ಜನ್ಸಾಲೆ ಭಾಗವತರಿಗೆ ಸಮ್ಮಾನ 

Team Udayavani, Aug 31, 2018, 6:00 AM IST

5.jpg

ಉಡುಪಿಯ ಯಕ್ಷ ಕಲಾಭಿಮಾನಿ ಬಳಗದ ವಾರ್ಷಿಕೋತ್ಸವದಂದು ಈ ವರ್ಷದ ಸಮ್ಮಾನವನ್ನು ಬಡಗುತಿಟ್ಟಿನ ಪ್ರಸಿದ್ಧ ಯುವ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯರಿಗೆ ನೀಡಲಾಗುವುದು.ಸೆ.2ರಂದು  ಉಡುಪಿಯ ಪುರಭವನದಲ್ಲಿ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. “ಕೃಷ್ಣ ಲೀಲೆ – ಕಂಸ ವಧೆ’ ಯಕ್ಷಗಾನ ಪ್ರದರ್ಶನದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಬಾಲ್ಯದಲ್ಲಿಯೇ ಭಾಗವತ ಕಾಳಿಂಗ ನಾವಡರ ಪದ್ಯಕ್ಕೆ ಮಾರು ಹೋದವರು ಜನ್ಸಾಲೆ.ಶಾಲಾ ಶಿಕ್ಷಣಕ್ಕೆ ತಿಲಾಂಜಲಿ ಇತ್ತು ಯಕ್ಷಗಾನದತ್ತ ಮನ ಮಾಡಿದವರು. ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣರಲ್ಲಿ ನಾಟ್ಯಾಭ್ಯಾಸವನ್ನು ಕಲಿತು, ಗುರು ಗೋರ್ಪಾಡಿ ವಿಠuಲ ಪಾಟೀಲರಲ್ಲಿ ತಾಳಗತಿ, ಹಾಡುಗಾರಿಕೆಯನ್ನು ಕಲಿತರು. ಹಾರ್ಯಾಡಿ ಸತೀಶ್‌ ಕೆದ್ಲಾಯರಿಂದ ಸಭಾ ಲಕ್ಷಣ ಹಾಗೂ ಪೂರ್ವರಂಗವನ್ನು ಕಲಿತವರು. ಮುಂದೆ ಎರಡು ವರ್ಷ ಹವ್ಯಾಸಿ ಭಾಗವತರಾಗಿ ಸೇವೆ ಸಲ್ಲಿಸಿದರು. ಆರಂಭದ ತಿರುಗಾಟ ಮಾರಣಕಟ್ಟೆ ಮೇಳದಲ್ಲಿ ಸಂಗೀತಗಾರರಾಗಿ 2 ವರ್ಷ, ಸಹಭಾಗವತರಾಗಿ ಐದು ವರ್ಷ ಹಾಗೂ ಐದು ವರ್ಷ ಪ್ರಧಾನ ಭಾಗವತರಾಗಿ ಮಾರಣಕಟ್ಟೆ ಮೇಳದಲ್ಲಿ ತಿರುಗಾಟ ಮಾಡಿದರು. 

ನಂತರ ಪೆರ್ಡೂರು ಮೇಳದಲ್ಲಿ ತಿರುಗಾಟ ಆರಂಭಿಸಿ ಅಪಾರ ಜನಮೆಚ್ಚುಗೆ ಗಳಿಸಿದರು. ಪೌರಾಣಿಕ ಪ್ರಸಂಗಗಳಲ್ಲಿ ಇವರ ಕಂಠಸಿರಿ, ಭಾವನಾತ್ಮಕ ಪ್ರಸಂಗಗಳಲ್ಲಿ ಪರಿಣಾಮಕಾರಿಯಾಗಿ ಹಾಡುವ ಶೈಲಿ ರಂಗ ಸೃಷ್ಟಿಯನ್ನು ಮಾಡಬಲ್ಲದು. ಹಂತ ಹಂತವಾಗಿ ಕಲೆಯಲ್ಲಿ ಸಿದ್ಧಿ ಸಂಪಾದಿಸಿಕೊಂಡು ಸತತ ಪರಿಶ್ರಮದಿಂದ ಬಡಗುತಿಟ್ಟಿನ ಭಾಗವತರಲ್ಲಿ ಮುಂಚೂಣಿಯಲ್ಲಿರುವವರು. ತೀರ್ಥಳ್ಳಿ ಗೋಪಾಲ ಆಚಾರ್ಯ, ನೀಲ್ಗೊàಡು ಶಂಕರ ಹೆಗಡೆ, ರಾಮಕೃಷ್ಣ ಮಂದಾರ್ತಿ, ರಾಕೇಶ್‌ ಮಲ್ಯ, ಶಿವಾನಂದ ಕೋಟ, ಸುನೀಲ್‌ ಭಂಡಾರಿ ಮುಂತಾದ ಹಿರಿಯ ಕಲಾವಿದರಿಂದ ರಂಗ ಸೂಕ್ಷ್ಮತೆಯನ್ನು ಅರಿತವರು. 

ಬಡಗಿನ ಖ್ಯಾತ ಸ್ತ್ರೀ ವೇಷಧಾರಿ ಅರಾಟೆ ಮಂಜುನಾಥರ “ಅರಾಟೆ ಪ್ರವಾಸಿ ಯಕ್ಷಗಾನ’ ತಂಡದಿಂದ ವಿವಿಧೆಡೆ ತನ್ನ ಕಂಠ ಸಿರಿಯಿಂದ ಅಪಾರ ಕೀರ್ತಿ ಪಡೆದಿರುತ್ತಾರೆ.ಸದಾ ಕಲಿಯುವ ತುಡಿತವನ್ನು ಹೊಂದಿರುವ ಇವರು ಯಕ್ಷರಂಗದ ಶಿಸ್ತು. ಸಂಪ್ರದಾಯ, ಪ್ರಸಂಗಗಳ ಅಧ್ಯಯನ, ಪುರಾಣದ ಜ್ಞಾನ, ಹಿರಿಯ ಕಲಾವಿದರ ಜೊತೆಗಿನ ಪ್ರಸಂಗ ಪೂರ್ವ ಸಿದ್ಧತೆ ಬದ್ಧತೆಯನ್ನು ಮೈಗೂಡಿಸಿಕೊಂಡವರು. 

ಶಂಕರ ಬಡಗಬೆಟ್ಟು 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.