ವ್ಯವಸಾಯದ ಬಗ್ಗೆ ನಿಖಿಲ್‌ಕುಮಾರ್ ಹೇಳಿದ್ದೇನು ಗೊತ್ತಾ?


Team Udayavani, Jul 3, 2020, 9:24 AM IST

fb nikhil

ಇತ್ತೀಚೆಗಷ್ಟೇ ಮದುವೆಯಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ಕುಮಾರ್‌ ಕೃಷಿ ಭೂಮಿಯಲ್ಲಿ ವ್ಯವಸಾಯವನ್ನು ಮಾಡಲು ಆರಂಭಿಸಿದ್ದು, ನೀವು ಕೃಷಿ ಮಾಡಿ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಹೌದು! ಇದೀಗ ನಿಖಿಲ್‌ ಸಿನಿಮಾರಂಗದಿಂದ ಕೃಷಿ ಕಡೆ ಒಲವು ತೋರಿದ್ದು, ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರಹವೊಂದನ್ನು ಹಂಚಿಕೊಂಡಿದ್ದಾರೆ.

“ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ ವಿದ್ಯಾಭ್ಯಾಸದ ಆಧಾರದ ಮೇಲೆ ನಗರಗಳಲ್ಲಿ ಕೆಲಸವೊಂದನ್ನು ಸಂಪಾದಿಸಿ ಜೀವನ ನಡೆಸುವವರು ಒಂದು ಕಡೆಯಾದರೆ ಇನ್ನು ಕೆಲವರು ಸ್ವಂತ ಉದ್ಯೋಗ ಅಥವಾ ಕೂಲಿ ಕೆಲಸವನ್ನಾದರೂ ನಗರದಲ್ಲಿ ಮಾಡಿಕೊಂಡು ಜೀವನ ನಡೆಸಲು ನಗರಗಳ ಕಡೆಗೆ ಮುಖಮಾಡುವವರು ಇನ್ನೊಂದು ಕಡೆ. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿರುವ ಕೃಷಿಭೂಮಿಗಳು ಪಾಲು ಬೀಳುತ್ತಿವೆ. ನಗರದಲ್ಲಿ ವೃತ್ತಿ ಸ್ಪರ್ಧೆ ತಾರಕಕ್ಕೇರಿದೆ.

ಡಾಕ್ಟರ್ ತನ್ನ‌ ಮಗ ಡಾಕ್ಟರ್ ‌ಆಗಲಿ, ಪೊಲೀಸ್ ತನ್ನ ಮಗನೂ ತನ್ನಂತೆಯೇ ಪೊಲೀಸ್ ಆಗಲಿ ಸರ್ಕಾರಿ‌ ನೌಕರ ತನ್ನ ಮಗನೂ ಸರ್ಕಾರಿ ನೌಕರನಾಗಲಿ ಎಂದು ಆಸೆ ಪಡುತ್ತಾನೆ. ಆದರೆ ನಮ್ಮ ದೇಶದ ರೈತ ತನ್ನ ಮಗನೂ ರೈತನಾಗಲಿ ಎಂದು ಎಂದೂ ಬಯಸದ ಪರಿಸ್ಥಿತಿ ಇದೆ. ತಾನು ಪಟ್ಟ ಕಷ್ಟ ತನಗೇ ಕೊನೆಯಾಗಲಿ ನನ್ನ ಮಕ್ಕಳಿಗೆ ಈ ಕಷ್ಟ ಬೇಡ ಎಂದು ಸಾಲ ಮಾಡಿಯಾದರೂ ಮಕ್ಕಳನ್ನು ಓದಿಸಿ ಉದ್ಯೋಗಕ್ಕಾಗಿ ನಗರಗಳಿಗೆ ಕಳುಹಿಸುತ್ತಾರೆ. ರೈತರಿಗೆ ತಾವು ಏನೇ ಬೆಳೆದರೂ ಅದಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರವೂ ಆತನಿಗಿಲ್ಲ. ಜೀವಮಾನವಿಡೀ ದುಡಿದು ಬದುಕುವ ರೈತನಿಗೆ ಈ ದೇಶದ ಮೊದಲ ಗೌರವ ಸಿಗಬೇಕಿದ್ದು ಸರ್ಕಾರಿ ಅಧಿಕಾರಿಗಳು ಹಾಗೂ ಬ್ಯಾಂಕ್ ನೌಕರರು ರೈತರು ತಮ್ಮ ಕಚೇರಿಗೆ ಬಂದಾಗ ಗೌರವದಿಂದ ನಡೆಸಿಕೊಳ್ಳಬೇಕು. ಜಮೀನಿನಲ್ಲಿ ಮುಳ್ಳು ಚುಚ್ಚಿ ಮಣ್ಣಿಗೆ ರಕ್ತದ ಅಭಿಷೇಕವಾದರೂ ಮರುದಿನ ಅದೇ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಘನತೆಯ ಬದುಕನ್ನು ಕಟ್ಟಿ ಕೊಡಬೇಕಿದೆ. ರೈತರ ಮಕ್ಕಳು ಕೃಷಿಭೂಮಿಯಲ್ಲಿ ಕೆಲಸ ಮಾಡುವುದು ಒಂದು ಗೌರವ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.ರೈತನಾಗಿ ಬದುಕುವುದು ದೌರ್ಭಾಗ್ಯವಲ್ಲ ಬದಲಾಗಿ ಅದೊಂದು ಸೌಭಾಗ್ಯ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.

ನಗರದಿಂದ ಮತ್ತೆ ಊರುಗಳಿಗೆ ಹಿಂದಿರುಗಿ ತಮ್ಮ ತಮ್ಮ ಕೃಷಿಭೂಮಿಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ನಿಮಗೆಲ್ಲರಿಗೂ ಯಶಸ್ಸು ಸಿಗಲಿ. ರೈತನ ಮಗನೆಂದು ಹೆಮ್ಮೆಯಿಂದ ಹೇಳಿ. ವಿದ್ಯಾಭ್ಯಾಸವಿರುವ ಯುವಕರು ವ್ಯವಸಾಯಕ್ಕಾಗಿ ಜಮೀನಿಗಿಳಿದರೆ ಮಧ್ಯವರ್ತಿಗಳ ಮೋಸವೂ ಕಡಿಮೆಯಾಗಲಿದೆ. ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಬಳಸಿಕೊಳ್ಳುವ ಅವಕಾಶವಿದೆ.‌ ಕೃಷಿಯಲ್ಲೆ ಉನ್ನತ ಪದವಿ ಪಡೆದ ರೈತರ ಮಕ್ಕಳೇ ದೇಶದ ಕೃಷಿನೀತಿಯನ್ನು ನಿರ್ಧರಿಸುವಂತಾಗಲಿ. ಇದರ ಜೊತೆಗೆ ಸರ್ಕಾರಗಳು ಸಹಾ ಕೃಷಿ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹವನ್ನು ನೀಡಿದರೆ ದೇಶದಲ್ಲಿ ರೈತನೆಂದರೆ ಎದ್ದು ಕೈಮುಗಿಯುವ ದಿನಗಳು ದೂರವಿಲ್ಲ.

ನಾನು ಸಹಾ ರೈತನ ಮಗನಾಗಿದ್ದು ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ‌ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ’. ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅಲ್ಲದೇ ತಮ್ಮ ಜಮೀನಿನಲ್ಲಿ ಓಡಾಡುತ್ತಿರುವ ಫೋಟೊಗಳನ್ನೂ ಶೇರ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.