CONNECT WITH US  

ಕೃಷ್ಣರಾಜ ಒಡೆಯರ್‌ ಹೆಸರಿನಲ್ಲಿ ಸಾಹಿತ್ಯ ಪ್ರಶಸ್ತಿ

ಬೆಂಗಳೂರು: ಬಿಎಂಟಿಸಿ ನೀಡುತ್ತಿರುವ ನೃಪತುಂಗ ಪ್ರಶಸ್ತಿ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡು ಕೋಟಿ ರೂ. ಅನುದಾನ ನೀಡುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿನಲ್ಲಿ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ನಡೆದ "ನೃಪತುಂಗ ಸಾಹಿತ್ಯ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಕವಿ ಡಾ.ಸಿದ್ದಲಿಂಗಯ್ಯಗೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್‌ ತಮ್ಮ ಆಡಳಿತದಲ್ಲಿ ಕಲೆ ಹಾಗೂ ಸಾಹಿತ್ಯ ವಲಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿಯೇ ಅವರನ್ನು ಮಹಾತ್ಮ ಗಾಂಧೀಜಿ ,ರಾಜರ್ಷಿ ಎಂದು ಕರೆಯುತ್ತಿದ್ದರು. 

ಅಂತಹ ಮಹನೀಯರ ಹೆಸರಿನಲ್ಲಿ ಒಂದು ಉತ್ಕೃಷ್ಟ ಪ್ರಶಸ್ತಿಯನ್ನು ನೀಡಬೇಕು. ಆ ನಿಟ್ಟಿನಲ್ಲಿ ನಮ್ಮ ಇಲಾಖೆಯ ಎಲ್ಲ ವಿಭಾಗಗಳನ್ನು ಒಟ್ಟಾಗಿ ಸೇರಿಸಿ ಎರಡು ಕೋಟಿ ಅನುದಾನ ನೀಡುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿನಲ್ಲಿ ಮುಂದಿನ ವರ್ಷವೇ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.


Trending videos

Back to Top