ಪಂಜಾಬ್-ಡೆಲ್ಲಿ ಫೈಟ್: ಟಾಸ್ ಗೆದ್ದ ಶ್ರೇಯಸ್ ಪಡೆ ಬ್ಯಾಟಿಂಗ್ ಆಯ್ಕೆ: ತಂಡ ಇಂತಿದೆ…
Team Udayavani, Oct 20, 2020, 7:00 PM IST
ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 38 ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಶ್ರೇಯಸ್ ಬಳಗ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಸೂಪರ್ ಓವರ್ ನಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮಣಿಸಿ ಅತ್ಮವಿಶ್ವಾಸದ ಅಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತೇಲಾಡುತ್ತಿದೆ. ಮತ್ತೊಂದೆಡೆ ತಂಡಕ್ಕೆ ಗೇಲ್ ಆಗಮನ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸಿದೆ. ಇಂದಿನ ಪಂದ್ಯದೊಂದಿಗೆ ಉಳಿದ 5 ಮ್ಯಾಚ್ ಗಳನ್ನು ಗೆದ್ದರೇ ಮಾತ್ರ ಪಂಜಾಬ್ ಪ್ಲೇ ಆಪ್ ಹಂತ ಉಳಿಸಿಕೊಳ್ಳಲಿದೆ.
ಇನ್ನು 14 ಪಾಯಿಂಟ್ಸ್ ಗಳೊಂದಿಗೆ ಅಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ಲೇ ಆಫ್ ಹಂತದ ಸಮೀಪದಲ್ಲಿದೆ. ಇಂದಿನ ಪಂದ್ಯ ಗೆದ್ದು ಮೊದಲ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ಯೋಜನೆಯಲ್ಲಿ ಶ್ರೇಯಸ್ ಬಳಗವಿದೆ.
ಇತ್ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು 11 ರಲ್ಲಿ ಡೆಲ್ಲಿ ಮತ್ತು 14 ರಲ್ಲಿ ಪಂಜಾಬ್ ಗೆಲುವು ಸಾಧಿಸಿದೆ.
ಆಡುವ ಹನ್ನೊಂದರ ಬಳಗ
ಕಿಂಗ್ಸ್ ಇಲೆವೆನ್ ಪಂಜಾಬ್: ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಮುರುಗನ್ ಅಶ್ವಿನ್, ಜೇಮ್ಸ್ ನೀಶಮ್, ಮೊಹಮ್ಮದ್ ಶಮಿ, ರವಿ ಬಿಸ್ನೋಯ್, ಹರ್ಷ್ದೀಪ್ ಸಿಂಗ್
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಾಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಶಿಮ್ರಾನ್ ಹೆಟ್ಮಿಯರ್, ಡೇನಿಯಲ್ ಸ್ಯಾಮ್ಸ್, ಮಾರ್ಕಸ್ ಸ್ಟೊಯಿನಿಸ್, ಆಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ತುಷಾರ್ ದೇಶಪಾಂಡೆ, ಕಗಿಸೊ ರಬಾಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ
Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?
21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?