CONNECT WITH US  

ಇಸ್ರೋ ಅಧ್ಯಕ್ಷರಾಗಿ ಕಿರಣ್‌ ಕುಮಾರ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಇಸ್ರೋದ ನೂತನ ಅಧ್ಯಕ್ಷರಾಗಿ ಎ.ಎಸ್‌. ಕಿರಣ್‌ಕುಮಾರ್‌ ಬೆಂಗಳೂರಿನಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಕಾರ್ಯದರ್ಶಿಯಾಗಿ ಕೂಡ ಅಧಿಕಾರ ವಹಿಸಿಕೊಂಡರು. ಸುಮಾರು 40 ವರ್ಷಗಳಿಂದ ಇಸ್ರೋದಲ್ಲಿ ಬಾಹ್ಯಾಕಾಶ ವಿಜ್ಞಾನಿ ಮತ್ತು ತಂತ್ರಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಅಹಮದಾಬಾದ್‌ನ ಬಾಹ್ಯಾಕಾಶ ಅನ್ವಯ ಕೆಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

Trending videos

Back to Top