Bangla: ಬಾಂಗ್ಲಾದಲ್ಲಿ ಹಿಂಸಾಚಾರ: 3 ಬಲಿ
Team Udayavani, Oct 29, 2023, 9:51 PM IST
ಢಾಕಾ: ಬಾಂಗ್ಲಾದೇಶದಲ್ಲಿ ಪ್ರತಿಪಕ್ಷ ಬಾಂಗ್ಲದೇಶ್ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್ಪಿ) ಹಾಗೂ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ಭಾನುವಾರ ನಡೆದ ಘರ್ಷಣೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇದೇ ವೇಳೆ ಬಿಎನ್ಪಿ ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಅವರನ್ನು ಬಾಂಗ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬರುವ ಜನವರಿಯಲ್ಲಿ ಬಾಂಗ್ಲಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾ ಮಾಜಿ ಪ್ರಧಾನಿ ಖಲೇದಾ ಜಿಯಾ ನೇತೃತ್ವದ ಬಿಎನ್ಪಿ ಪಕ್ಷವು ಶನಿವಾರ ಬೃಹತ್ ರ್ಯಾಲಿ ಹಮ್ಮಿಕೊಂಡಿತ್ತು. ಆದರೆ ಪೊಲೀಸರ ಮಧ್ಯಪ್ರವೇಶದಿಂದ ರ್ಯಾಲಿಯನ್ನು ಅರ್ಧಕ್ಕೆ ಮೊಟಕುಗೊಳಿಸಬೇಕಾಯಿತು. ಇದನ್ನು ಖಂಡಿಸಿ ಭಾನುವಾರ ಬಾಂಗ್ಲಾದ್ಯಂತ ಬಿಎನ್ಪಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಹಾಸ ಪಡುತ್ತಿದ್ದಾರೆ.