CONNECT WITH US  

ಛತ್ತೀಸ್‌ಘಡದಲ್ಲಿ ಗುಂಡಿನಕಾಳಗ:ಇಬ್ಬರು ಪೊಲೀಸ್‌,ಇಬ್ಬರು ನಕ್ಸಲರು ಬಲಿ

ರಾಯ್‌ಪುರ : ಛತ್ತೀಸ್‌ಘಡದ ಬಿಜಾಪುರ ಜಿಲ್ಲೆಯ ದಟ್ಟಾರಣ್ಯದಲ್ಲಿ ಭಾನುವಾರ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಭಾರೀ ಗುಂಡಿನ ಕಾಳಗದಲ್ಲಿ ಇಬ್ಬರು ಪೊಲೀಸರು ಹಾಗೂ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. 

ಮಿಥುìರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಕೂಂಬಿಂಗ್‌ ನಡೆಸುತ್ತಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ಮೃತಪೊಲೀಸರಲ್ಲಿ ಒಬ್ಬರು ವಿಶೇಷ ಕಾರ್ಯಪಡೆ ಸಿಬ್ಬಂದಿ ಹಾಗೂ ಇನ್ನೊಬ್ಬರು ಜಿಲ್ಲಾ ಪೊಲೀಸ್‌ ಸಿಬ್ಬಂದಿ ಎಂದು ತಿಳಿದು ಬಂದಿದೆ. 


Trending videos

Back to Top