ಕಲಿಕೆಯಾಗಿ ಯಕ್ಷಗಾನ: ಪ್ರೊ|ಯಡಪಡಿತ್ತಾಯ ಆಶಯ

ಯಕ್ಷಗಾನ ಕಲಾರಂಗದ ವಿವಿಧ ಪ್ರಶಸ್ತಿ ಪ್ರದಾನ

Team Udayavani, Sep 27, 2021, 5:48 AM IST

ಕಲಿಕೆಯಾಗಿ ಯಕ್ಷಗಾನ: ಪ್ರೊ|ಯಡಪಡಿತ್ತಾಯ ಆಶಯ

ಉಡುಪಿ: ಯಕ್ಷಗಾನ ಕಲೆಯನ್ನು ಕಲಿಕೆಯಾಗಿ ಅಳವಡಿಸಿ ಕೊಳ್ಳಬೇಕಾಗಿದೆ ಎಂಬ ಆಶಯವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ. ಎಸ್‌.ಯಡಪಡಿತ್ತಾಯ ವ್ಯಕ್ತ ಪಡಿಸಿದ್ದಾರೆ.

ಶ್ರೀಕೃಷ್ಣಮಠ ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ರವಿವಾರ ರಾಜಾಂಗಣದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರು ವಿ.ವಿ.ಯ ಯಕ್ಷಗಾನ ಪೀಠದ ದಶಮಾನೋತ್ಸವ ವನ್ನು ಆಚರಿಸಲಾಗುತ್ತಿದೆ. ಕಲಿಕೆಯಾಗಿ ಯಕ್ಷಗಾನವನ್ನು ಅಳವಡಿಸುವಲ್ಲಿ ವಿದ್ವಾಂಸರು, ಕಲೆಗಾಗಿ ಶ್ರಮಿಸುತ್ತಿರುವ ಕಲಾರಂಗದಂತಹ ಸಂಘ ಸಂಸ್ಥೆಗಳ ಸಹಕಾರ ಅಗತ್ಯ. ಯಕ್ಷಗಾನ ಶಿಕ್ಷಣ, ಪ್ರಕಾಶನ, ಸಂಶೋಧನೆಗಳಲ್ಲಿ ವಿ.ವಿ. ಸಹಕಾರವನ್ನು ನೀಡಲಿದೆ ಎಂದು ಯಡಪಡಿತ್ತಾಯ ಹೇಳಿದರು.

ತೆಂಕುತಿಟ್ಟಿನ ಯಕ್ಷಗಾನ ನಾಟ್ಯಾ ಚಾರ್ಯ ಕರ್ಗಲ್ಲು ವಿಶ್ವೇಶ್ವರ ಭಟ್‌ ಅವರಿಗೆ 40,000 ರೂ. ನಗದು ಹೊಂದಿರುವ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ, ತಾಳಮದ್ದಲೆ ಅರ್ಥಧಾರಿ, ಯಕ್ಷಗಾನ ಸಂಘಟಕ ವಾಸುದೇವ ರಾವ್‌ ಸುರತ್ಕಲ್‌ ಅವರಿಗೆ 20,000 ರೂ. ನಗದು ಹೊಂದಿರುವ ಮಟ್ಟಿ ಮುರಲೀಧರ ರಾವ್‌ ಪ್ರಶಸ್ತಿ, ತಾಳಮದ್ದಲೆ ಅರ್ಥಧಾರಿ, ಸಂಸ್ಕೃತ ವಿದ್ವಾಂಸ ವಿ| ಉಮಾಕಾಂತ ಭಟ್‌ ಕೆರೇಕೈ ಅವರಿಗೆ 20,000 ರೂ. ನಗದು ಹೊಂದಿರುವ ಪೆರ್ಲ ಪಂಡಿತ ಕೃಷ್ಣ ಭಟ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿ ಪುರಸ್ಕೃತರು ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ:ಜೆಡಿಎಸ್‌ ಹೆಸರಿಗಷ್ಟೇ ಜಾತ್ಯತೀತ, ಅವರದ್ದು ಅವಕಾಶವಾದಿ ರಾಜಕಾರಣ : ಸಿದ್ದರಾಮಯ್ಯ

ಪ್ರಶಸ್ತಿ ಪ್ರಾಯೋಜಿಸಿರುವ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಕೊಲ್ಲೂರು ದೇವಸ್ಥಾನದ ಮಾಜಿ ಧರ್ಮದರ್ಶಿ ಕೃಷ್ಣ ಪ್ರಸಾದ ಅಡ್ಯಂತಾಯ ಉಪಸ್ಥಿತರಿದ್ದರು.

ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌ ಸ್ವಾಗತಿಸಿ ಕಾರ್ಯ ದರ್ಶಿ ಮುರಲಿ ಕಡೆಕಾರ್‌ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ಹೆಗಡೆ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಎಚ್‌.ಎನ್‌. ಶೃಂಗೇಶ್ವರ ವಂದಿಸಿದರು. ಉಪಾಧ್ಯಕ್ಷರಾದ ಎಸ್‌.ವಿ. ಭಟ್‌, ಪಳ್ಳಿ ಕಿಶನ್‌ ಹೆಗ್ಡೆ ಉಪಸ್ಥಿತರಿದ್ದರು.

ಗಂಗಾ ಸ್ಥಾನ-ಗಂಗಾ ಸ್ನಾನ
ಪ್ರಶಸ್ತಿ ಪ್ರದಾನ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಜೀವಿತಾವಧಿಯಲ್ಲಿ ಅಗತ್ಯವಾಗಿ ತಿಳಿಯಬೇಕಾದದ್ದು ಭಗವಂತನನ್ನು. ಇದಕ್ಕೆ ಬೇರೆ ಬೇರೆ ವೇದಿಕೆಗಳನ್ನು ಸೃಷ್ಟಿಸಿದವರು ನಮ್ಮ ಪೂರ್ವಜರು. ಯಕ್ಷಗಾನ, ತಾಳಮದ್ದಲೆಗಳೂ ಇಂತಹ ವೇದಿಕೆಗಳು. ಸಾಮಾನ್ಯ ಜನರೂ ಇಂತಹ ವೇದಿಕೆಗಳಲ್ಲಿ ಸ್ವಲ್ಪ ಸಮಯ ಭಾಗವಹಿಸಿದರೂ ಲಾಭಕರವಾಗಿದೆ. ಕಲಾವಿದರು ಉತ್ತಮ ಸಮಾಜ ಕಟ್ಟುವ ಕೆಲಸಗಳಲ್ಲಿ ತೊಡಗಿದ್ದಾರೆ. ಹೃದಯ ಗಂಗೆಯಲ್ಲಿ ಗಂಗಾ ಸ್ನಾನ ಮಾಡಿಸುವ ಇವರ ಪರಿಶ್ರಮ ಅಮೂಲ್ಯ ಎಂದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.