ಅತೃಪ್ತರ ಅನರ್ಹಗೊಳಿಸಲು ಶಾಸಕರ ಆಗ್ರಹ
Team Udayavani, Jul 16, 2019, 3:09 AM IST
ಬೆಂಗಳೂರು: ಸರ್ಕಾರದ ವಿರುದ್ಧ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕರನ್ನು ಅನರ್ಹಗೊಳಿಸಿ ಒಂದು ಪಾಠ ಕಲಿಸುವಂತೆ ಕಾಂಗ್ರೆಸ್ ಶಾಸಕರು ಪಕ್ಷದ ನಾಯಕರಿಗೆ ಒತ್ತಡ ಹೇರಿದ್ದಾರೆ. ಆದರೆ, ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳುವ ವಿಶ್ವಾಸವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಹೊಟೇಲ್ ತಾಜ್ ವಿವಾಂತ್‌ದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಹುತೇಕ ಶಾಸಕರು ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
ಸರ್ಕಾರ ಹೋದರೂ ಚಿಂತೆಯಿಲ್ಲ. ಒಂದು ಪಕ್ಷದಿಂದ ಆಯ್ಕೆಯಾಗಿ ಅಧಿಕಾರದ ಆಸೆಗಾಗಿ ಬೇರೆ ಪಕ್ಷಕ್ಕೆ ಹೋಗಲು ತೀರ್ಮಾನಿಸಿರುವ ಎಲ್ಲ ಶಾಸಕರ ಶಾಸಕತ್ವದಿಂದ ಅನರ್ಹಗೊಳಿಸಿದರೆ, ಮುಂದಿನ ದಿನಗಳಲ್ಲಿ ಈ ರೀತಿಯ ಚಟುವಟಿಕೆ ಮಾಡುವವರಿಗೆ ಒಂದು ಪಾಠವಾಗುತ್ತದೆಂದು ಶಾಸಕರು ಒಕ್ಕೊರಲಿನಿಂದ ಸಿದ್ದರಾಮಯ್ಯ ಸೇರಿ ಪಕ್ಷದ ನಾಯಕರಿಗೆ ಆಗ್ರಹಿಸಿದ್ದಾರೆ.
ಇಷ್ಟೊಂದು ಶಾಸಕರು ರಾಜೀನಾಮೆ ಸಲ್ಲಿಸಿ ಮುಂಬೈಗೆ ತೆರಳಿರುವುದರಿಂದ ಸಾರ್ವಜನಿಕವಾಗಿ ಶಾಸಕರಿಗೆ ಮರ್ಯಾದೆ ಇಲ್ಲದಂತಾಗಿದೆ. ಜನರು ಎಲ್ಲ ಶಾಸಕರನ್ನು ಅನುಮಾನದಿಂದ ನೋಡುವಂತಾಗಿದೆ. ಮಾಧ್ಯಮಗಳಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಎಂದು ಮೇಲಿಂದ ಮೇಲೆ ಹೆಸರನ್ನು ತೋರಿಸುವುದರಿಂದ ಕ್ಷೇತ್ರಗಳಲ್ಲಿಯೂ ಜನರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡದಂತಾಗಿದೆ ಎಂಬ ಬೇಸರವನ್ನು ಬಹುತೇಕ ಶಾಸಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಅತೃಪ್ತರು ರಾಜೀನಾಮೆ ನೀಡಿದ್ದಾರೆಂದು ನಾವು ಹೊಟೇಲ್‌ನಲ್ಲಿ ಬಂದು ಉಳಿದುಕೊಂಡರೆ ನಮ್ಮ ಕ್ಷೇತ್ರದ ಜನತೆಯೂ ನಮ್ಮ ಬಗ್ಗೆ ತಪ್ಪಾಗಿ ತಿಳಿದುಕೊಳ್ಳುತ್ತಾರೆ. ಅವರ ಅನುಮಾನಗಳಿಗೆ ಉತ್ತರ ನೀಡುವುದೇ ದೊಡ್ಡ ಸಮಸ್ಯೆಯಾಗಲಿದೆ. ಆದಷ್ಟು ಬೇಗ ಅತೃಪ್ತರನ್ನು ಅನರ್ಹಗೊಳಿಸಿ ಗೊಂದಲಕ್ಕೆ ತೆರೆ ಎಳೆಯುವಂತೆ ಆಗ್ರಹಿಸಿದ್ದಾರೆಂದು ತಿಳಿದು ಬಂದಿದೆ.
ಅತೃಪ್ತರನ್ನು ಅನರ್ಹಗೊಳಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ನಮ್ಮನ್ನೂ ಏನೂ ಕೇಳಬೇಡಿ ಎಂದು ಕೆಲವು ಶಾಸಕರು ನಾಯಕರಿಗೆ ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆಂದು ತಿಳಿದು ಬಂದಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತ್ರ ಸರ್ಕಾರ ಉಳಿಸಿಕೊಳ್ಳುವ ಭರವಸೆ ನೀಡಿದ್ದು, ಅಲ್ಲಿಯವರೆಗೂ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಸರ್ಕಾರ ಉಳಿಸಲು ಎಲ್ಲರೂ ಪ್ರಯತ್ನ ಮಾಡುತ್ತಿದ್ದೇವೆ. ಸರ್ಕಾರ ಉಳಿಯುತ್ತದೆಯೋ ಉರುಳುತ್ತದೆಯೋ ಗೊತ್ತಿಲ್ಲ. ನೀವು ಅದರ ಬಗ್ಗೆ ಚಿಂತೆ ಬಿಟ್ಟು ಬಿಡಿ, ಈಗ ರಾಜೀನಾಮೆ ಕೊಟ್ಟು ಹೋದವರ ಬಗ್ಗೆ ಚಿಂತೆ ಮಾಡಬೇಡಿ, ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಿ, ಮುಂದೆ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಎಸ್‌ಬಿಎಂ ಬಗ್ಗೆ ಬೇಸರ: ಇದೇ ವೇಳೆ, ಏಕಾಏಕಿ ರಾಜೀನಾಮೆ ಸಲ್ಲಿಸಿ ಮುಂಬೈಗೆ ಹಾರಿರುವ ಬೆಂಗಳೂರಿನ ಶಾಸಕರಾದ ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜ್ ಹಾಗೂ ಮುನಿರತ್ನ ಬಗ್ಗೆ ಸಿದ್ದರಾಮಯ್ಯ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನನ್ನ ಅಧಿಕಾರಾವಧಿಯಲ್ಲಿ ಅವರು ಕೇಳಿದ್ದೆಲ್ಲವನ್ನೂ ಮಾಡಿಕೊಟ್ಟಿದ್ದೇನೆ. ಅವರು ತರುವ ಫೈಲ್‌ಗಳಲ್ಲಿ ಏನಿದೆ ಎಂದೂ ನೋಡದೆ ಸಹಿ ಮಾಡಿಕೊಟ್ಟಿದ್ದೇನೆ. ಅಷ್ಟೊಂದು ಕೆಲಸ ಮಾಡಿಸಿಕೊಂಡು ಏಕಾಏಕಿ ಈ ರೀತಿ ಪಕ್ಷ ಬಿಟ್ಟು ಹೋದರೆ, ಯಾರನ್ನು ನಂಬುವುದು ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಮಧ್ಯಂತರ ಚುನಾವಣೆ ಭಯ ಬೇಡ: ಸರ್ಕಾರ ರಕ್ಷಣೆಯ ಕಸರತ್ತು ಮುಂದುವರಿಸಿರುವ ಕಾಂಗ್ರೆಸ್ ನಾಯಕರು ಶಾಸಕರಿಗೆ ಮಧ್ಯಂತರ ಚುನಾವಣೆಯ ಭಯ ಬೇಡ ಎಂಬ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ, ಮೈತ್ರಿ ಸರ್ಕಾರ ಪತನವಾದರೂ ಬಿಜೆಪಿಗೆ ಅಧಿಕಾರ ನಡೆಸಲು ಅವಕಾಶ ಕೊಟ್ಟು ಪ್ರತಿಪಕ್ಷದಲ್ಲಿ ಕೂಡಲು ಮಾನಸಿಕವಾಗಿ ಸಿದ್ದರಾಗಿರುವುದನ್ನು ಪರೋಕ್ಷವಾಗಿ ಸೂಚನೆಯನ್ನೂ ನೀಡಿದ್ದಾರೆ ಎನ್ನಲಾಗಿದೆ. ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುವಂತೆ ಸೂಚನೆ ನೀಡಿರುವ ಸಿದ್ದರಾಮಯ್ಯ, ಬೇರೆ ಶಾಸಕರನ್ನು ನೋಡಿ ಯಾರೂ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಯಾರನ್ನೂ ನಂಬದಂತಹ ಸ್ಥಿತಿ ನಿರ್ಮಾಣ: ತಾವು ಅತ್ಯಂತ ನಂಬಿಕೆ ಇಟ್ಟಿದ್ದ ಬೆಂಗಳೂರಿನ ಮೂವರು ಶಾಸಕರು ತಮಗೆ ಕೈ ಕೊಟ್ಟಿರುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ಬೇಸರ ವ್ಯಕ್ತಪಡಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ, ನನ್ನ ಪಕ್ಕದಲ್ಲಿ ಕುಳಿತಿರುವ ಪರಮೇಶ್ವರ್ ನಾಳೆ ಬಿಜೆಪಿಗೆ ಹೋದರೂ ಆಶ್ಚರ್ಯ ಪಡುವಂತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಮಾತಿನಿಂದ ದಂಗಾಗಿ ತಕ್ಷಣ ಪರಮೇಶ್ವರ್ ಅಯ್ಯೋ ಸರ್ ಎಂದು ಎದ್ದು ನಿಂತರು ಎಂದು ತಿಳಿದು ಬಂದಿದೆ. ಆದರೂ, ಸಿದ್ದರಾಮಯ್ಯ ತಮ್ಮ ಮಾತು ಮುಂದುವರಿಸಿ, ಈಗಿನ ಪರಿಸ್ಥಿತಿ ಹಾಗೆ ಆಗಿದೆ. ಯಾರನ್ನೂ ನಂಬದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೆಡಿಕಲ್ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಮರಳುವುದೇ ಅವಳಿ ಕೆರೆಗಳ ಗತವೈಭವ? ಕೆರೆಗಳ ಸುತ್ತಲ ಸಮಸ್ಯೆಗಳಿಗೆ ಸಿಗಬೇಕಿದೆ ಸೂಕ್ತ ಪರಿಹಾರ
ಬೆಂ. ಗ್ರಾಮಾಂತರ ಉಸ್ತುವಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ: ಎಂಟಿಬಿ ನಾಗರಾಜ್
ಉತ್ತರಪತ್ರಿಕೆ ಮರುಎಣಿಕೆ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಮೆಡಿಕಲ್ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ
ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್
ಗಣರಾಜ್ಯೋತ್ಸವ: ಟ್ರ್ಯಾಕ್ಟರ್ ರಾಲಿ ವೇಳೆ ಐಎಸ್ಐ, ಖಾಲಿಸ್ತಾನ್ ವಿಧ್ವಂಸಕ ಕೃತ್ಯಕ್ಕೆ ಸಂಚು?
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಪರಾಕ್ರಮ್ ದಿವಸ್ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಹೆಚ್ಚು ಆಹ್ವಾನ : ತೃಣಮೂಲ ಆರೋಪ