ಖೇಲ್ರತ್ನಕ್ಕೆ ವಿನೇಶ್ ಪೋಗಟ್ ಹೆಸರು
Team Udayavani, Jun 1, 2020, 5:44 AM IST
ಹೊಸದಿಲ್ಲಿ: ವಿಶ್ವ ಚಾಂಪಿಯನ್ಶಿಪ್ ಕಂಚಿನ ಪದಕ ವಿಜೇತೆ ಕುಸ್ತಿಪಟು ವಿನೇಶ್ ಪೋಗಟ್ ಹೆಸರನ್ನು ಪ್ರತಿಷ್ಠಿತ ಖೇಲ್ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗುವುದು ಎಂದು ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಕಾರ್ಯದರ್ಶಿ ವಿನೋದ್ ತೋಮರ್ ಹೇಳಿದ್ದಾರೆ. ಹಾಗೆಯೇ ಸಾಕ್ಷಿ ಮಲಿಕ್ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಅವರು ತಿಳಿಸಿದರು.
ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಏಕಮಾತ್ರ ವನಿತಾ ಕುಸ್ತಿಪಟು ಆಗಿರುವ ವಿನೇಶ್ ಪೋಗಟ್ ಹೆಸರನ್ನು ಕಳೆದ ವರ್ಷವೂ ಖೇಲ್ರತ್ನಕ್ಕೆ ಸೂಚಿಸಲಾಗಿತ್ತು. ಆದರೆ ಇದು ಒಲಿದಿರಲಿಲ್ಲ. ಸತತ 3 ವರ್ಷಗಳಿಂದ ಸ್ಥಿರ ಪ್ರದರ್ಶನ ನೀಡುತ್ತ ಬಂದಿರುವ ವಿನೇಶ್ ಜಕಾರ್ತಾ ಏಶ್ಯಾಡ್ನಲ್ಲಿ ಚಿನ್ನದ ಪದಕ ಜಯಿಸಿದ್ದರು. ಈ ವರ್ಷದ ಏಶ್ಯನ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಒಲಿದಿತ್ತು.
ಸಾಕ್ಷಿ ಮಲಿಕ್ 2016ರಲ್ಲಿ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಮತ್ತು ಶೂಟರ್ ಜಿತು ರೈ ಅವರೊಂದಿಗೆ ಜಂಟಿಯಾಗಿ ಖೇಲ್ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು