CONNECT WITH US  

ಬಂದ್‌ಗೆ ಭಾಗಶಃ ಬೆಂಬಲ

ಶಿವಮೊಗ್ಗ: ಕಾಂಗ್ರೆಸ್‌ ಕರೆ ನೀಡಿರುವ ಭಾರತ್‌ ಬಂದ್‌ಗೆ ಜಿಲ್ಲಾದ್ಯಂತ ಬಹುತೇಕ ಬೆಂಬಲ ವ್ಯಕ್ತವಾಗಿದೆ. ಖಾಸಗಿ ಬಸ್‌ಗಳು ಬಂದ್‌ಗೆ ಬೆಂಬಲ ನೀಡಿರುವುದರಿಂದ ಸಂಚಾರ ವ್ಯವಸ್ಥೆಗೆ ತೊಡಕಾಗಲಿದೆ. ಕೆಎಸ್‌ ಆರ್‌ಟಿಸಿ ನೌಕರರ ಹಾಗೂ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದ್ದು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಇರಲಿದೆ. ಸಂಚಾರ ಸ್ಥಗಿತಗೊಳಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ, ಪರಿಸ್ಥಿತಿ ನೋಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಡಿಸಿ ಎ.ಎಂ. ಅಶ್ರಫ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಬಸ್‌ಗಳು ಸೋಮವಾರ ಸ್ಥಗಿತಗೊಳ್ಳಲಿವೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯಿಂದ ಬಸ್‌ ಮಾಲೀಕರು ಹಾಗೂ ಪ್ರಯಾಣಿಕರಿಗೆ ಹೊರೆಯಾಗಿದೆ. ಆದ್ದರಿಂದ ಬಂದ್‌ಗೆ ಬೆಂಬಲ ನೀಡಲಾಗಿದೆ ಎಂದು ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ರಂಗಪ್ಪ ತಿಳಿಸಿದರು.

ಶಿವಮೊಗ್ಗ ನಗರ ಸಾರಿಗೆ ಬಸ್‌ಗಳು ಸಹ ಬಂದ್‌ಗೆ ಬೆಂಬಲಿಸಿವೆ. ಆದರೆ ಬಸ್‌ ಓಡಿಸುವ ಬಗ್ಗೆ ಆಯಾ ಬಸ್‌ ಮಾಲೀಕರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಿಟಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದ್ದಾರೆ.
 
 ಅಲ್ಲದೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ), ಕನ್ನಡಿಗರ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದಲೂ
ಬೆಂಬಲ ವ್ಯಕ್ತವಾಗಿದ್ದು ಸೈಕಲ್‌ ಮೆರವಣಿಗೆ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವೇದಿಕೆ ಅಧ್ಯಕ್ಷ ಮಂಜುನಾಥ್‌ ತಿಳಿಸಿದರು. ಅಲ್ಲದೇ ಲಾರೀ ಮಾಲೀಕರ ಸಂಘ, ಮೆಟಡೋರ್‌, ಮ್ಯಾಕ್ಸಿ ಕ್ಯಾಬ್‌ ಮಾಲೀಕರ ಸಂಘದಿಂದಲೂ ಬೆಂಬಲ ಸಿಕ್ಕಿದೆ. ಮಲೆನಾಡು ಆಟೋ ಚಾಲಕರ ಸಂಘದ ಕಾರ್ಯದರ್ಶಿ ಮುನೀಫ್‌ ಬೆಂಬಲ ವ್ಯಕ್ತಪಡಿಸುತ್ತಿದ್ದು ಆಟೋ ಓಡಾಟ ನಿಲ್ಲಿಸುವುದಾಗಿ ತಿಳಿಸಿದ್ದಾರೆ. ಜಿಲ್ಲೆಯ ಹೊಟೇಲ್‌ ಮಾಲೀಕರ ಸಂಘದವರೂ
ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಮೆರವಣಿಗೆ: ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ಮೂಲಕ ತೆರಳಿ ಗೋಪಿ ಸರ್ಕಲ್‌ನಲ್ಲಿ ಘೋಷಣೆ ಕೂಗಲಾಗುವುದು. ಅಲ್ಲಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್‌ ತಿಳಿಸಿದ್ದಾರೆ.

ಜೆಡಿಎಸ್‌ನಿಂದ ಬೆಂಬಲ: ಕಾಂಗ್ರೆಸ್‌ ಬಂದ್‌ಗೆ ಕರೆ ಬೆಂಬಲ ಜೆಡಿಎಸ್‌ ಬೆಂಬಲ ವ್ಯಕ್ತಪಡಿಸಿದೆ. ಸೋಮವಾರ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ತಿಳಿಸಿದ್ದಾರೆ.

ವಾಸ್ತವ ತಿಳಿಸಲಾಗುವುದು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಕುರಿತು ವಾಸ್ತವಾಂಶವನ್ನು ಜನರ ಮುಂದೆ ತೆರೆದಿಡಲಾಗುವುದು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಎಂಎಲ್‌ಸಿ ಎಸ್‌. ರುದ್ರೇಗೌಡ ತಿಳಿಸಿದರು.

ಇಂದು ಹೆಚ್ಚು ಓದಿದ್ದು

ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಬಂಧಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ.

Nov 19, 2018 06:00am

ಬಾಗಲಕೋಟೆಯಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಬೆಂಕಿಗೆ ಆಹುತಿ.

Nov 19, 2018 06:00am

Trending videos

Back to Top