Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ
Team Udayavani, Apr 17, 2024, 10:04 PM IST
ಉಪ್ಪಿನಂಗಡಿ: ಟ್ಯಾಂಕರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮಗು ಸಹಿತ ದಂಪತಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ಎ.17ರಂದು ನಡೆದಿದೆ.
ದ್ವಿಚಕ್ರ ವಾಹನದಲ್ಲಿದ್ದ ಸರಳೀಕಟ್ಟೆಯ ಉರ್ಲಡ್ಕ ನಿವಾಸಿಗಳಾದ ಮುಹಮ್ಮದ್ ಶರೀಫ್, ಅವರ ಪತ್ನಿ ಆಯೀಷಾ ತಸ್ಲಿàಮಾ ಹಾಗೂ ಮಗು ಮುಹಮ್ಮದ್ ರಫೀ ಗಾಯಗೊಂಡವರು. ಮುಹಮ್ಮದ್ ಶರೀಫ್ ಅವರ ಕಾಲಿಗೆ ಹಾಗೂ ಆಯೀಷಾ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಮಗು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದೆ.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 34 ನೆಕ್ಕಿಲಾಡಿಯ ಫ್ಲೈಓವರ್ ಬಳಿ ಈ ಅಪಘಾತ ಸಂಭವಿಸಿದ್ದು, ವಾಹನವೊಂದನ್ನು ಓವರ್ಟೇಕ್ ಮಾಡಿಕೊಂಡು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಎದುರಿನಿಂದ ಬಂದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತ ನಡೆದ ಬಳಿಕ ಚಾಲಕ ಓಡಲು ಯತ್ನಿಸಿದಾಗ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ