Agri: ಕೊಬ್ಬರಿಗೆ ವರ್ಷಪೂರ್ತಿ ಬೆಂಬಲ ಬೆಲೆ?

ತೆಂಗಿನಕಾಯಿಗೂ ಬೆಂಬಲ ಬೆಲೆ ಕೊಡಿ- ಕೇಂದ್ರಕ್ಕೆ ಮನವಿ ಸಲ್ಲಿಸಲು ಉಪ ಸಮಿತಿ ತೀರ್ಮಾನ

Team Udayavani, Aug 31, 2023, 10:17 PM IST

KOBBARI

ಬೆಂಗಳೂರು: ಕೊಬ್ಬರಿ ಸರ್ವಋತು ಬೆಳೆಯಾಗಿದ್ದು, ಅದಕ್ಕೆ ವರ್ಷ ಪೂರ್ತಿ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ಕೃಷಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವರಾದ ಎಚ್‌.ಕೆ. ಪಾಟೀಲ, ಕೆ.ಎಚ್‌. ಮುನಿಯಪ್ಪ, ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ ಅವರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಕೇಂದ್ರ ಸರ್ಕಾರವು ಪ್ರಸ್ತುತ ಪ್ರತಿ ಕ್ವಿಂಟಾಲ್‌ ಉಂಡೆ ಕೊಬ್ಬರಿಯನ್ನು 11,750 ರೂ. ಬೆಂಬಲ ಬೆಲೆಯಲ್ಲಿ ಖರೀದಿಸುತ್ತಿದ್ದು, ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು 1,250 ರೂ. ಪ್ರೋತ್ಸಾಹಧನ ನೀಡುತ್ತಿದೆ. ಇದುವರೆಗೆ 50,184 ಮೆಟ್ರಿಕ್‌ ಟನ್‌ ಖರೀದಿ ಮಾಡಿದೆ. ಖರೀದಿ ಗುರಿ ಇರುವುದು 54,750 ಮೆಟ್ರಿಕ್‌ ಟನ್‌. ಆದರೆ, ಕೊಬ್ಬರಿ ಸರ್ವಋತು ಬೆಳೆಯಾಗಿರುವುದರಿಂದ ರೈತರ ಅನುಕೂಲಕ್ಕಾಗಿ ವರ್ಷಪೂರ್ತಿ ಬೆಂಬಲ ಬೆಲೆಯೊಂದಿಗೆ ಖರೀದಿಸಲು ಕೇಂದ್ರಕ್ಕೆ ಮನವಿ ಸಲ್ಲಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಯಿತು.

ಅಷ್ಟೇ ಅಲ್ಲ, ನಿಗದಿತ 54,750 ಮೆಟ್ರಿಕ್‌ ಟನ್‌ ಕೊಬ್ಬರಿ ಖರೀದಿ ಸಂಪೂರ್ಣ ಗುರಿ ಸಾಧಿಸಬೇಕು. ಜತೆಗೆ ತೆಂಗಿನಕಾಯಿ ಕೂಡ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ಕೇರಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಕೊಬ್ಬರಿ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನಹರಿಸಬೇಕು. ಮಧ್ಯವರ್ತಿಗಳಿಗೆ ಲಾಭ ಮಾಡದೆ ರೈತರಿಗೆ ಅನುಕೂಲವಾಗುವಂತೆ ಸಕಾಲದಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಮಾಡಬೇಕು ಹಾಗೂ ಖರೀದಿಸಿದ ಉತ್ಪನ್ನಗಳಿಗೆ ತಕ್ಷಣ ಹಣ ನೀಡಬೇಕು ಎಂದೂ ಕೇಂದ್ರಕ್ಕೆ ಮನವಿ ಸಲ್ಲಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.

ಕೃಷಿ ಆವರ್ತ ನಿಧಿಗೆ ಕಾಯಂ ಅನುದಾನ ಒದಗಿಸಬೇಕು. ಅದರ ಒಟ್ಟು ಪ್ರಮಾಣ ಏರಿಕೆಯಾಗುತ್ತಾ ಹೋಗಬೇಕು ಎಂದು ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು. ಚಾಮರಾಜನಗರ ರೈತರಿಂದ ಅರಿಶಿಣ ಖರೀದಿಸಿ ಹಣ ನೀಡಿಕೆ ವಿಳಂಬ ಮಾಡಿದ್ದ ಪ್ರಕರಣಗಳಲ್ಲಿ 53 ರೈತರಿಗೆ ಬಡ್ಡಿ ಸೇರಿಸಿ ನೀಡುವಂತೆ ಸಮಿತಿ ಸೂಚಿಸಿತು. ಬರುವ ಜನವರಿಯಿಂದ ಬೆಂಬಲ ಬೆಲೆಯೊಂದಿಗೆ ಭತ್ತ, ರಾಗಿ, ಜೋಳ ಖರೀದಿಸಬೇಕು. ಈ ಹಿಂದಿನಂತೆ ಯಾವುದೇ ಲೋಪಗಳು ಪುನರಾವರ್ತನೆಯಾಗದೆ ರೈತರಿಗೆ ಅನುಕೂಲ ಮಾಡಿ, ನಿಯಮಾನುಸಾರ ಖರೀದಿಸಬೇಕು.

ಈರುಳ್ಳಿ ರಫ್ತಿಗೆ ತೆರಿಗೆ; ಕ್ರಮಕ್ಕೆ ಮನವಿ
ಈರುಳ್ಳಿ ರಫ್ತಿನ ಮೇಲೆ ಅಧಿಕ ತೆರಿಗೆ ವಿಧಿಸಿರುವುದರಿಂದ ರೈತರಿಗೆ ಉತ್ತಮ ದರ ಪಡೆಯುವ ಅವಕಾಶ ತಪ್ಪಿದೆ. ಈ ಬಗ್ಗೆ ಕೇಂದ್ರ ಕ್ರಮ ವಹಿಸಬೇಕು ಎಂದು ಒತ್ತಾಯಿಸಲು ಸಮಿತಿ ನಿರ್ಣಯಿಸಿತು.
ಆವರ್ತ ನಿಧಿ ಬಳಸಿ ಬೇರೆ ಬೇರೆ ಇಲಾಖೆಗಳು ಖರೀದಿಸಿದ್ದು, ಅದನ್ನು ಆದಷ್ಟು ಬೇಗ ಮರುಪಾವತಿ ಮಾಡಬೇಕು. ಇದಕ್ಕೆ ಹಣಕಾಸು ಇಲಾಖೆ ಮಧ್ಯಪ್ರವೇಶಿಸಿ ನೆರವಾಗಬೇಕು. ಇನ್ಮುಂದೆ ಆವರ್ತ ನಿಧಿ ಬಳಸಿದರೆ ಅದಕ್ಕೆ ಸೂಕ್ತ ಬಡ್ಡಿ ಪಾವತಿ ಮಾಡಿ ಹಿಂದಿರಿಗಿಸಬೇಕು ಎಂದು ಸಂಬಂಧಪಟ್ಟ ಏಜೆನ್ಸಿಗಳು, ಇಲಾಖೆಗಳಿಗೆ ಸೂಚನೆ ನೀಡಬೇಕು. ಪಡಿತರ ಆಹಾರ ಸಾಮಗ್ರಿ ಖರೀದಿ ಪ್ರಕ್ರಿಯೆಯಲ್ಲಿ ಕೇಂದ್ರದ ಸಂಸ್ಥೆಗಳ ಜತೆಗೆ ರಾಜ್ಯದ ಸಂಸ್ಥೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಸಮತಿ ಸಲಹೆ ನೀಡಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.