ಸಂಚಾರ ನಿಯಮ ಉಲ್ಲಂಘನೆ: ಶೇ. 50ರ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ
Team Udayavani, Aug 10, 2023, 12:23 AM IST
ಮಡಿಕೇರಿ: ಸಾರಿಗೆ ಮತ್ತು ರಸ್ತೆ ಸುರಕ್ಷೆ ಆಯುಕ್ತಾಲಯದ ಮನವಿಯಂತೆ ಉಚ್ಚನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ರಿಯಾಯಿತಿಯು ಸೆ. 9ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್ ತಿಳಿಸಿದ್ದಾರೆ.