ಅಗ್ರಸ್ಥಾನಕ್ಕಾಗಿ ಪೈಪೋಟಿ: ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ
Team Udayavani, Oct 11, 2020, 7:00 PM IST
ಅಬುಧಾಬಿ: ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಇಂದು ಮುಖಾಮುಖಿಯಾಗುತ್ತಿದೆ.
ಮುಂಬೈ ವಿರುದ್ಧ ಟಾಸ್ ಗೆದ್ದು ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇಂದಿನ ಪಂದ್ಯದಲ್ಲಿ ಮೊದಲ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಡೆಲ್ಲಿ ತಂಡ ಇದ್ದರೆ ಅಗ್ರಸ್ಥಾನಕ್ಕೇರುವ ಉತ್ಸಾಹದಲ್ಲಿ ಮುಂಬೈ ಇದೆ. ಕಳೆದ ಪಂದ್ಯದಲ್ಲಿ ಎರಡೂ ತಂಡಗಳು ಗೆದ್ದಿದ್ದು ಅತ್ಮವಿಶ್ವಾಸ ಅಲೆಯಲ್ಲಿದೆ.
ಈವರೆಗೂ ಎರಡೂ ತಂಡಗಳು 24 ಬಾರಿ ಮುಖಾಮುಖಿಯಾಗಿದ್ದು, 12ರಲ್ಲಿ ಡೆಲ್ಲಿ ಮತ್ತು 12ರಲ್ಲಿ ಮುಂಬೈ ಜಯಗಳಿಸಿವೆ.
ಆಡುವ ಹನ್ನೊಂದರ ಬಳಗ
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ , ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್, ಆಕ್ಸರ್ ಪಟೇಲ್, ಹರ್ಷಲ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನೋರ್ತ್ ಜೆ