ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

Team Udayavani, Sep 28, 2020, 4:45 PM IST

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹೊಸದಿಲ್ಲಿ: ಇತ್ತೀಚೆಗೆ ಭಾರತದ ಕ್ರಿಕೆಟ್‌ ತಂಡ ಕಂಡ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಹಾರ್ದಿಕ್‌ ಪಾಂಡ್ಯಾ ಕೂಡ ಒಬ್ಬರು. ಆದರೆ 2019ರಲ್ಲಿ ಪಾಂಡ್ಯಾ ಬೆನ್ನು ಗಾಯಕ್ಕೆ ಒಳಗಾಗಿ ಸುದೀರ್ಘ‌ ಸಮಯದ ವರೆಗೆ ಕ್ರಿಕೆಟ್‌ನಿಂದ ದೂರ ಉಳಿಯಬೇಕಾಯಿತು. ಮುಂಬಯಿ ಇಂಡಿಯನ್ಸ್‌ ತಂಡ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಹಾರ್ದಿಕ್‌ ಮೇಲೆ ಇಟ್ಟಿರುವ ನಿರೀಕ್ಷೆ ಅಪಾರ. ಐಪಿಎಲ್‌ನ ಈ ಋತುವಿನಲ್ಲಿ ಹಾರ್ದಿಕ್‌ ಮುಂದೆ ಬಹುಡೊಡ್ಡ ಸವಾಲಿದೆ ಎಂದರೆ ತಪ್ಪಾಗಲಾರದು.

ಇದುವರೆಗೆ ಸಿಎಸ್‌ಕೆ ಮತ್ತು ಕೆಕೆಆರ್‌ ವಿರುದ್ದದ ಪಂದ್ಯಗಳಲ್ಲಿ ಹಾರ್ದಿಕ್‌ಗೆ ಬೌಲಿಂಗ್‌ ಮಾಡಲು ಅವಕಾಶ ನೀಡಿಲ್ಲ. ಇಂದು ನಡೆಯುವ ಆರ್‌ಸಿಬಿ ವಿರುದ್ದದ ಪಂದ್ಯದಲ್ಲಾದರೂ ಮತ್ತೆ ಹಾರ್ದಿಕ್‌ ಬೌಲಿಂಗ್‌ ದಾಳಿಗೆ ಇಳಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಪಾಂಡ್ಯಾ ಮತ್ತೆ ಯಾವಾಗ ಬೌಲಿಂಗ್‌ ಮಾಡುತ್ತಾರೆ ಎಂಬ ಪ್ರಶ್ನೆಗೆ ಮುಂಬೈ ಇಂಡಿಯನ್ಸ್‌ ತಂಡದ ಕ್ರಿಕೆಟ್‌ ಕಾರ್ಯಚರಣೆಯ ನಿರ್ದೇಶಕ (ಡಿಸಿಒ) ಜಹೀರ್‌ ಖಾನ್‌ ಉತ್ತರಿಸಿದ್ದಾರೆ. ಪಾಂಡ್ಯಾ ಬೌಲಿಂಗ್‌ ಮಾಡಲು ಉತ್ಸುಕನಾಗಿದ್ದು, ಆದರೆ ಆತನ ದೇಹ ಬೌಲಿಂಗ್‌ ಗೆ ತಯಾರಿದೆಯಾ ಎನ್ನುವುದನ್ನು ಮ್ಯಾನೇಜ್ ಮೆಂಟ್‌ ಖಚಿತ ಪಡಿಸಿಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ:ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಸಾಕು ಈ ಹೊಸ ಮೈಲಿಗಲ್ಲು ಸಾಧಿಸಲು!

ಹಾರ್ದಿಕ್‌ ಬೌಲಿಂಗ್‌ ಮಾಡುವುದನ್ನು ನಾನು ಎದರು ನೋಡುತ್ತಿದ್ದೇನೆ. ಯಾವುದೇ ಸಂದರ್ಭದಲ್ಲೂ ಪಂದ್ಯದ ಗತಿಯನ್ನು ಬದಲಿಸಬಲ್ಲ ಸಾಮರ್ಥ್ಯ ಆತನಿಗಿದೆ. ಆತ ಬೌಲಿಂಗ್‌ ಮಾಡಲು ಸಮರ್ಥನಾಗಿದ್ದಾನಾ ಎಂಬುದಕ್ಕೆ ಫಿಟ್ನೆಸ್ ತಜ್ಞರ ಸಲಹೆ ಅಗತ್ಯವಿದೆ ಎಂದು ಜಹೀರ್‌ ಖಾನ್‌ ಹೇಳಿದರು.

ಪ್ರಸಕ್ತ ಐಪಿಎಲ್‌ ಋತುವಿನ ಸಿಎಸ್‌ಕೆ ಮತ್ತು ಕೆಕೆರ್‌ ವಿರುದ್ದದ ಪಂದ್ಯಗಳಲ್ಲಿ ಕ್ರಮವಾಗಿ ಹಾರ್ದಿಕ್‌ 18 ಮತ್ತು 14 ರನ್‌ ಗಳಿಸಿದ್ದಾರೆ. ಇದರಿಂದ ಆತ ಬ್ಯಾಟಿಂಗ್‌ನಲ್ಲಿ ಫಿಟ್‌ ಎನಿಸಿದರೂ ಬೌಲಿಂಗ್‌ ಮಾಡುವುದು ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.