ವಾರಾಂತ್ಯ ಕರ್ಫ್ಯೂ: ಬಹುತೇಕ ವಾಣಿಜ್ಯ ಚಟುವಟಿಕೆ ಸ್ತಬ್ಧ
Team Udayavani, Jan 16, 2022, 6:05 AM IST
ಉಡುಪಿ: ನಿಟ್ಟೂರು ಬಳಿ ರಾ.ಹೆ.ಯಲ್ಲಿ ಪೊಲೀಸರ ಕಾರ್ಯಾಚರಣೆ
ಮಂಗಳೂರು/ಉಡುಪಿ: ಕರಾವಳಿ ಯಾದ್ಯಂತ ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದು ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶವಿದ್ದ ಹಿನ್ನೆಲೆಯಲ್ಲಿ ಜನಜೀವನ ವ್ಯತ್ಯಯಗೊಂಡಿತ್ತು. ವಾರಾಂತ್ಯ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ.
ವಾರಾಂತ್ಯ ಕರ್ಫ್ಯೂವಿನನ ಮೊದಲ ದಿನವಾದ ಶನಿವಾರ ದಿನಸಿ ಅಂಗಡಿಗಳು, ಮೀನು, ಮಾಂಸ, ತರಕಾರಿ, ಜಾಷಧ ಅಂಗಡಿಗಳು, ಪೆಟ್ರೋಲ್ ಬಂಕ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಮಳಿಗೆಗಳು ಎಂದಿನಂತೆ ಕಾರ್ಯಾಚರಿಸಿದವು. ಹೊಟೇಲ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ ಇತ್ತು. ಆನ್‌ಲೈನ್ ಸೇವೆ ಚಾಲನೆಯಲ್ಲಿತ್ತು. ಸಾರ್ವಜನಿಕ ಉದ್ಯಾನವನ, ಬೀಚ್‌ಗಳನ್ನು ಮುಚ್ಚಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
ಟೂರಿಸ್ಟ್ ವಾಹನಗಳು, ರಿಕ್ಷಾ, ಬಸ್‌ಗಳ ಸಂಚಾರವಿತ್ತು. ಆದರೆ ಜನರ ಓಡಾಟ ಕಡಿಮೆಯಿತ್ತು. ಮಧ್ಯಾಹ್ನದ ಬಳಿಕ ಬಸ್‌ಗಳು ವಿರಳವಾಗಿ ಸಂಚರಿಸಿದವು. ಮದುವೆ, ಧಾರ್ಮಿಕ ಕಾರ್ಯ ಕ್ರಮಗಳು ಅಬಾಧಿತವಾಗಿದ್ದವು.
ಇದನ್ನೂ ಓದಿ:ಮುಷ್ಕರ ಬಿಟ್ಟು ಬೋಧನೆಗೆ ಹಿಂದಿರುಗಿ : ಅತಿಥಿ ಉಪನ್ಯಾಸಕರಿಗೆ ಸಚಿವರ ಮನವಿ
ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ
ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿ ಅನಗತ್ಯವಾಗಿ ಹಾಗೂ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಸಂಚರಿಸುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡರು. ಕಮಿಷನರೆಟ್ ವ್ಯಾಪ್ತಿಯಲ್ಲಿ 30, ಕೇರಳ ಗಡಿ ಸೇರಿದಂತೆ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 31 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಉಡುಪಿ ಜಿಲ್ಲೆಯ 25ಕ್ಕೂ ಅಧಿಕ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ತಪಾಸಣೆ ಕಾರ್ಯ ನಡೆಸುತ್ತಿದ್ದಾರೆ.
2,54,550 ರೂ. ದಂಡ ವಸೂಲಿ
ನಿಯಮ ಉಲ್ಲಂಘನೆಗೆ ಸಂಬಂಧಿಸಿ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಶನಿವಾರ ಮೋಟಾರು ವಾಹನ ಕಾಯ್ದೆಯನ್ವಯ 642 ಪ್ರಕರಣ ಹಾಗೂ ಮಾಸ್ಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ 177 ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 2,54,550 ರೂ. ದಂಡ ವಸೂಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ