ಹಿಡಕಲ್‌ ಜಲಾಶಯದಲ್ಲಿ ಕುಡಿವ ನೀರಿಗಿಲ್ಲ ಚಿಂತೆ


Team Udayavani, May 14, 2019, 3:07 AM IST

hidakal

ಬೆಳಗಾವಿ: ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗೆ ಕುಡಿಯಲು ಹಾಗೂ ನೀರಾವರಿಗೆ ನೀರು ಪೂರೈಸುವ ಹಿಡಕಲ್‌ ಜಲಾಶಯದಲ್ಲಿ ತೃಪ್ತಿಪಡುವಷ್ಟು ನೀರಿನ ಸಂಗ್ರಹವಿಲ್ಲ. ಆದರೆ ಜೂನ್‌ವರೆಗೆ ಕುಡಿಯುವ ನೀರು ಪೂರೈಸಲು ಯಾವುದೇ ಸಮಸ್ಯೆ ಇಲ್ಲ.

ಇದು ಹಿಡಕಲ್‌ ಜಲಾಶಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ಅಭಯ. ಈಗಿರುವ ಸ್ಥಿತಿಯಲ್ಲಿ ಜಲಾಶಯದಿಂದ ಕುಡಿಯುವ ನೀರು ಸರಬರಾಜಿಗೆ ಯಾವುದೇ ಅಡ್ಡಿ ಇಲ್ಲ. ಮೇ ತಿಂಗಳಲ್ಲಿ ಉತ್ತಮ ಮಳೆಯಾದರೆ ಜಲಾಶಯಕ್ಕೆ ಇನ್ನಷ್ಟು ನೀರು ಬರಬಹುದು ಎಂಬುದು ಅಧಿಕಾರಿಗಳ ವಿಶ್ವಾಸ.

ಹುಕ್ಕೇರಿ ತಾಲೂಕಿನ ಹಿಡಕಲ್‌ ಬಳಿ ಘಟಪ್ರಭಾ ನದಿಗೆ ಕಟ್ಟಿರುವ ಹಿಡಕಲ್‌ ಜಲಾಶಯ ಒಟ್ಟು 51 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 7 ಟಿಎಂಸಿ ಅಡಿ ಹಾಗೂ ಬಾಕಿ ಉಳಿದ 44 ಟಿಎಂಸಿ ಅಡಿ ನೀರನ್ನು ನೀರಾವರಿಗೆ ಬಳಸಲಾಗುತ್ತಿದೆ. ಬೆಳಗಾವಿ ಹಾಗೂ ಬಾಗಲಕೊಟೆ ಜಿಲ್ಲೆಗಳ ಕುಡಿಯುವ ನೀರು ಹಾಗೂ ನೀರಾವರಿಗೆ ಇದು ಪ್ರಮುಖ ಆಸರೆ.

ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದ ಕಡೆಯಿಂದ ಕರ್ನಾಟಕಕ್ಕೆ ಬರುವ ಈ ನದಿ ತುಂಬಿಕೊಂಡಾಗ ಬಹಳ ಆಕರ್ಷಕವಾಗಿ ಕಾಣುತ್ತದೆ. ಬಹುತೇಕ ಅರಣ್ಯ ಪ್ರದೇಶವೇ ಜಲಾನಯನ ಪ್ರದೇಶವಾಗಿರುವ ಕಾರಣ ಜಲಾಶಯಕ್ಕೆ ಹೂಳಿನ ಆತಂಕ ಇದುವರೆಗೆ ಕಾಡಿಲ್ಲ. 10 ವರ್ಷಗಳ ಹಿಂದೆ ಸಮೀಕ್ಷೆ ಮಾಡಿಸಿದಾಗ ಜಲಾಶಯದಲ್ಲಿ ಆತಂಕ ಪಡುವಷ್ಟು ಹೂಳಿನ ಅಂಶ ಕಂಡುಬಂದಿರಲಿಲ್ಲ.

ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಒಟ್ಟು 3.51 ಲಕ್ಷ ಹೆಕ್ಟೇರ್‌ ಭೂಮಿಗೆ ನೀರು ಉಣಿಸುವ ಜಲಾಶಯ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಮುಖ್ಯ ಕಾಲುವೆಗಳನ್ನು ಹೊಂದಿದೆ. ಇದಲ್ಲದೇ ಚಿಕ್ಕೋಡಿ, ನಿಪ್ಪಾಣಿ, ಕೌಜಲಗಿ, ಮಮದಾಪುರ ಭಾಗಗಳಲ್ಲಿ ಬಲದಂಡೆ ಉಪಕಾಲುವೆ, ಘಟಪ್ರಭಾ, ರಾಯಬಾಗ, ಕುಡಚಿ, ಜಮಖಂಡಿ, ರಬಕವಿ, ಮಹಾಲಿಂಗಪುರ ಪ್ರದೇಶಗಳಲ್ಲಿ ಎಡದಂಡೆ ಉಪಕಾಲುವೆಗಳಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಜಲಾಶಯದಲ್ಲಿ ಸುಮಾರು 2 ಟಿಎಂಸಿ ಅಡಿ ನೀರು ಕಡಿಮೆಯಿದೆ. 2018ರಲ್ಲಿ ಜಲಾಶಯದಲ್ಲಿ ಈ ವೇಳೆಗೆ ಬಳಸಲು ಯೋಗ್ಯವಾದ 6.04 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಈ ವರ್ಷ ಇದೇ ಅವಧಿಗೆ ಜಲಾಶಯದಲ್ಲಿ 4.28 ಟಿಎಂಸಿ ಅಡಿ ನೀರು ಉಳಿದುಕೊಂಡಿದೆ.

ಈ ಬಾರಿ ಬಿಸಿಲಿನ ಪ್ರಖರತೆ ಹಾಗೂ ಭೀಕರ ಬರಗಾಲ ಎದುರಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ನೀರಾವರಿಗೆ ನೀರು ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ. ಜೂನ್‌ವರೆಗೆ ಎರಡೂ ಜಿಲ್ಲೆಗಳಿಗೆ ಯಾವ ತೊಂದರೆಯೂ ಆಗದು ಎಂದು ಅಧಿಕಾರಿಗಳು ಹೇಳುತ್ತಾರೆ.

ಪ್ರಾದೇಶಿಕ ಆಯುಕ್ತರ ಆದೇಶದಂತೆ ಮಾತ್ರ ಕುಡಿಯಲು ನೀರು ಬಿಡುಗಡೆ ಮಾಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಗೆ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ 2 ಟಿಎಂಸಿ ಅಡಿ ನೀರು ಬಿಡಲಾಗಿದೆ. ಹೀಗಾಗಿ ಅಲ್ಲಿಯೂ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂಬುದು ಅಧಿಕಾರಿಗಳ ಹೇಳಿಕೆ.

ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಲಕ್ಷಾಂತರ ಎಕರೆ ಪ್ರದೇಶದ ನೀರಾವರಿಗೆ ಈ ಜಲಾಶಯವೇ ಮುಖ್ಯ ಆಸರೆ. ಜಲಾಶಯ ನಿರ್ಮಾಣವಾದ ನಂತರ ನಾಲ್ಕೈದು ಬಾರಿ ಹೊರತುಪಡಿಸಿ ಉಳಿದ ಯಾವ ಅವಧಿಯಲ್ಲೂ ಕುಡಿಯಲು ಹಾಗೂ ನೀರಾವರಿಗೆ ನೀರು ಕೊಡುವಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಜಲಾಶಯ ಸಹ ಭರ್ತಿಯಾಗಿದೆ.
-ಎಸ್‌.ಎಂ. ಮಾಡಿವಾಲೆ, ಸಹಾಯಕ ಇಂಜಿನಿಯರ್‌, ಹಿಡಕಲ್‌ ಜಲಾಶಯ

* ಕೇಶವ ಆದಿ

ಟಾಪ್ ನ್ಯೂಸ್

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.