CONNECT WITH US  

ಸಿದ್ದರಾಮಯ್ಯ ಬೇಸರ

ಬೆಂಗಳೂರು: ಏರೋ ಇಂಡಿಯಾ ಶೋ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರಗೊಳ್ಳುತ್ತಿರುವ ಬಗ್ಗೆ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಿಲುವಿನಿಂದಾಗಿ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳು ಒಂದೊಂದಾಗಿ ರಾಜ್ಯದಿಂದ ಕೈತಪ್ಪಿ ಹೋಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದ್ದರೂ ವೈಮಾನಿಕ ಪ್ರದರ್ಶನವನ್ನು ಲಖನೌಗೆ ಸ್ಥಳಾಂತರಿಸುವುದು ಬೇಸರ ತಂದಿದೆ. ಎಚ್‌ಎಎಲ್‌ನಿಂದ ರಫೇಲ್‌ ಯೋಜನೆ ಕೈತಪ್ಪಿರುವುದು ಇನ್ನೂ ಹಸಿರಾಗಿರುವಾಗಲೇ ವೈಮಾನಿಕ ಪ್ರದರ್ಶನ ಸ್ಥಳಾಂತರದ ಕಹಿ ಸುದ್ದಿ ಕೇಳಿ ಬರುತ್ತಿದೆ ಎಂದು ಟ್ವೀಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 
 

Trending videos

Back to Top