CONNECT WITH US  

ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

ಹನೂರು (ಚಾಮರಾಜನಗರ): ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ರಚನೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತವರ ಶಿಷ್ಯಕೂಟ ಬಹುಕೋಟಿ ರೂ.ಗಳ ಅವ್ಯವಹಾರಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಬಿಜೆಪಿ ವಕ್ತಾರ ಎನ್‌.ಆರ್‌.ರಮೇಶ್‌ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಶುಕ್ರವಾರ ದೂರು ಸಲ್ಲಿಸಿದ್ದಾರೆ.

ಬೆಂಗಳೂರಿನ ಖನಿಜಭವನದ ಎಸಿಬಿ ಪೊಲೀಸ್‌ ಮಹಾ ನಿರೀಕ್ಷಕರನ್ನು ಭೇಟಿ ಮಾಡಿದ ಎನ್‌.ಆರ್‌.ರಮೇಶ್‌, ಈ ಸಂಬಂಧ ದೂರು ಸಲ್ಲಿಸಿದ್ದಾರೆ. 800 ಪುಟಗಳ ಸುದೀರ್ಘ‌  ದೂರಿನಲ್ಲಿ ಪೂರಕ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ. ಈ ದೂರಿನಲ್ಲಿ ಸಿದ್ದರಾಮಯ್ಯ, ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಿ.ಭಾರತಿ ವಿರುದ್ಧ ಕಾನೂನು ಬಾಹಿರ ನೇಮಕಾತಿ, ವಿವಿಧ ಕಾರ್ಯಗಳು, ಸೇವೆಗಳ ಹೆಸರಿನಲ್ಲಿ ನಿರಂತರ ಲೂಟಿ, ಅಧಿಕಾರ ದುರುಪಯೋಗ, ಭ್ರಷ್ಟಾಚಾರಕ್ಕೆ ಸಹಕಾರ ಪ್ರಕರಣಗಳನ್ನು ದಾಖಲಿಸಬೇಕು. 

ಪ್ರಾಧಿಕಾರದ ಉಪ ಕಾರ್ಯದರ್ಶಿ ಎಂ.ಬಸವರಾಜು, ಲೆಕ್ಕ ಅಧೀಕ್ಷಕ ಮಹದೇವಸ್ವಾಮಿ, ವಿದ್ಯುತ್ಛಕ್ತಿ ನಿರ್ವಾಹಕ ಮಹೇಶ್‌ ಕುಮಾರ್‌ ವಿರುದ್ಧ ವಂಚನೆ, ಭ್ರಷ್ಟಾಚಾರ, ನಕಲಿ ದಾಖಲೆ ತಯಾರಿಕೆ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜೊತೆಗೆ, ಮುಖ್ಯಮಂತ್ರಿ, ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ದೂರಿನ ಪ್ರತಿಯನ್ನು ಸಲ್ಲಿಸಿದ್ದಾರೆ.


Trending videos

Back to Top