ಹೈಕಮಾಂಡ್‌ ಸಮಯ ಕೇಳಿದ ಯತ್ನಾಳ್‌

Team Udayavani, Oct 9, 2019, 3:07 AM IST

hycommond

ವಿಜಯಪುರ: ಪ್ರವಾಹ ಪರಿಹಾರ ವಿತರಣೆಯಲ್ಲಿ ವಿಳಂಬ ನೀತಿ ಖಂಡಿಸಿ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದಕ್ಕೆ ಪಕ್ಷ ತಮಗೆ ನೀಡಿದ್ದ ನೋಟಿಸ್‌ಗೆ ಉತ್ತರಿಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಪ್ರಧಾನಿ ಹಾಗೂ ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದು ಸಮಯ ಕೋರಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಶಾಸಕ ಯತ್ನಾಳ ಕೇಂದ್ರ ಸರ್ಕಾರವನ್ನು ಹಾಗೂ ಕೇಂದ್ರದ ಮೇಲೆ ಈ ಕುರಿತು ಒತ್ತಡ ಹೇರಬೇಕೆಂದು ರಾಜ್ಯದ ಸಂಸದರನ್ನು ಒತ್ತಾಯಿಸಿದ್ದರು. ಆಡಳಿತ ಪಕ್ಷದ ಶಾಸಕರಾಗಿ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ನೀಡಿದ್ದರಿಂದ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕ ಯತ್ನಾಳ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿತ್ತು. ಆ ನೋಟಿಸ್‌ಗೆ ಈ ರೀತಿ ಉತ್ತರಿಸಿ, ಈ ಗೊಂದಲ ನಿವಾರಣೆಗಾಗಿ ಖದ್ದು ಭೇಟಿ ನೀಡಲು ಬಯಸಿದ್ದು ಸಮಯ ನೀಡುವಂತೆ ಕೋರಿದ್ದಾರೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಗೃಹ ಸಚಿವ ಅಮಿತ್‌ ಶಾ, ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಅ.5ರಂದು ಪ್ರತ್ಯೇಕ ಪತ್ರ ಬರೆದಿರುವ ಯತ್ನಾಳ, ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ನೆರೆಯಿಂದಾಗಿ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವ ಜನರಿಗೆ ತ್ವರಿತ ಪರಿಹಾರ ವಿತರಿಸುವ ಕುರಿತು ಓರ್ವ ಜನಪ್ರತಿನಿಧಿಯಾಗಿ ಸಹಜ ರೀತಿಯಲ್ಲಿ ಆಗ್ರಹಿಸಿದ್ದೇನೆ ಹೊರತು ರಾಜಕೀಯ ಉದ್ದೇಶವೇ ಇಲ್ಲ. ಅಲ್ಲದೇ ರಾಜಕೀಯದ ಕುರಿತು ಯಾವ ಹೇಳಿಕೆಯನ್ನೂ ನೀಡಿಲ್ಲ. ಆದರೆ ಕೆಲವರು ಇದೀಗ ನನ್ನ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಹೀಗೆ ಮಾಡಿದ್ದಾರೆ ಎಂದು ಸಮಜಾಯಿಸಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರಲ್ಲಿ ನೇತಾಜಿ ಸುಭಾಷ್‌ಚಂದ್ರ ಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರನ್ನು ಕಂಡಿದ್ದೇವೆ. ನಿಮ್ಮಿಂದಲೇ ಇಂದು ಇಡೀ ದೇಶ ಅತ್ಯುನ್ನತವಾಗಿ ಬೆಳವಣಿಗೆ ಆಗುತ್ತಿದೆ. ನಾನು ಮಾತನಾಡಿದ್ದು ಸಂತ್ರಸ್ತರಿಗೆ ಸಹಾಯ ಮಾಡಿ ಎಂಬುದಾಗಿದೆ ಹೊರತಾಗಿ ಪಕ್ಷದ ವರ್ಚಸ್ಸು ಮತ್ತು ನಾಯಕರ ಅವಹೇಳನಕ್ಕೆ ಕಾರಣವಾಗಿಲ್ಲ. ನಾನು ನೀಡಿದ ಹೇಳಿಕೆಯಿಂದ ಪಕ್ಷದ ಘನತೆ ಹೆಚ್ಚಿದೆ ಹೊರತಾಗಿ ಪಕ್ಷಕ್ಕೆ ಧಕ್ಕೆ ಆಗಿಲ್ಲ ಎಂದು ವಿವರಿಸಿದ್ದಾರೆ.

ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದಾಗಲೂ ನಾನು ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸುವ ಸಲುವಾಗಿ ಹೋರಾಟ ಮಾಡಿದ್ದೇನೆ. ಆಗ ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ಸಹ ನೀಡಲು ಮುಂದಾಗಿದ್ದೆ. ಅಂದಿನ ಪ್ರಧಾನಿ ವಾಜಪೇಯಿ ಸ್ಪಂದಿಸಿದ್ದರು. ಈಗಲೂ ನಾನು ಸಂತ್ರಸ್ತರಿಗೆ ಪರಿಹಾರ ಸಿಗಬೇಕು ಎಂದು ಮಾತನಾಡಿದ್ದೇನೆ ಹೊರತಾಗಿ ಪಕ್ಷದ ವಿರುದ್ಧ ಹಾಗೂ ನಾಯಕರ ವಿರುದ್ಧ ಮಾತನಾಡಿಲ್ಲ. ಇಷ್ಟಾದರೂ ಕೆಲವರು ನನ್ನ ಹೇಳಿಕೆ ಕುರಿತು ತಪ್ಪು ಮಾಹಿತಿ ರವಾನಿಸಿರುವ ಸಾಧ್ಯತೆ ಇದೆ. ಹೀಗಾಗಿ ಖುದ್ದಾಗಿ ನಿಮ್ಮನ್ನು ಭೇಟಿಯಾಗಿ ಸಂತ್ರಸ್ತರ ಕುರಿತು ವಿಷಯವನ್ನು ಮಾತನಾಡ ಬಯಸಿದ್ದು ಸಮಯಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.