ಗೋವಾ ವಿಧಾನಸಭಾ ಚುನಾವಣೆ : ಈ ಬಾರಿ ಮಹಿಳೆಯರೇ ನಿರ್ಣಾಯಕರು

Team Udayavani, Feb 12, 2022, 3:31 PM IST

ಗೋವಾ ವಿಧಾನಸಭಾ ಚುನಾವಣೆ : ಈ ಬಾರಿ ಮಹಿಳೆಯರೇ ನಿರ್ಣಾಯಕರು

ಪಣಜಿ: ಗೋವಾ ರಾಜ್ಯದ 40 ವಿಧಾನಸಭಾ ಚುನಾವಣಾ ಕ್ಷೇತ್ರಗಳ ಪೈಕಿ 35 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಇದರಿಂದಾಗಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರು ನಿರ್ಣಾಯಕರಾಗಿದ್ದಾರೆ. ಫೆ.14 ರಂದು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ.

ಗೋವಾದ ಪೆಡ್ನೆ, ಪೊಂಡಾ, ಮುರಗಾಂವ, ವಾಸ್ಕೊ, ದಾಬೋಲಿಂ, ಕ್ಷೇತ್ರಗಳಲ್ಲಿ ಅತಿ ಹೆಚ್ಚು ಪುರುಷ ಮತದಾರರಿದ್ದಾರೆ. ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 11,47,545 ಜನ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಇವರಲ್ಲಿ 5,59,785 ಪುರುಷ ಮತದಾರರು ಮತ್ತು 5,87,787 ಮಹಿಳಾ ಮತದಾರರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಕೂಡ ರಾಜ್ಯದಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಾಗಿತ್ತು.

ಉತ್ತರ ಗೋವಾಕ್ಕಿಂತ ದಕ್ಷಿಣ ಗೋವಾ ಹೆಚ್ಚು ಮಹಿಳಾ ಮತದಾರರನ್ನು ಹೊಂದಿದೆ. ಉತ್ತರ ಗೋವಾದಲ್ಲಿ 2,60,689 ಪುರುಷರು ಮತ್ತು 2,73,680 ಮಹಿಳಾ ಮತದಾರರಿದ್ದಾರೆ. ಪುರುಷ ಮತ್ತು ಮಹಿಳಾ ಮತದಾರರ ನಡುವೆ 12,982 ವ್ಯತ್ಯಾಸವಿದೆ. ದಕ್ಷಿಣ ಗೋವಾದಲ್ಲಿ 3,14,107 ಮಹಿಳಾ ಮತದಾರರು ಮತ್ತು 2,99,060 ಪುರುಷ ಮತದಾರರಿದ್ದಾರೆ. ಇಲ್ಲಿ ಪುರುಷ ಮತ್ತು ಮಹಿಳಾ ಮತದಾರರ ನಡುವೆ 15,047 ವ್ಯತ್ಯಾಸವಿದೆ.

ಇದನ್ನೂ ಓದಿ : ಬಿಂಡಿಗನವಿಲೆಯಲ್ಲಿ ವಿಧಾನಪರಿಷತ್‌ ಸದಸ್ಯ ವಾಸ್ತವ್ಯ :  ಪಿಡಿಒಗಳ ವಿರುದ್ಧ ಸದಸ್ಯರ ದೂರು

ಫೆ. 14 ರಂದು ನಡೆಯಲಿರುವ ಗೋವಾ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 40 ಕ್ಷೇತ್ರಗಳಲ್ಲಿ ಒಟ್ಟು 301 ಅಭ್ಯರ್ಥಿಗಳು ತಮ್ಮ ಅದೃಷ್ಠ ಪರೀಕ್ಷೆ ನಡೆಸಲಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಈ ಹಿಂದೆಂದೂ ಸ್ಫರ್ಧಿಸದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದ ಶಿವೋಲಿಂನಲ್ಲಿ ಅತಿ ಹೆಚ್ಚು ಅಂದರೆ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಫರ್ಧಿಸಿರುವ ಸಾಖಳಿ ಕ್ಷೇತ್ರದಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಿಂದಾಗಿ ಪ್ರಸಕ್ತ ಚುನಾವಣೆಯಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ರಾಜ್ಯದಲ್ಲಿ 144 ಸೆಕ್ಷನ್ ಜಾರಿ

ಪಣಜಿ: ಪ್ರಸಕ್ತ ಗೋವಾ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ಫೆ.14 ರ ಸಂಜೆ 6 ಗಂಟೆಯ ವರೆಗೆ ರಾಜ್ಯದಲ್ಲಿ 144 ನೇಯ ಕಲಂ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿಯಿಂದ ಮಾಹಿತಿ ಲಭ್ಯವಾಗಿದೆ.

ರಾಜ್ಯಾದ್ಯಂತ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯದು ಅಥವಾ ಐದಕ್ಕಿಂತ ಹೆಚ್ಚು ಜನರ ಸಭೆಗಳು, ಮೆರವಣಿಗೆಗಳು, ರ್ಯಾಲಿಗಳು, ಸಭೆಗಳನ್ನು ನಿಷೇಧಿಸಲಾಗಿದೆ. ಸಕ್ರಮ ಹಣ ವರ್ಗಾವಣೆ, ಮತ್ತು ಮದ್ಯ ವಿತರಣೆಯನ್ನು ತಡೆಯಲು ಚುನಾವಣಾ ದಿನದಂದು ಪರವಾನಗಿ ನೀಡಲಾದ ವಾಹನಗಳನ್ನು ಹೊರತುಪಡಿಸಿ ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಅನುಮತಿಸಲಾದ ಎಲ್ಲಾ ವಾಹನಗಳ ಓಡಾದ ಬಂದ್ ಮಾಡಲು ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.

ಗೋವಾದಲ್ಲಿನ ಎಲ್ಲ ಮದ್ಯದಂಗಡಿಗಳನ್ನು ಫೆ.12 ರಂದು ಸಂಜೆ 6 ಗಂಟೆಯಿಂದ ಫೆ 14 ರವರೆಗೆ ಗೋವಾದಲ್ಲಿ ಎಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.