CONNECT WITH US  

50 ಸಾವಿರ ಕೋಟಿ ರೂ.ನ ಕೃಷಿ ಸಿಂಚಾಯಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು

ನವದೆಹಲಿ : ದೇಶದ ಸಮಗ್ರ ಕೃಷಿ ಭೂಮಿಗೆ ನೀರು ಒದಗಿಸುವ ''ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ'' ಜಾರಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಗುರುವಾರ ಸುದ್ದಿಗೋಷ್ಟಿ ನಡೆಸಿ ಈ ಮಹತ್ವದ ವಿಚಾರವನ್ನು ಘೋಷಿಸಿದರು. 

'ಕೇಂದ್ರ ಸಂಪುಟ ತನ್ನ ಮಹತ್ವದ ನಿರ್ಧಾರದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಾರಿಗೆ ಒಪ್ಪಿಗೆ ನೀಡಿದೆ.ಎಲ್ಲಾ ರಾಜ್ಯದಲ್ಲೂ ಈ ಬಗ್ಗೆ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ಯೋಜನೆಗೆ 50 ಸಾವಿರ ಕೋಟಿ ಹಣವನ್ನು ಬಳಸಿಕೊಳ್ಳಲಾಗುವುದು' ಎಂದು  ಜೇಟ್ಲಿ ತಿಳಿಸಿದರು. 

ಆನ್‌ಲೈನ್‌ ಕೃಷಿ ಮಾರುಕಟ್ಟೆಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿರುವುದಾಗಿ ಅವರು ತಿಳಿಸಿದರು. 

 ಕೃಷಿಗೆ ಪ್ರೋತ್ಸಾಹ ,ಕೃಷಿ ನೀರಾವರಿಯನ್ನು ಗಮನದಲ್ಲಿರಿಸಿಕೊಂಡು ಯೋಜನೆ ರೂಪಿಸಲಾಗಿದ್ದು, ದೇಶದಲ್ಲಿ ಕೃಷಿ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಕೃಷಿ ಭೂಮಿಗಳಿಗೂ ನೀರಾವರಿ ಸೌಲಭ್ಯ ಒದಗಿಸುವ ಸಲುವಾಗಿ ಈ ಯೋಜನೆ ಆರಂಭಿಸಲಾಗಿದೆ. 

ನಗರಗಳ ಕಲುಷಿತ ನೀರನ್ನು ಶುದ್ಧೀಕರಿಸಿ ಗ್ರಾಮಾಂತರ ಪ್ರದೇಶಗಳ ಕೃಷಿಗೆ ಒದಗಿಸುವುದು ಮತ್ತು ಜನರಲ್ಲಿ ನೀರಿನ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವೂ ಈ ಯೋಜನೆಯ ಅಡಿಯಲ್ಲಿ ಬರಲಿದೆ. 

Trending videos

Back to Top