CONNECT WITH US  

ಕಾರ್ನಾಡ್‌ ವಿರುದ್ಧ ಭಾರಿ ಪ್ರತಿಭಟನೆ

ಚಿಂತಾಮಣಿ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಟ್ಟಿರುವ ನಾಡುಪ್ರಭು ಕೆಂಪೇಗೌಡರ ಹೆಸರಿನ ಬದಲು ಟಿಪ್ಪು ಸುಲ್ತಾನ್‌ ಹೆಸರು ನಾಮಕರಣ ಮಾಡಬೇಕೆಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಾಹಿತಿ ಗಿರೀಶ್‌ ಕಾರ್ನಾಡ್‌ ಹೇಳಿಕೆ ಖಂಡಿಸಿ ಗುರುವಾರ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಒಕ್ಕಲಿಗರ ವೇದಿಕೆಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಒಕ್ಕಲಿಗ ಯುವ ವೇದಿಕೆ ಕಾರ್ಯಕರ್ತರು ನಗರದ ಮುಖ್ಯ ರಸ್ತೆಗಳಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ಗಿರೀಶ್‌ ಕಾರ್ನಾಡ್‌ ವಿರುದ್ಧ ಘೋಷಣೆಗಳನ್ನು ಕೂಗಿದರು. ಗಿರೀಶ್‌ ಕಾರ್ನಾಡ್‌ರು ತಮ್ಮ ಸ್ಥಾನದ ಗೌರವ, ಘನತೆಯನ್ನು ಕಳೆದುಕೊಳ್ಳುತ್ತಿdAರೆ.

ಮಾನಸಿಕ ಅಸ್ವಸ್ಥರಾದಂತೆ ವರ್ತಿಸುತ್ತಿರೆ. ಅವರನ್ನು ಕೂಡಲೇ ಮಾನಸಿಕ ರೋಗಿಗಳ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪಾಳು ಬಿದ್ದ ಬೆಂಗಳೂರನ್ನು ಇಡೀ ದೇಶಕ್ಕೆ ಮಾದರಿಯಾಗಿ ನಾಡು ಪ್ರಭು ಕೆಂಪೇಗೌಡರು ಸತತ ಪರಿಶ್ರಮದಿಂದ ನಿರ್ಮಿಸಿ¨ªಾರೆ. ಆದರೆ, ಗಿರೀಶ್‌ ಕಾರ್ನಾಡ್‌ ರವರು ಅಲ್ಪಸಂಖ್ಯಾತರ ಓಲೈಕೆಗಾಗಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು$ಸುಲ್ತಾನ್‌ ಹೆಸರು ಇಡಬೇಕೆಂದು ಹೇಳಿರುವುದು ಸರಿಯಲ್ಲ. ಕೂಡಲೇ ಗಿರೀಶ್‌ ಕಾರ್ನಾಡ್‌ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಬೇಕು. ಅವರಿಗೆ ನೀಡಿರುವ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಪ್ರಶಸ್ತಿ, ಪುರಸ್ಕಾರಗಳನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಪ್ರತಿಭಟನಾನಿರತ ಒಕ್ಕಲಿಗ ಸಂಘದ ಮುಖಂಡರು ಆಗ್ರಹಿಸಿದರು.

ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ: ನಗರದ ಮುಖ್ಯ ರಸ್ತೆಗಳಲ್ಲಿ ಗಿರೀಶ್‌ ಕಾರ್ನಾಡ್‌ ವಿರುದ್ಧ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ಬಳಿಕ ನಗರದ ಶ್ರೀ ಯೋಗಿನಾರೇಯಣ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಮುಖಂಡರು ಮಾನವ ಸರಪಳಿ ನಿರ್ಮಿಸಿದರು. ಕಾರ್ನಾಡ್‌ ಹೇಳಿಕೆ ಒಕ್ಕಲಿಗರ ಮನಸ್ಸಿಗೆ ನೋವುಂಟು ಮಾಡಿದೆ. ಆದ್ದರಿಂದ ಕಾರ್ನಾಡ್‌ ಕೂಡಲೇ ರಾಜ್ಯದ ಸಮಸ್ತ ಒಕ್ಕಲಿಗರ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು.

ಕಾರ್ನಾಡ್‌ ಪ್ರತಿಕೃತಿ ದಹನ: ಗಿರೀಶ್‌ ಕಾರ್ನಾಡ್‌ರ ಪ್ರತಿಕೃತಿಯನ್ನು ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ನಗರದ ಬೆಂಗಳೂರು ವೃತ್ತದಲ್ಲಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದರು.

ರಾಜ್ಯದಿಂದ ಗಡಿಪಾರು ಮಾಡಿ: ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕಲಿಗ ಸಮುದಾಯದ ಮುಖಂಡರು, ಗಿರೀಶ್‌ ಕಾರ್ನಾಡ್‌ರನ್ನು ಕೂಡಲೇ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಒಕ್ಕಲಿಗ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವ ಗಿರೀಶ್‌ ಕಾರ್ನಾಡ್‌ ಮೊದಲು ರಾಜ್ಯದ ಇತಿಹಾಸವನ್ನು ಅರಿಯಬೇಕೆಂದರು.

ಪ್ರತಿಭಟನೆಯಲ್ಲಿ ಸ್ಥಳೀಯ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಪ್ಪಾಜಿರೆಡ್ಡಿ, ನಗರಸಭಾ ಸದಸ್ಯ ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾದ ಜಿÇÉಾಧ್ಯಕ್ಷ ಮಿಟ್ಟಹಳ್ಳಿ ಮಂಜುನಾಥರೆಡ್ಡಿ, ಯುವ ವಕೀಲ ಈಶ್ವರಗೌಡ, ಒಕ್ಕಲಿಗರ ಸಂಘದ ಯುವ ಮುಖಂಡರಾದ ಎಲ್‌.ಕೃಷ್ಣಮೂರ್ತಿ, ನಾಗದೇನಹಳ್ಳಿ ನಾರಾಯಣಸ್ವಾಮಿ, ಗೋಪಸಂದ್ರ ರಘುನಾಥರೆಡ್ಡಿ, ಎಬಿವಿಪಿ ಮುಖಂಡರಾದ ಮಂಜುನಾಥರೆಡ್ಡಿ, ಸುರೇಶರೆಡ್ಡಿ ಸೇರಿದಂತೆ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಿರೀಶ್‌ ಕಾರ್ನಾಡ್‌ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಠಾಣೆ ಆರಕ್ಷಕ ನಿರೀಕ್ಷಕ ಮಂಜುನಾಥ ಹಾಗೂ ಸಿಬ್ಬಂದಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಿದ್ದರು.
 

Trending videos

Back to Top