“ಒಂಬತ್ತನೇ ದಿಕ್ಕಿ’ನಲ್ಲಿ ಯೋಗಿ ಹುಟ್ಟುಹಬ್ಬ!
Team Udayavani, Jul 7, 2020, 8:40 AM IST
ಸ್ಯಾಂಡಲ್ವುಡ್ನ ಲೂಸ್ಮಾದ ಯೋಗಿ ಹುಟ್ಟುಹಬ್ಬಕ್ಕೆ ನಿರ್ದೇಶಕ ದಯಾಳ್ ಪದ್ಮನಾಭನ್ “ಒಂಬತ್ತನೇ ದಿಕ್ಕು’ ಚಿತ್ರದ ಟೀಸರ್ನ್ನು ಬಿಡುಗಡೆ ಮಾಡುವ ಮೂಲಕ ವಿಶೇಷ ಉಡುಗೊರೆ ನೀಡಿದ್ದಾರೆ. ನಟ ಯೋಗಿ ಸೋಮವಾರ 31 ವಸಂತಕ್ಕೆ ಕಾಲಿಟ್ಟಿದ್ದು, ಯೂಟ್ಯೂಬ್ನಲ್ಲಿ ಚಿತ್ರದ ಟೀಸರ್ ರಿಲೀಸ್ ಆಗಿದೆ. ಅಲ್ಲದೇ ಬಿಡುಗಡೆಯಾದ ಈ ವಿಶೇಷ ಟೀಸರ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
ಈಗಾಗಲೇ ಚಿತ್ರವು ಸೆನ್ಸಾರ್ನಿಂದ ಯಾವುದೇ ಕಟ್ಸ್ ಇಲ್ಲದೆ ಯು/ಎ ಪ್ರಮಾಣ ಪತ್ರವನ್ನುಪಡೆದುಕೊಂಡಿದೆ. ಅಂದಹಾಗೆ ಸುಮಾರು 40 ದಿನಗಳ ಕಾಲ ಬೆಂಗಳೂರು, ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣಗೊಂಡಿರುವ ಸಿನಿಮಾದಲ್ಲಿ ಟ್ರಾವೆಲ್ ಏಜೆಂಟ್ ಆಗಿ ಯೋಗಿ ಕಾಣಿಸಿಕೊಂಡಿದ್ದು, ಸಾಮಾನ್ಯ ಹುಡುಗಿಯ ಪಾತ್ರದಲ್ಲಿಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಸಂಪತ್ಕುಮಾರ್, ಆಶೋಕ್ , ಶೃತಿ ನಾಯಕ್, ಯತಿರಾಜ್, ಮಧುಸೂಧನ್ ಮುಂತಾದವರು ನಟಿಸಿದ್ದು, ವಿಶೇಷ ಪಾತ್ರದಲ್ಲಿ ಸಾಯಿಕುಮಾರ್ ಕಾಣಿಸಿಕೊಂಡಿದ್ದಾರೆ.
ಇನ್ನು ಈ ಚಿತ್ರಕ್ಕೆ ಡಿ ಪಿಕ್ಚರ್ಸ್ ನ ದಯಾಳ್ ಪದ್ಮನಾಭನ್, ಜಿ. ಸಿನಿಮಾಸ್ನ ಗುರು ದೇಶಪಾಂಡೆ ಮತ್ತು ಚೆನ್ನೈ ಮೂಲದ ಕೆ9 ಸ್ಟುಡಿಯೋ ಸೇರಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ, ಪ್ರೀತಿ ಮೋಹನ್ ಸಂಕಲನ, ವಿಕ್ರಂ ಮೋರ್ ಸಾಹಸ ಮತ್ತು ಅಭಿಷೇಕ್ ಎಸ್.ಎನ್. ಸಂಭಾಷಣೆ ಚಿತ್ರಕ್ಕಿದೆ. ಅಲ್ಲದೇ ಈ ಸಿನಿಮಾ ಬಳಿಕ ಯೋಗಿ ಅಭಿನಯದ ಮತ್ತೊಂದು ಬಿಗ್ ಸಿನಿಮಾಗೆ ರೆಡಿಯಾಗುತ್ತಿದ್ದಾರೆ. ಹೌದು, ತಮ್ಮದೇ ಬ್ಯಾನರ್ನಲ್ಲಿ “ಕಂಸ’ ಎಂಬ ಚಿತ್ರದಲ್ಲಿ ನಟಿಸುವ ಬಗ್ಗೆ ಈಗಾಗಲೇ ಸುದ್ದಿಯೂ ಆಗಿದೆ. ಸರ್ಕಾರದ ಅನುಮತಿ, ಹಾಗೂ ಚಿತ್ರಮಂದಿರಗಳ ಆರಂಭ ನೋಡಿಕೊಂಡು ಬಿಡುಗಡೆ ಮಾಡುವ ಉತ್ಸಾಹದಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
MUST WATCH
ಹೊಸ ಸೇರ್ಪಡೆ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ