ಮುಂಬೈ ಇಂಡಿಯನ್ಸ್ ಬಳಗ ಸೇರಿದ ಸೂರ್ಯಕುಮಾರ್ ಯಾದವ್
Team Udayavani, Mar 31, 2022, 4:20 PM IST
ಮುಂಬೈ: ಗಾಯದ ಕಾರಣದಿಂದ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಇಂದು ತಂಡ ಕೂಡಿಕೊಂಡಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮುಂದಿನ ಪಂದ್ಯಕ್ಕೆ ಸೂರ್ಯ ಕುಮಾರ್ ಯಾದವ್ ಲಭ್ಯರಿದ್ದಾರೆ ಎಂದು ಫ್ರಾಂಚೈಸಿ ಹೇಳಿಕೊಂಡಿದೆ.
ಕಳೆದ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಕೈಬೆರಳಿಗೆ ಗಾಯಗೊಂಡಿದ್ದರು. ನಂತರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ನಲ್ಲಿ ಸೂರ್ಯಕುಮಾರ್ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಯಾದವ್ ಗುಣಮುಖರಾಗಿದ್ದು, ಐಪಿಎಲ್ ಆಡಲು ಫಿಟ್ ಆಗಿದ್ದಾರೆ.
“ಸೂರ್ಯಕುಮಾರ್ ಯಾದವ್ ಅವರು ತಮ್ಮ ಕಡ್ಡಾಯ ಕ್ವಾರಂಟೈನ್ ಮುಗಿಸಿದ್ದಾರೆ. ಕೈರನ್ ಪೊಲಾರ್ಡ್, ಇಶಾನ್ ಕಿಶನ್ ಮತ್ತು ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಜಿಮ್ ಸೆಷನ್ ಗಾಗಿ ತಂಡವನ್ನು ಸೇರಿಕೊಂಡರು” ಎಂದು ಮುಂಬೈ ಇಂಡಿಯನ್ಸ್ ಹೇಳಿಕೊಂಡಿದೆ.
ಇದನ್ನೂ ಓದಿ:ಸೂಪರ್ ಸ್ಟಾರ್ ಗಳು ಬಿಡುಗಡೆ ಮಾಡಲಿದ್ದಾರೆ ವಿಕ್ರಾಂತ್ ರೋಣ ಟೀಸರ್
ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು. ಬ್ರೆಬೋರ್ನ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 178 ರನ್ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 18.2 ಓವರ್ ಗಳಲ್ಲಿ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು