CONNECT WITH US  

ಬಂಡವಾಳ ಸೆಳೆಯಲು ಜಿಮ್‌ ಬೇಕಿಲ್ಲ : ಜಾರಕಿಹೊಳಿ

ಬೆಂಗಳೂರು: ಕೈಗಾರಿಕೋದ್ಯಮಿಗಳ ಸಮಸ್ಯೆ ಪರಿಹರಿಸಲು ರಾಜ್ಯಾದ್ಯಂತ ಕೈಗಾರಿಕಾ ಅದಾಲತ್‌ ಆರಂಭಿಸುವುದಾಗಿ ಸಣ್ಣ ಕೈಗಾರಿಕಾ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡವಾಳ ಆಕರ್ಷಿಸಲು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುವ ಅಗತ್ಯವಿಲ್ಲ. ಈಗಾಗಲೇ ಇರುವ ಕೈಗಾರಿಕೆಗಳ ಸಮಸ್ಯೆ ಪರಿಹರಿಸುವ ಮೂಲಕ ಅವುಗಳನ್ನೇ ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಕೈಗಾರಿಕಾ ಅದಾಲತ್‌ ನಡೆಸಲು ನಿರ್ಧರಿಸಲಾಗಿದೆ ಎಂದರು.

ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೋದ್ಯಮಿಗಳ ಜತೆ ಈ ಸಂಬಂಧ ಚರ್ಚೆ ಆರಂಭಿಸಿದ್ದು, ಭಾನುವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಸಭೆ ನಡೆಸುತ್ತೇನೆ. ಮುಂದಿನ ವಾರ ಧಾರವಾಡದಲ್ಲಿ ಕೈಗಾರಿಕೋದ್ಯಮಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.

ಖಾತೆ ಬದಲಾವಣೆ ಕೇಳಲ್ಲ:
ಪ್ರಸ್ತುತ ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಖಾತೆಯಲ್ಲಿ ತೃಪ್ತಿ ಇದೆ. ಹಾಗಾಗಿ ಮುಂದಿನ ಸಚಿವ ಸಂಪುಟ ಪುನರ್‌ ರಚನೆ ವೇಳೆ ಖಾತೆ ಬದಲಿಸುವಂತೆ ಮುಖ್ಯಮಂತ್ರಿ ಅವರನ್ನು ಕೇಳುವುದಿಲ್ಲ ಎಂದು ಸತೀಶ್‌ ಜಾರಕಿಹೊಳಿ ತಿಳಿಸಿದರು.

Trending videos

Back to Top