ಕರಾವಳಿಯಲ್ಲಿ ಗರಿಗೆದರಿದ ಕಲಾ ಚಟುವಟಿಕೆ; ಕೋವಿಡ್‌ ವಿಧಿಸಲಾಗಿದ್ದ ನಿರ್ಬಂಧಗಳೆಲ್ಲ ತೆರವು

Team Udayavani, Jan 31, 2022, 7:10 AM IST

ಕರಾವಳಿಯಲ್ಲಿ ಗರಿಗೆದರಿದ ಕಲಾ ಚಟುವಟಿಕೆ; ಕೋವಿಡ್‌ ವಿಧಿಸಲಾಗಿದ್ದ ನಿರ್ಬಂಧಗಳೆಲ್ಲ ತೆರವು

ಉಡುಪಿ: ರಾಜ್ಯ ಸರಕಾರ ರಾತ್ರಿ ಕರ್ಫ್ಯೂ ಸೇರಿದಂತೆ ವಿವಿಧ ನಿರ್ಬಂಧಗಳನ್ನು ಸಡಿಲಿಸಿದ ಕಾರಣ ಕರಾವಳಿ ಜಿಲ್ಲೆಗಳ ಬಹುತೇಕ ಮಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ವರ್ಷಾರಂಭ, ವಿವಿಧ ಸೀಸನ್‌ಗಳು ಇರುವ ಈ ಸಂದರ್ಭದಲ್ಲಿ ಕರ್ಫ್ಯೂ, ಲಾಕ್‌ಡೌನ್‌ ವಿಧಿಸಿದರೆ ಜನಸಾಮಾನ್ಯರ ಆದಾಯಕ್ಕೆ ಬಹುದೊಡ್ಡ ಹೊಡೆತ ಬೀಳುತ್ತದೆ. ಈ ಬಗ್ಗೆ ಸರಕಾರಕ್ಕೂ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು.
ಕರಾವಳಿಯಲ್ಲಿ ಈ ಸಮಯದಲ್ಲಿ ಮುಖ್ಯವಾಗಿ ನೇಮ, ಯಕ್ಷಗಾನ, ದೈವಾ ರಾಧನೆ, ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯುವುದು ವಾಡಿಕೆ. ಕಳೆದ 2 ವರ್ಷಗಳಿಂದ ಸರಿಯಾಗಿ ಯಾವುದನ್ನೂ ನೆರವೇರಿಸಲಾಗದೆ ಜನರು ಆತಂಕದಲ್ಲಿದ್ದರು. ಈಗ ಎಲ್ಲ ಆಚರಣೆ ನಡೆಸಲು ಸರಕಾರ ಅಧಿಕೃತ ಅನುಮತಿ ನೀಡಿರುವು ದರಿಂದ ಸಂತಸಗೊಂಡಿದ್ದಾರೆ.

ಸಾಮಾನ್ಯ ದಿನಗಳಲ್ಲಿ ರಾತ್ರಿವೇಳೆ ಪ್ರಾರಂಭವಾಗುತ್ತಿದ್ದ ಯಕ್ಷಗಾನ ರಾತ್ರಿ ಕರ್ಫ್ಯೂ ಸಂದರ್ಭ ಅಪರಾಹ್ನದ ಬಳಿಕ ಆರಂಭಗೊಳ್ಳುತ್ತಿತ್ತು. ಇದರಿಂದ ಪ್ರೇಕ್ಷಕರ ಸಂಖ್ಯೆಯೂ ವಿಪರೀತ ಇಳಿಕೆ ಕಂಡಿತ್ತು. ರಾತ್ರಿ 10ರ ಮೊದಲು ಮುಗಿಸಬೇಕಾದ ಒತ್ತಡ ದಿಂದ ಈಗ ಮುಕ್ತಿ ಸಿಕ್ಕಿದೆ ಎಂದಿದ್ದಾರೆ ಮಂದಾರ್ತಿ ದೇವಸ್ಥಾನದ ಮೊಕ್ತೇಸರ ಧನಂಜಯ ಶೆಟ್ಟಿ.

ಸೀಸನ್‌ ಅವಧಿಯಲ್ಲಿಯೇ ದುಡಿ ಯುವ ವರ್ಗ ಕಲಾವಿದರದ್ದು. ನಾಟಕಗಳ ಲ್ಲಿಯೂ ಹಲವಾರು ಕಲಾವಿದರು ತಮ್ಮ ಇಡೀ ವರ್ಷದ ಆದಾಯವನ್ನು ಕೆಲವೇ ತಿಂಗಳುಗಳಲ್ಲಿ ಸಂಪಾದಿಸುವ ತುಡಿತದಲ್ಲಿರುತ್ತಾರೆ. ಕೆಲವು ವರ್ಷಗಳಿಂದ ಸರಿಯಾದ ದುಡಿಮೆ ಇಲ್ಲದೆ ಇವರ ಜೀವನ ಕಷ್ಟಕರವಾಗಿತ್ತು. ಈಗ ಸರಕಾರ ನಿರ್ಧಾರ ಬದಲಾಯಿಸಿರುವುದು ಉತ್ತಮ ಬೆಳವಣಿಗೆ ಎನ್ನುತ್ತಾರೆ ಉಡುಪಿ ರಂಗಭೂಮಿಯ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ.

ಶಾಮಿಯಾನದವರಿಗೂ ಸಂತಸ
ಸೀಮಿತ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರುತ್ತಿದ್ದುದರಿಂದ ಕುರ್ಚಿ, ಶಾಮಿಯಾನಗಳು ಕಡಿಮೆ ಸಂಖ್ಯೆಯಲ್ಲಿ ಬಾಡಿಗೆಗೆ ಹೋಗುತ್ತಿದ್ದವು. ಮುಂದಿನ ದಿನಗಳಲ್ಲಿಯಾದರೂ ಈ ಹಿಂದಿನಂತೆ ಬೇಡಿಕೆ ಬಂದರೆ ಇದನ್ನು ನಂಬಿ ಜೀವನ ನಡೆಸುವವರಿಗೆ ನೆಮ್ಮದಿ ಸಿಗಲಿದೆ. ಸೀಮಿತ ಸಂಖ್ಯೆಯಲ್ಲಿ ಜನರು ಸೇರಿ ಸರಳವಾಗಿ ಸಮಾರಂಭ ಆಯೋಜಿಸುತ್ತಿದ್ದುದರಿಂದ ಸಬಾಭವನಗಳಿಗೆ ನಷ್ಟ ಉಂಟಾಗಿತ್ತು ಎನ್ನುತ್ತಾರೆ ಉಡುಪಿ ಜಿಲ್ಲಾ ಸಭಾಭವನಗಳ ಒಕ್ಕೂಟದ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ.

ದೈವಾರಾಧಕರಿಗೂ ನೆಮ್ಮದಿ
ನಮಗೆ ಡಿಸೆಂಬರ್‌ನಿಂದ ಮೇ ತನಕ ಸೀಸನ್‌. ಇದುವರೆಗೆ ಸೀಮಿತ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎನ್ನುವ ನಿಯಮ ಇದ್ದುದರಿಂದ ಕೆಲವರು ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದರು. ಇದರಿಂದ ದೈವಾರಾಧಕರಿಗೆ ತೊಂದರೆ ಉಂಟಾಗಿತ್ತು. ಈಗ ಸರಕಾರ ಅನುಮತಿ ಕೊಟ್ಟಿರುವುದರಿಂದ ಈ ಹಿಂದಿನಂತೆ ಸಂಪ್ರ ದಾಯವನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ ಎಂದು ಅಖೀಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದ ಕಾರ್ಯದರ್ಶಿ ವಿನೋದ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.