದವರಿಗೆ ಇದೇ ಯೋಜನೆ ಅಡಿಯಲ್ಲಿ ಅನದಾನ ಹಂಚಿಕೆ ಮಾಡಲು ಎಸ್‌ಟಿಪಿ ಟಿಎಸ್‌ಪಿ ಹಣವನ್ನು ವರ್ಗಾಯಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರಿಗೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಪಶುಭಾಗ್ಯ ಯೋಜನೆಗೆ ಹೆಚ್ಚಿನ ಬೇಡಿಕೆ ಇದೆ. ಶಾಸಕರು ಈ ಯೋಜನೆಯ ಬಗ್ಗೆ ಒಲವು ಹೊಂದಿದ್ದು, ಹೆಚ್ಚು ಫ‌ಲಾನುಭವಿಗಳನ್ನು ಒದಗಿಸುವಂತೆ ಕೋರಿಕೆ ಸಲ್ಲಿಸಿದ್ದಾರೆ. ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಬೇಡಿಕೆ ಇಡಲಾಗುವುದು. ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
-ಪ್ರಭು ಚೌವ್ಹಾಣ್‌, ಪಶು ಸಂಗೋಪನೆ ಮತ್ತು ಹಜ್‌ ಸಚಿವ

* ಶಂಕರ ಪಾಗೋಜಿ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.