ವೈರಲ್ ಆಯ್ತು ಗೌತಮ್ ಗಂಭೀರ್- ಮಹೇಂದ್ರ ಸಿಂಗ್ ಧೋನಿ ಫೋಟೋ
Team Udayavani, Apr 1, 2022, 4:39 PM IST
ಮುಂಬೈ: ಇಲ್ಲಿನ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ. ಈ ಮೂಲಕ ಐಪಿಎಲ್ ನಲ್ಲಿ ತನ್ನ ಮೊದಲ ವಿಜಯವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಕಂಡಿದೆ.
ರನ್ ಮಳೆಗೆ ಸಾಕ್ಷಿಯಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ ನಾಯಕತ್ವದ ಸಿಎಸ್ ಕೆ ತಂಡ 210 ರನ್ ಗಳಿಸಿದ್ದರೆ, ಕೆ ಎಲ್ ರಾಹುಲ್ ನಾಯಕತ್ವದ ಲಕ್ನೋ ತಂಡ ಈ ಗುರಿಯನ್ನು ತಲುಪಿ ಗೆಲುವು ಕಂಡಿತು.
ನಾಯಕ ರಾಹುಲ್, ಕ್ವಿಂಟನ್ ಡಿಕಾಕ್, ಎವಿನ್ ಲೆವಿಸ್ ಮತ್ತು ಆಯುಷ್ ಬದೋನಿ ಬ್ಯಾಟಿಂಗ್ ನೆರವಿನಿಂದ ಅಂತಿಮ ಓವರ್ ನಲ್ಲಿ ಎಲ್ಎಸ್ ಜಿ ತಂಡ ಗೆಲುವಿನ ನಗೆ ಬೀರಿತು. ಮೊದಲ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲನುಭವಿಸಿದ್ದ ರಾಹುಲ್ ಪಡೆ ಗುರುವಾರ ಮೊದಲ ಗೆಲುವಿನ ಸಿಹಿ ಅನುಭವಿಸಿತು.
ಇದನ್ನೂ ಓದಿ:ತನ್ನ ದಾಖಲೆ ಮುರಿದ ಡ್ವೇನ್ ಬ್ರಾವೋಗೆ ಶುಭ ಕೋರಿದ ಲಸಿತ್ ಮಾಲಿಂಗ
ಪಂದ್ಯದ ಬಳಿಕ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಮತ್ತು ಸಿಎಸ್ ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಚರ್ಚೆ ನಡೆಸುತ್ತಿರುವುದು ಕಂಡು ಬಂತು. ಪಂದ್ಯದ ಬಳಿಕ ಈ ಚಿತ್ರಗಳನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಗೌತಮ್ ಗಂಭೀರ್ “ಇಟ್ ವಾಸ್ ನೈಸ್ ಕ್ಯಾಚಿಂಗ್ ಅಪ್ ಸ್ಕಿಪ್ಪರ್” ಎಂದು ಬರೆದುಕೊಂಡಿದ್ದಾರೆ.
View this post on Instagram
2011ರ ವಿಶ್ವಕಪ್ ಫೈನಲ್ ಪಂದ್ಯದ ಹೀರೋಗಳಿಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೂಡಾ ಈ ಪೋಸ್ಟ್ ಗೆ ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ