CONNECT WITH US  

ಕತ್ತಿ,ರಾಮುಲು ವಿರುದ್ಧ ಕ್ರಮ ಕೈಗೊಳ್ಳಿ:ದಿನೇಶ್‌ ಗುಂಡೂರಾವ್‌

ಬೆಂಗಳೂರು: ಪ್ರತ್ಯೇಕ ರಾಜ್ಯದ ಪರ ಮಾತನಾಡುತ್ತಿರುವ ಬಿಜೆಪಿ ಶಾಸಕರಾದ ಬಿ. ಶ್ರೀರಾಮುಲು ಹಾಗೂ ಉಮೇಶ್‌ ಕತ್ತಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು  ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಂಡ ಕರ್ನಾಟಕದ ಇತಿಹಾಸ ಗೊತ್ತಿಲ್ಲದೆ ರಾಜಕೀಯ ಲಾಭಕ್ಕಾಗಿ ಬಿಜೆಪಿ ಶಾಸಕರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಹೈದರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಬಿಜೆಪಿ ಕೇಂದ್ರ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಶ್ರಮದಿಂದ 371ಜೆ ಅನ್ವಯ ಹೈದರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆಯಿತು. ಪ್ರತ್ಯೇಕ ರಾಜ್ಯ ಕೇಳುತ್ತಿರುವ  ತಮ್ಮ ಶಾಸಕರ ವಿರುದ್ಧ ಯಡಿಯೂರಪ್ಪ ಮೊದಲು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಇದೇ ವೇಳೆ, ಮುಖ್ಯಮಂತ್ರಿ ಸಂಪುಟ ಸಭೆ ಕರೆಯದಿರುವ ಬಗ್ಗೆ ಅವರನ್ನೇ ಕೇಳಿ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ವಿರುದ್ಧ ಮಾಜಿ ಸಚಿವ ಬಸವರಾಜ್‌ ರಾಯರೆಡ್ಡಿ ಮಾತನಾಡಿರುವುದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದರು.

Trending videos

Back to Top