ಪಾಕಿಸ್ಥಾನ ಪ್ರವಾಸಕ್ಕೆ ಉಸ್ಮಾನ್ ಖ್ವಾಜಾ
Team Udayavani, Feb 9, 2022, 6:40 AM IST
ಬ್ರಿಸ್ಬೇನ್: ಆಸ್ಟ್ರೇಲಿಯ ಕ್ರಿಕೆಟ್ ತಂಡ ಬರೋಬ್ಬರಿ 24 ವರ್ಷಗಳ ಬಳಿಕ ಪಾಕಿಸ್ಥಾನ ಪ್ರವಾಸ ಕೈಗೊಳ್ಳಲಿದೆ.
ಇದಕ್ಕಾಗಿ ಮಂಗಳವಾರ ಪ್ರಕಟಿಸಲಾದ ತಂಡದಲ್ಲಿ ಪಾಕಿಸ್ಥಾನ ಮೂಲದವರೇ ಆಗಿರುವ ಬ್ಯಾಟರ್ ಉಸ್ಮಾನ್ ಖ್ವಾಜಾ ಸ್ಥಾನ ಪಡೆದಿದ್ದಾರೆ. ಆದರೆ ತಂದೆಯಾಗುವ ನಿರೀಕ್ಷೆಯಲ್ಲಿರುವ ಖ್ವಾಜಾ ಈ ಪ್ರವಾಸವನ್ನು ಇನ್ನೂ ಖಚಿತಪಡಿಸಿಲ್ಲ.
ತಂಡದ ಪ್ರಧಾನ ಕೋಚ್ ಹುದ್ದೆಗೆ ಜಸ್ಟಿನ್ ಲ್ಯಾಂಗರ್ ದಿಢೀರ್ ರಾಜೀನಾಮೆ ಸಲ್ಲಿಸಿದ 3 ದಿನಗಳ ಬಳಿಕ ತಂಡ ಪ್ರಕಟಗೊಂಡಿದೆ. ಸರಣಿಯಲ್ಲಿ 3 ಟೆಸ್ಟ್ ಪಂದ್ಯಗಳನ್ನು ಆಡಲಾಗುವುದು. ಮೊದಲ ಟೆಸ್ಟ್ ಮಾ. 4ರಂದು ರಾವಲ್ಪಿಂಡಿಯಲ್ಲಿ ಆರಂಭವಾಗಲಿದೆ.
ಆ್ಯಶಸ್ ಸರಣಿ ವೇಳೆ ಕೈಬಿಡಲ್ಪಟ್ಟಿದ್ದ ಆರಂಭಕಾರ ಮಾರ್ಕಸ್ ಹ್ಯಾರಿಸ್, ಗಾಯಾಳಾಗಿ ಹೊರಗುಳಿದಿದ್ದ ವೇಗಿ ಜೋಶ್ ಹ್ಯಾಝಲ್ವುಡ್ ಪಾಕ್ ಆಯ್ಕೆಯಾಗಿದ್ದಾರೆ. ನಥನ್ ಲಿಯೋನ್, ಆ್ಯಶrನ್ ಅಗರ್ ಮತ್ತು ಮಿಚೆಲ್ ಸ್ವೆಪ್ಸನ್ ಸ್ಪಿನ್ ವಿಭಾಗದ ಸದಸ್ಯರಾಗಿದ್ದಾರೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್ ಗೆಲುವಿನ ಆಟ
ಆಸ್ಟ್ರೇಲಿಯ ತಂಡ
ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರ್ಯಾವಿಸ್ ಹೆಡ್, ಕ್ಯಾಮರಾನ್ ಗ್ರೀನ್, ಆಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ನಥನ್ ಲಿಯೋನ್, ಮಿಚೆಲ್ ಮಾರ್ಷ್, ಮೈಕಲ್ ನೆಸೆರ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ