CONNECT WITH US  

ಸಾಲಮನ್ನಾ ಋಣಭಾರ ಪತ್ರ ತೋರಿಸಿದ್ರೆ ರಾಜಕೀಯ ನಿವೃತ್ತಿ

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಆದೇಶ ಹೊರಡಿಸಿಲ್ಲ. ಲೀಡ್‌ ಬ್ಯಾಂಕ್‌ ಸೇರಿ ಆರ್‌ಬಿಐ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ರೈತರ ಸಾಲ ಮನ್ನಾ ಮಾಡಿದ್ದನ್ನು ತೋರಿಸಿದ್ರೆ, ನಾನು ಈ ಕ್ಷಣವೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಸವಾಲು ಹಾಕಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೂ ಯಾವುದೇ ರೈತರಿಗೆ ಸಾಲದ ಋಣಭಾರ ಪತ್ರ ತಲುಪಿಲ್ಲ. ಎಲ್ಲಿಯಾದರೂ, ಒಬ್ಬ ರೈತನನ್ನಾದರೂ ತೋರಿಸಲಿ, ನಾನು ಕೂಡಲೇ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ಹೊಂದುತ್ತೇನೆಂದು ಸವಾಲು ಹಾಕಿದರು.

ರಾಜ್ಯದಲ್ಲಿ ಸರ್ಕಾರ ಇದೆಯಾ ಎಂದು ಜನರೇ ಮಾತನಾಡುತ್ತಿದ್ದಾರೆ. ಶಾಸಕರ ನಿಧಿ ಇನ್ನೂ ಬಿಡುಗಡೆಯಾಗಿಲ್ಲ. ನೆರೆ ಸಂತ್ರಸ್ತರಿಗೆ ರೇವಣ್ಣ ಅವರು ಬಿಸ್ಕೆಟ್‌ನ್ನು ನಾಯಿಗೆ ಹಾಕಿದಂತೆ ಎಸೆದಿದ್ದಾರೆ. ದೇಶದ ಮಾಜಿ ಪ್ರಧಾನಿ ಮಕ್ಕಳಿಗೆ ಸಂಸ್ಕಾರವೇ ಗೊತ್ತಿಲ್ಲ. ಕೊಡಗು ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯನ್ನು ಇನ್ನೂ ಬಳಕೆ ಮಾಡಿಲ್ಲ ಎಂದು ಆರೋಪಿಸಿದರು.
 


Trending videos

Back to Top