ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ಅಗತ್ಯವಿದೆ: ರವಿಶಾಸ್ತ್ರಿ


Team Udayavani, Apr 21, 2022, 8:20 AM IST

Raviಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ಅಗತ್ಯವಿದೆ: ರವಿಶಾಸ್ತ್ರಿ

ಮುಂಬಯಿ: ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ ಇದೀಗ ಮಾನಸಿಕವಾಗಿ ಬಳಲಿದ್ದಾರೆ ಮತ್ತು ಇನ್ನೂ ಆರೇಳು ವರ್ಷ ದೇಶದ ಪರ ಕ್ರಿಕೆಟ್‌ ಆಡಬೇಕಿದ್ದರೆ ಸದ್ಯ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಭಾರತೀಯ ತಂಡದ ಮಾಜಿ ಕೋಚ್‌ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಈ ಐಪಿಎಲ್‌ನಲ್ಲಿ ಕೊಹ್ಲಿ ಅವರ ಬ್ಯಾಟಿಂಗ್‌ ನೀರಸವಾಗಿ ಸಾಗುತ್ತಿದೆ. 7 ಪಂದ್ಯಗಳಲ್ಲಿ ಕೇವಲ ಎರಡು ಬಾರಿ 40 ಪ್ಲಸ್‌ ರನ್‌ ಗಳಿಸಿದ್ದಾರೆ.

ಕೊಹ್ಲಿ ಎಲ್ಲ ಮಾದರಿಯೂ ಒಳಗೊಂಡಂತೆ ಕಳೆದ 100 ಪಂದ್ಯಗಳಲ್ಲಿ ಒಮ್ಮೆಯೂ ಶತಕ ಸಿಡಿಸಿಲ್ಲ. ಇದರ ನಡುವೆ ಟಿ20 ಕ್ರಿಕೆಟ್‌ನಲ್ಲಿ ಅವರು ಭಾರತ ಮತ್ತು ಆರ್‌ಸಿಬಿ ನಾಯಕತ್ವದಿಂದ ಹಿಂದೆ ಸರಿದಿದ್ದಾರೆ. ಟೆಸ್ಟ್‌ ಮತ್ತು ಏಕದಿನ ತಂಡದ ನಾಯಕತ್ವದಿಂದ ಅವರನ್ನು ಕೈಬಿಡಲಾಗಿದೆ.

ಕ್ರಿಕೆಟ್‌ ಆಡಿ ಬಳಲಿದ್ದಾರೆ
“ಕೋವಿಡ್‌-19 ನಿರ್ಬಂಧದಿಂದಾಗಿ ಐಪಿಎಲ್‌ ಆಟಗಾರರು ಬಯೋ ಬಬಲ್ಸ್‌ ಒಳಗಡೆ ಇರಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕೊಹ್ಲಿ ಅವರಂತಹ ಆಟಗಾರರನ್ನು ಬಹಳಷ್ಟು ಎಚ್ಚರಿಕೆ ಮತ್ತು ಸಹಾನುಭೂತಿಯಿಂದ ನೋಡಿಕೊಳ್ಳಬೇಕಾಗಿದೆ. ನೇರ ಮಾತುಗಳಲ್ಲಿ ಹೇಳುವುದಾದರೆ ವಿರಾಟ್‌ ಕೊಹ್ಲಿ ಬಹಳಷ್ಟು ಕ್ರಿಕೆಟ್‌ ಆಡಿ ಬಳಲಿದ್ದಾರೆ. ಯಾರಿಗಾದರೂ ವಿಶ್ರಾಂತಿಯ ಅಗತ್ಯವಿದ್ದರೆ ಅದು ಕೊಹ್ಲಿಗೆ…’ ಎಂದು ರವಿಶಾಸ್ತ್ರಿ ತಿಳಿಸಿದರು.

“ವಿಶ್ರಾಂತಿ ಎರಡು ತಿಂಗಳು ಅಥವಾ ಒಂದೂವರೆ ತಿಂಗಳು ಬೇಕಾಗಬಹುದು. ಅದು ಇಂಗ್ಲೆಂಡ್‌ ಪ್ರವಾದ ಮೊದಲು ಅಥವಾ ಅನಂತರ. ಆದರೆ ಅವರಿಗೆ ವಿಶ್ರಾಂತಿಯ ಅಗತ್ಯ ಮಾತ್ರ ಬಹಳ ಇದೆ. ಅವರು ಮುಂದೆ ಆರೇಳು ವರ್ಷ ಕ್ರಿಕೆಟ್‌ ಆಡಬೇಕಾಗಿದೆ. ಅದಕ್ಕಾಗಿ ನಾವು ಎಚ್ಚರ ವಹಿಸಬೇಕಾಗಿದೆ’ ಎಂದವರು ಹೇಳಿದರು. ಕೊಹ್ಲಿ ಮಂಗಳವಾರ ನಡೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಪೀಟರ್‌ಸನ್‌ ಅಭಿಪ್ರಾಯ
ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಕೆವಿನ್‌ ಪೀಟರ್‌ಸನ್‌ ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಅವರು ಮತ್ತೆ ಬ್ಯಾಟಿಂಗ್‌ ವೈಭವಕ್ಕೆ ಮರಳಬೇಕಾದರೆ ಸದ್ಯ ಕ್ರಿಕೆಟ್‌ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರ ಇರಬೇಕು ಎಂದವರು ಹೇಳಿದ್ದಾರೆ. ಕಡಿಮೆ ಪಕ್ಷ ಆರು ತಿಂಗಳು ಕ್ರಿಕೆಟ್‌ನಿಂದ ದೂರ ಇರಿ. ಸಾಮಾಜಿಕ ಜಾಲತಾಣವನ್ನು ಆಫ್ ಮಾಡಿ. ವಿಶ್ರಾಂತಿ ಪಡೆದು ಮತ್ತೆ ಬ್ಯಾಟಿಂಗ್‌ ಅಬ್ಬರಕ್ಕೆ ಮರಳಿ. ನಾನು ತಡವಾಗಿ ನಿಮ್ಮನ್ನು ನೋಡುತ್ತೇನೆ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.