CONNECT WITH US  

ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ಸಂಪುಟ ವಿಸ್ತರಣೆ

ಹುಬ್ಬಳ್ಳಿ: ಸದ್ಯದಲ್ಲೇ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ಪ್ರಕ್ರಿಯೆ ಕೈಗೊಳ್ಳಬೇಕಾಗಿ ತ್ತಾದರೂ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ಆಗಿದ್ದರಿಂದ ಮುಂದೂಡ ಬೇಕಾಯಿತು. ಚುನಾವಣೆ ನಂತರ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ದಿನೇಶ ಗುಂಡೂರಾವ್‌ ಹೇಳಿದರು.

Trending videos

Back to Top