Chamarajanagar:ಬಾಹ್ಯಾಕಾಶ ತಂತ್ರಜ್ಞಾನ ಪ್ರಾಧ್ಯಾಪಕ ಗೋಪಾಲನ್ ಜಗದೀಶ್‌ಗೆ ರಾಜ್ಯೋತ್ಸವ ಗರಿ

16 ಪೇಟೆಂಟ್ ಹೊಂದಿರುವ ಜಗದೀಶ್ ಕನ್ನಡ ಮಾಧ್ಯಮದ ವಿದ್ಯಾರ್ಥಿ

Team Udayavani, Oct 31, 2023, 5:55 PM IST

Chamarajanagar ಬಾಹ್ಯಾಕಾಶ ತಂತ್ರಜ್ಞಾನ ಪ್ರಾಧ್ಯಾಪಕ ಗೋಪಾಲನ್ ಜಗದೀಶ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ: ಕರ್ನಾಟಕ ಸರ್ಕಾರ ನೀಡುವ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಕೊಳ್ಳೇಗಾಲದವರಾದ ಭಾರತೀಯ ವಿಜ್ಞಾನ ಸಂಸ್ಥೆಯ ಬಾಹ್ಯಾಕಾಶ ತಂತ್ರಜ್ಞಾನ ಪ್ರಾಧ್ಯಾಪಕ ಡಾ. ಗೋಪಾಲನ್ ಜಗದೀಶ್ ಅವರು ಪಾತ್ರರಾಗಿದ್ದಾರೆ.

ಡಾ. ಗೋಪಾಲನ್ ಜಗದೀಶ್ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಬಾಹ್ಯಾಕಾಶ ತಂತ್ರಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಶಬ್ದಾತೀತ ವಾಯುಬಲ ವಿಜ್ಞಾನ ಮತ್ತು ಘಾತಕಕಾರಿ ತರಂಗಗಳ ಕುರಿತು ವಿಶೇಷ ಸಂಶೋಧನೆ ಮಾಡಿದ್ದಾರೆ.

ಕೊಳ್ಳೇಗಾಲ ಪಟ್ಟಣದ ಅರಣ್ಯ ಅಧಿಕಾರಿ ದಿ. ಗೋಪಾಲನ್ ಅವರ ಪುತ್ರರಾದ ಜಗದೀಶ್ ಅವರು, ಕೊಳ್ಳೇಗಾಲದ ಆರ್.ಸಿ. ಮಿಷನ್ ಕಾನ್ವೆಂಟ್ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಸಿದರು. ಬಳಿಕ ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢಶಾಲೆ, ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ತಾಂತ್ರಿಕ ವಿದ್ಯಾಲಯದಲ್ಲಿ ಬಿ.ಇ, ರಾಂಚಿಯ ಬಿರ್ಲಾ ತಾಂತ್ರಿಕ ಸಂಸ್ಥೆಯಲ್ಲಿ ಎಂ.ಇ. ಮತ್ತು ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಎಚ್‌ಡಿ ಪದವಿ ಪಡೆದರು.

ಬಳಿಕ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬಾಹ್ಯಾಕಾಶ ವಿಜ್ಞಾನ ಪ್ರಾಧ್ಯಾಪಕರಾಗಿ ಇದುವರೆಗೂ ಸೇವೆ ಸಲ್ಲಿಸುತ್ತಿದ್ದಾರೆ. ಜಗದೀಶ್ ಅವರು ಘಾತಕಕಾರಿ ತರಂಗಗಳ ಕುರಿತಂತೆ 16 ಪೇಟೆಂಟ್‌ಗಳನ್ನು ಹೊಂದಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕುರಿತು, ದೆಹಲಿಯಲ್ಲಿದ್ದ ಅವರು ದೂರವಾಣಿ ಮೂಲಕ ಉದಯವಾಣಿಯೊಂದಿಗೆ ಮಾತನಾಡಿ, ನಾನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದವನು ಎಂಬುದು ಹೆಮ್ಮೆಯ ಸಂಗತಿ. ನಾನು ಅಪ್ಪಟ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ, ಕುವೆಂಪು ಅವರು ನನಗೆ ದೇವರಿದ್ದಂತೆ, ಡಿವಿಜಿಯವರು ನನ್ನ ಮೆಚ್ಚಿನ ಲೇಖಕರಲ್ಲೊಬ್ಬರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಸಂತೋಷದ ವಿಷಯ ಎಂದು ಹರ್ಷ ಹಂಚಿಕೊಂಡರು.

ನನ್ನ ಎಸ್‌ಎಸ್‌ಎಲ್ ಸಿ. ಪಿಯುಸಿ ಶಿಕ್ಷಣವನ್ನು ಸರ್ಕಾರ ನೀಡಿದ ವಿದ್ಯಾರ್ಥಿ ವೇತನದಿಂದಲೇ ನಡೆಸಲು ಸಾಧ್ಯವಾಯಿತು. ಇದಕ್ಕಾಗಿ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈಗ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ನಮ್ಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಮನ್ನಣೆ ನೀಡಿದಂತಾಗಿದೆ. ಇದಕ್ಕಾಗಿ ನಾನು ರಾಜ್ಯ ಸರ್ಕಾರಕ್ಕೆ, ನನ್ನ ವಿದ್ಯಾರ್ಥಿಗಳಿಗೆ, ನನ್ನ ಅಧ್ಯಾಪಕರಿಗೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.