CONNECT WITH US  

ಎಚ್‌ಐವಿ ಪೀಡಿತರಿಗೆ ಸೌಲಭ್ಯ ತಲುಪಿಸಿ

ಕೊಪ್ಪಳ: ಜಿಲ್ಲೆಯಲ್ಲಿರುವ ಎಚ್‌ಐವಿ ಸೋಂಕಿತರಿಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಿ ಅವರನ್ನು ಮಾನಸಿಕವಾಗಿ ಸದೃಢರನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಕೃಷ್ಣ ಉದಪುಡಿ ಅಧಿಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಜಿಲ್ಲಾ ಏಡ್ಸ್‌ ನಿಯಂತ್ರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2007 ರಿಂದ ಈವರೆಗೆ ಕೊಪ್ಪಳದ ಎಆರ್‌ಟಿ ಕೇಂದ್ರದಲ್ಲಿ 6938 ಮತ್ತು ಗಂಗಾವತಿಯ ಎಆರ್‌ಟಿ ಕೇಂದ್ರದಲ್ಲಿ 2190 ಸೇರಿದಂತೆ ಒಟ್ಟು 9128 ಎಚ್‌ಐವಿ ಸೋಂಕಿತರು ನೋಂದಣಿಯಾಗಿದ್ದಾರೆ. ಎಚ್‌ಐವಿ ಸೋಂಕಿತರಿಗೆ ಅಥವಾ ಅವರ ಮಕ್ಕಳಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದರು.

ವಿಶೇಷ ಪಾಲನಾ ಯೋಜನೆಯಡಿ ಜಿಲ್ಲೆಯ ಒಟ್ಟು 392 ಮಕ್ಕಳಿಗೆ ಈಗಾಗಲೆ ಪ್ರತಿ ತಿಂಗಳು 650 ರೂ. ವಿಶೇಷ ಮಾಸಿಕ ವೇತನ ಪಾವತಿಸಲಾಗುತ್ತಿದೆ. ಈ ಯೋಜನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಇನ್ನೂ 322 ಮಕ್ಕಳಿಗೆ ಈ ಸೌಲಭ್ಯ ದೊರಕಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಮಂಜೂರಾತಿ ಹಾಗೂ ಅನುದಾನ ಬಿಡುಗಡೆ ನಿಟ್ಟಿನಲ್ಲಿ ಇದುವರೆಗೂ ಅಧಿಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದರು. ಎಚ್‌ಐವಿ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗುವ ಯಾವುದೇ ಬಗೆಯ ಪರೀಕ್ಷೆ ಅಥವಾ ಚಿಕಿತ್ಸೆಯನ್ನು ಉಚಿತವಾಗಿ ನೀಡಲು ಜಿಲ್ಲಾಧಿಧಿಕಾರಿಗಳು ಈ ಹಿಂದೆ ಆದೇಶ ಹೊರಡಿಸಿದ್ದಾರೆ. ಆದರೆ ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಈ ಆದೇಶದ ಪಾಲನೆ ಆಗುತ್ತಿಲ್ಲ ಎಂದು ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಧಿಗಳು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಧಿಕಾರಿಗಳು, ಜಿಲ್ಲಾಧಿಧಿಕಾರಿಗಳ ಆದೇಶವನ್ನು ಉಲ್ಲಂಘಿಘಿಸುವ ಆಸ್ಪತ್ರೆ ಅಧಿಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಧಿಕಾರಿ ಡಾ. ವಿರುಪಾಕ್ಷರೆಡ್ಡಿ ಮಾದಿನೂರ ಅವರು, ಜಿಲ್ಲೆಯಲ್ಲಿ ಒಟ್ಟು 9128 ಎಚ್‌ಐವಿ ಸೋಂಕಿತರು ಎಆರ್‌ಟಿ ಕೇಂದ್ರಗಳಲ್ಲಿ ನೋಂದಣಿಯಾಗಿದ್ದಾರೆ. ಈ ಪೈಕಿ 6,663 ಜನರು ಮಾತ್ರ ಚಿಕಿತ್ಸೆ ಪಡೆದುಕೊಂಡಿದ್ದಾರೆ. 1876 ಎಚ್‌ಐವಿ ಸೋಂಕಿತರು ಇದುವರೆಗೂ ಮೃತಪಟ್ಟಿದ್ದಾರೆ. 485 ರೋಗಿಗಳು ಚಿಕಿತ್ಸೆಯನ್ನು ಅರ್ಧಕ್ಕೆ ಬಿಟ್ಟುಎೂàಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 4237 ಜನ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು.

ಕಳೆದ 2014 ರ ಅಕ್ಟೋಬರ್‌ ರಿಂದ ಡಿಸೆಂಬರ್‌ ವರೆಗೆ ಜಿಲ್ಲೆಯಲ್ಲಿ 11,241 ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 215 ಜನರಲ್ಲಿ ಎಚ್‌ಐವಿ ಪಾಸಿಟಿವ್‌ ಕಂಡುಬಂದಿದೆ. ಕೊಪ್ಪಳ ತಾಲೂಕಿನಲ್ಲಿ 66, ಗಂಗಾವತಿ-87, ಕುಷ್ಟಗಿ-32, ಯಲಬುರ್ಗಾ ತಾಲೂಕಿನಲ್ಲಿ-30 ಜನರಲ್ಲಿ ಎಚ್‌ಐವಿ ಪಾಸಿಟಿವ್‌ ಕಂಡುಬಂದಿದೆ. 10,117 ಗರ್ಭಿಣಿಯರ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 14 ಮಹಿಳೆಯರಲ್ಲಿ ಎಚ್‌ಐವಿ ಪಾಸಿಟೀವ್‌ ಪತ್ತೆಯಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಧಿಕಾರಿ ಡಾ| ಶ್ರೀಕಾಂತ್‌ ಬಾಸೂರ ಸೇರಿದಂತೆ ಎಲ್ಲ ತಾಲೂಕು ವೈದ್ಯಾಧಿಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಧಿಗಳು, ಹಲವು ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಧಿಕಾರಿಗಳು ಪಾಲ್ಗೊಂಡಿದ್ದರು.

Trending videos

Back to Top