CONNECT WITH US  

ಡಾ.ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ?

ಬೆಂಗಳೂರು: ಡಾ. ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ಹಸ್ತಾಂತರಿಸುವುದಾಗಿ ಒಪ್ಪಿಗೆ ಪತ್ರ ನೀಡಿ, ಪುನಃ ತಗಾದೆ ತೆಗೆದಿರುವ ನಟ ದಿ.ಬಾಲಕೃಷ್ಣ ಕುಟುಂಬದ ಸದಸ್ಯರಿಂದ 10 ಎಕರೆ ಜಾಗವನ್ನು ಸಂಪೂರ್ಣವಾಗಿ ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಅಖೀಲ ಕರ್ನಾಟಕ ಡಾ.ವಿಷ್ಣುವರ್ಧನ್‌ ಅಭಿಮಾನಿಗಳ ಸಂಘ ಆಗ್ರಹಿಸಿದೆ.

ಕಳೆದ ಹಲವು ವರ್ಷಗಳಿಂದ ಸ್ಮಾರಕ ಜಾಗದ ಬಗ್ಗೆ ಗೊಂದಲ ಸೃಷ್ಟಿಸಿರುವ ದಿ.ಬಾಲಕೃಷ್ಣ ಕುಟುಂಬ ಸದಸ್ಯರು ಇತ್ತೀಚೆಗೆ ನಗರ ಜಿಲ್ಲಾಧಿಕಾರಿಗಳ ಬಳಿ 2 ಎಕರೆ ಜಾಗ ನೀಡುವುದಾಗಿ ಒಪ್ಪಿಗೆ ಪತ್ರ ನೀಡಿದ್ದರು. ಇದೀಗ ಕಾಮಗಾರಿ ಶುರುವಾಗುವ ಹಂತದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಜಿಲ್ಲಾಧಿಕಾರಿಗಳು ಒತ್ತಾಯಪೂರ್ವಕವಾಗಿ ಒಪ್ಪಿಗೆ ಪತ್ರ ಪಡೆದಿದ್ದಾರೆ ಎಂದು ಗೀತಾ ಬಾಲಿ ಆರೋಪ ಮಾಡುತ್ತಿದ್ದಾರೆ.

ಕ್ಷಣಕ್ಕೊಂದು ಹೇಳಿಕೆ ನೀಡುವ ಮೂಲಕ ಮೇರು ನಟ ವಿಷ್ಣುವರ್ಧನ್‌ ಅವರ ಸ್ಮಾರಕ ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ದಿ. ಬಾಲಕೃಷ್ಣ ಅವರ ಕುಟುಂಬ ಸದಸ್ಯರಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಬುದ್ಧಿ ಹೇಳಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಹೊಯ್ಸಳ ಮೂರ್ತಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿ ರಾಜುಗೌಡ, ಡಾ. ವಿಷ್ಣುಸೇನಾ ಸಮಿತಿ ರಾಜ್ಯಾಧ್ಯಕ್ಷ ಶರವಣ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

* ಜಿಲ್ಲಾಡಳಿತ ಗಮನಕ್ಕೆ ಬಂದಿಲ್ಲ
ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿರುವ ವಿಷ್ಣುವರ್ಧನ್‌ ಸಮಾಧಿ ಪ್ರಕರಣದ ಉಸ್ತುವಾರಿ ವಹಿಸಿಕೊಂಡಿರುವ ಶಿರಸ್ತೇದಾರ್‌ ಸಿದ್ದರಾಜು, ವಿಷ್ಣು ಸ್ಮಾರಕ ಕಾಮಗಾರಿ ಗುರುವಾರದಿಂದ ಪ್ರಾರಂಭವಾಗಲಿದೆ. ಕಾಮಗಾರಿಗೆ ತಮ್ಮ ವಿರೋಧ ಇದೆ ಎಂದು ಗೀತಾ ಬಾಲಿ ಅವರು ಅಧಿಕೃತವಾಗಿ ನಗರ ಜಿಲ್ಲಾಡಳಿತದ ಬಳಿ ಹೇಳಿಲ್ಲ ಎಂದಿದ್ದಾರೆ.

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top