ಯಕ್ಷಧ್ರುವ ಪಟ್ಲ ಫೌಂಡೇಶನ್‌ ಬಹ್ರೈನ್‌ -ಸೌದಿ ಘಟಕ;3ನೇ ವಾರ್ಷಿಕೋತ್ಸವ, ಯಕ್ಷಗಾನ ಪ್ರದರ್ಶನ

ಅ. 20ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭ

Team Udayavani, Oct 14, 2023, 1:25 PM IST

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಬಹ್ರೈನ್‌ -ಸೌದಿ ಘಟಕ;3ನೇ ವಾರ್ಷಿಕೋತ್ಸವ, ಯಕ್ಷಗಾನ ಪ್ರದರ್ಶನ

ಬಹ್ರೈನ್‌: ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಬಹ್ರೈನ್‌ನ ಸೌದಿ ಅರೇಬಿಯಾ ಘಟಕವು ತನ್ನ ಮೂರನೇ ವಾರ್ಷಿಕೋತ್ಸವಕ್ಕೆ ಸಜ್ಜಾಗಿ ನಿಂತಿದೆ. “ಯಕ್ಷ ಸಂಭ್ರಮ -2023′ ಎನ್ನುವ ಶೀರ್ಷಿಕೆಯಡಿಯಲ್ಲಿ ಜರಗಲಿರುವ ಈ ಕಾರ್ಯಕ್ರಮವನ್ನು ಅ. 20ರಂದು ಸಂಜೆ 5 ಗಂಟೆಗೆ ಇಲ್ಲಿನ ಮನಾಮದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ವಾರ್ಷಿಕೋತ್ಸವದ ಅಂಗವಾಗಿ ಯಕ್ಷಗುರು ದೀಪಕ್‌ ರಾವ್‌ ಪೇಜಾವರ ಇವರ ನಿರ್ದೇಶನದಲ್ಲಿ , ಅಭಿನವ ವಾಲ್ಮೀಕಿ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜಾ ವಿರಚಿತ “ಮಾನಿಷಾದ ‘ ಎನ್ನುವ ಅಮೋಘ ಪ್ರಸಂಗವನ್ನು ಬಹ್ರೈನ್‌, ಸೌದಿ ಅರೇಬಿಯಾದ ಕಲಾವಿದರೊಂದಿಗೆ ನಾಡಿನ ಅತಿಥಿ ಕಲಾವಿದರುಗಳ ಕೂಡುವಿಕೆಯೊಂದಿಗೆ ಆಡಿ ತೋರಿಸಲಿರುವರು
ನಾಡಿನ ಖ್ಯಾತ ಚೆಂಡೆ ವಾದಕ ರೋಹಿತ್‌ ಉಚ್ಚಿಲ, ಯಕ್ಷಚಂದ್ರಿಕೆ ಶಶಿಕಾಂತ್‌ ಶೆಟ್ಟಿ ಕಾರ್ಕಳ, ಯಕ್ಷಮಯೂರ ಶೇಖರ್‌.ಡಿ. ಶೆಟ್ಟಿಗಾರ್‌ ದುಬೈ ಇವರುಗಳು ಯಕ್ಷಗಾನ ಪ್ರದರ್ಶನದಲ್ಲಿ ಅತಿಥಿ ಕಲಾವಿದರುಗಳಾಗಿ ತಮ್ಮ ಕಲಾ ಪ್ರದರ್ಶನವನ್ನು ನೀಡಲಿರುವರು.ಇದಕ್ಕೆಲ್ಲ ಕಳಶಪ್ರಾಯವಾಗಿ ಯಕ್ಷಧ್ರುವ ಶ್ರೀ ಪಟ್ಲ ಸತೀಶ್‌ ಶೆಟ್ಟಿಯವರ ಕಂಚಿನ ಕಂಠದ ಭಾಗವತಿಕೆಯಿಂದ ದ್ವೀಪದ ಯಕ್ಷಪ್ರೇಮಿಗಳನ್ನು ರಂಜಿಸಲಿರುವರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಕ್ಷ ಧ್ರುವ ಪಟ್ಲ ಪೌಂಡೇಶನ್‌ನ ಪ್ರಧಾನ ಸಂಚಾಲಕರಾದ ಶಶಿಧರ್‌ ಶೆಟ್ಟಿ ಬರೋಡ ಇರಲಿದ್ದಾರೆ. ಯಕ್ಷರಂಗಕ್ಕೆ ಅನನ್ಯ ಕೊಡುಗೆ ನೀಡಿರುವ ದಿ| ಬೊಟ್ಟಿಕೆರೆ ಪುರುಷೋತ್ತಮ ಪೂಂಜಾರವರ ಗೌರವಾರ್ಥ ರಂಗಮಂಟಪಕ್ಕೆ ಅವರ ಹೆಸರನ್ನು ನೀಡಲಾಗಿದ್ದು ಅವರ ಧರ್ಮಪತ್ನಿ ಪುರುಷೋತ್ತಮ ಪೂಂಜಾರವರು ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಈ ಯಕ್ಷಗಾನ ಪ್ರದರ್ಶನಕ್ಕೆ ದ್ವೀಪದ ಎಲ್ಲ ಯಕ್ಷಪ್ರೇಮಿಗಳಿಗೆ ಮುಕ್ತ ಪ್ರವೇಶವಿದ್ದು ಯಕ್ಷಗಾನ ಪ್ರದರ್ಶನವು ಕ್ಲಪ್ತ ಸಮಯಕ್ಕೆ ಸರಿಯಾಗಿ ಪ್ರಾರಂಭಗೊಳ್ಳಲಿದ್ದು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಯಕ್ಷಗಾನ ಪ್ರದರ್ಶನದಲ್ಲಿ ಭಾಗವಿಸಬೇಕೆಂದು ಯಕ್ಷಧ್ರುವ ಪಟ್ಲ ಪೌಂಡೇಶನ್‌ ಬಹ್ರೈನ್‌ – ಸೌದಿ ಘಟಕದ ಅಧ್ಯಕ್ಷರಾದ ರಾಜೇಶ್‌ ಶೆಟ್ಟಿಯವರು ಕರೆ ನೀಡಿದ್ದಾರೆ. ಈ ಕಾರ್ಯಕ್ರಮದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ರಾಜೇಶ್‌ ಶೆಟ್ಟಿಯವರನ್ನು ದೂರವಾಣಿ ಸಂಖ್ಯೆ 00973-38902807 ಮೂಲಕ ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.