CONNECT WITH US  

ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ

ಬೆಂಗಳೂರು:ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಪ್ರವಾಸ ಕೈಗೊಂಡು ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ಥರ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಕುಶಾಲನಗರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 1.30 ಕ್ಕೆ ಚಾಮುಂಡೇಶ್ವರಿ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಇಂದಿರಾ ನಗರ ಬಡಾವಣೆಗೆ ಭೇಟಿ ನಿರಾಶ್ರಿತರ ಜೊತೆ ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಳೆಯಿಂದ ಹಾನಿಗೊಳಗಾದ ಕಟಗೇರಿ ರಸ್ತೆ ವೀಕ್ಷಣೆ ಮಾಡಿ, ಮಧ್ಯಾಹ್ನ  4.30ಕ್ಕೆ ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಸಿದ್ದರಾಮಯ್ಯ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್‌ ಖಂಡ್ರೆ ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.


Trending videos

Back to Top