CONNECT WITH US  

ಮೈಸೂರಲ್ಲಿ ಸಕ್ರಿಯರಾಗಲು ನಕ್ಸಲರು ಯತ್ನ: ಕೇಂದ್ರ

ಉದಯವಾಣಿ ದೆಹಲಿ ಪ್ರತಿನಿಧಿ: ಕರ್ನಾಟಕ ಮತ್ತು ಕೇರಳದ ಗಡಿಗಳು ಸಂಧಿಸುವ ಪ್ರದೇಶಗಳಲ್ಲಿ ನಕ್ಸಲರು ಹೆಚ್ಚು ಸಕ್ರಿಯರಾಗಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ರಾಜ್ಯಸಭೆಯಲ್ಲಿ ಬುಧವಾರ ಕಾಂಗ್ರೆಸ್‌ನ ಆನಂದ್‌ ಶರ್ಮಾ ಅವರು ಕೇಳಿದ ಪ್ರಶ್ನೆಗೆ ಗೃಹ ಖಾತೆಯ ರಾಜ್ಯ ಸಚಿವ ಹರಿಬಾಯ್‌ ಪಾರ್ಥಿಬಾಯ್‌ ಚೌಧರಿ ನೀಡಿದ ಲಿಖೀತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ಕೇರಳ ಮತ್ತು ಕರ್ನಾಟಕದ ಗಡಿಯಲ್ಲಿ ಶಕ್ತಿಶಾಲಿಯಾಗಲು ನಕ್ಸಲರು ಯತ್ನಿಸುತ್ತಿದ್ದಾರೆ. ಅವರು ಈಗಾಗಲೇ ವಯನಾಡು ಜಿಲ್ಲೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಅಲ್ಲಿನ ಅರಣ್ಯದ ಮೂಲಕ ಮೈಸೂರು ಜಿಲ್ಲೆಗೆ ಸಂಪರ್ಕ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.

Trending videos

Back to Top