ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ರೂ ದಂಡ: ಕಾರಣವೇನು ?
Team Udayavani, Sep 30, 2020, 9:26 AM IST
ಅಬುಧಾಬಿ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಗ್ಗರಿಸಿತ್ತು. ಇದೀಗ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ದಂಡ ವಿಧಿಸಲಾಗಿದ್ದು, ಸೋಲಿನ ಬೆನ್ನಲ್ಲೇ ಮತ್ತೊಂದು ಅಘಾತ ಎದುರಾಗಿದೆ.
ಸನ್ ರೈಸರ್ಸ್ ಹೈದರಾಬಾದ್ ನೀಡಿದ 163 ರನ್ ಸವಾಲನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 15 ರನ್ ಗಳ ಸೋಲನ್ನು ಕಂಡಿತ್ತು. ಆದರೇ ಈ ಪಂದ್ಯದಲ್ಲಿ ಡೆಲ್ಲಿ ತಂಡ ನಿಧಾನಗತಿಯ ಓವರ್ ರೇಟ್ ಪ್ರದರ್ಶಿಸಿದ್ದರಿಂದ, ನಾಯಕ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ದಂಡ ವಿಧಿಸಲಾಗಿದೆ.
13ನೇ ಆವೃತ್ತಿಯಲ್ಲಿ ಡೆಲ್ಲಿ ತಂಡ ಮೊದಲ ಬಾರಿಗೆ ಐಪಿಎಲ್ ನೀತಿಗಳನ್ನು ಉಲ್ಲಂಘಿಸಿದ್ದರಿಂದ ನಾಯಕ ಶ್ರೇಯಸ್ ಅಯ್ಯರ್ ಗೆ ಮಾತ್ರ ದಂಡ ವಿಧಿಸಲಾಗಿದೆ. ಈ ಋತುವಿನಲ್ಲಿ ಆಡಿದ 3 ಪಂದ್ಯದಲ್ಲಿ ಡೆಲ್ಲಿ 2 ರಲ್ಲಿ ಗೆದ್ದು ಪಾಯಿಂಟ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಚೇಸಿಂಗ್ ನಲ್ಲಿ ಮುಗ್ಗರಿಸಿದ ಡೆಲ್ಲಿ ; ಸನ್ ರೈಸರ್ಸ್ ಗೆ 15 ರನ್ ಜಯ
ಈ ಮೊದಲು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಗೂ 12 ಲಕ್ಷ ದಂಡ ವಿಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ
ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ
ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ
ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ
ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್