CONNECT WITH US  

ವಲಯಾಧಿಕಾರಿ ನೇಮಕಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ರಾಜಕಾಲುವೆ ದುರಸ್ತಿ, ನಿರ್ವಹಣೆ ಪರಿಶೀಲನೆ ನಡೆಸುವ ಸಲುವಾಗಿ ಎಂಟು  ವಲಯಗಳಿಗೆ  ಅಧಿಕಾರಿಗಳನ್ನು ರಾಜ್ಯಸರ್ಕಾರ ನೇಮಿಸಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಸಿಟಿಜನ್‌ ಆ್ಯಕ್ಷನ್‌ ಫೋರಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ಮುಖ್ಯನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ, ಈ ಮಾಹಿತಿ ನೀಡಿದೆ.ರಾಜಕಾಲುವೆ ನಿರ್ವಹಣೆಗೆ ಸಂಬಂಧಿಸಿದಂತೆ ಅಗತ ಸಲಹೆಗಳನ್ನು ಅರ್ಜಿದಾರರು ನೀಡುವಂತೆ ಸೂಚಿಸಿದ ನ್ಯಾಯಪೀಠ ಸೆ.25ಕ್ಕೆ ವಿಚಾರಣೆ ಮುಂದೂಡಿದೆ.


Trending videos

Back to Top