CONNECT WITH US  

ಮಾಜಿ ಶಾಸಕ ವೈ.ಎಸ್‌.ವಿ.ದತ್ತಗೆ ಪತ್ನಿ ವಿಯೋಗ

ಜೆಡಿಎಸ್‌ ಮುಖಂಡ ವೈ.ಎಸ್‌.ವಿ.ದತ್ತ.

ಬೆಂಗಳೂರು: ಮಾಜಿ ಶಾಸಕ ಹಾಗೂ ಜೆಡಿಎಸ್‌ ಮುಖಂಡ ವೈ.ಎಸ್‌.ವಿ.ದತ್ತ ಅವರ ಪತ್ನಿ ನಿರ್ಮಲಾ (60) ಬುಧವಾರ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ನಗರದ ಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತಿ ವೈ.ಎಸ್‌.ವಿ.ದತ್ತ ಹಾಗೂ ಒಬ್ಬ ಪುತ್ರಿ ಇದ್ದಾರೆ.

ನಿರ್ಮಲಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆವರೆಗೆ ರಾಜಾಜಿನಗರದಲ್ಲಿರುವ ದತ್ತ ಅವರ ನಿವಾಸದಲ್ಲಿ ಇಡಲಾಗುವುದು. ಬಳಿಕ ಸ್ವಗ್ರಾಮ ಕಡೂರು ತಾಲೂಕಿನ ಯಗಟಿ ಗ್ರಾಮಕ್ಕೆ ಕೊಂಡೊಯ್ದು ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Trending videos

Back to Top