ಮುಂಬೈ-ರಾಜಸ್ಥಾನ ಕಾದಾಟ: ಟಾಸ್ ಗೆದ್ದ ರೋಹಿತ್; ಸೂರ್ಯಕುಮಾರ್ ಗಿಲ್ಲ ಜಾಗ
Team Udayavani, Apr 2, 2022, 3:01 PM IST
ಮುಂಬೈ: ಈ ಬಾರಿ ಐಪಿಎಲ್ ಕೂಟದ ಎರಡನೇ ವೀಕೆಂಡ್ ಆಟ ಇಂದು ಶುರವಾಗಿದೆ. ಇಂದಿನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.
ರಾಜಸ್ಥಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ನಥನ್ ಕೌಲ್ಟರ್ ನೈಲ್ ಬದಲಿಗೆ ನವದೀಪ್ ಸೈನಿ ತಂಡ ಕೂಡಿಕೊಂಡಿದ್ದಾರೆ. ಆದರೆ ಫಿಟ್ ಆಗಿ ತಂಡ ಕೂಡಿಕೊಂಡಿರುವ ಸೂರ್ಯಕುಮಾರ್ ಯಾದವ್ ಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನ ನೀಡಲಾಗಿಲ್ಲ.
ಇದನ್ನೂ ಓದಿ:ಹೊಸ ದಾಖಲೆಯ ಉತ್ಸಾಹದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ
ರಾಜಸ್ಥಾನ ರಾಯಲ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು.
ತಂಡಗಳು
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿ.ಕೀ), ರೋಹಿತ್ ಶರ್ಮಾ (ನಾ), ಅನ್ಮೋಲ್ ಪ್ರೀತ್, ತಿಲಕ್ ವರ್ಮಾ, ಕೈರನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ತೈಮಲ್ ಮಿಲ್ಸ್, ಬಾಸಿಲ್ ಥಂಪಿ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾ ಮತ್ತು ವಿ.ಕೀ), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಯುಜುವೇಂದ್ರದ್ರ ಚಾಹಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ