ಅಳಿವಿನಂಚಿನಲ್ಲಿ ಹೈದರ್‌ಖಾನ್‌ ಬಾವಿ


Team Udayavani, Sep 7, 2018, 3:12 PM IST

7-september-18.jpg

ಬೀಳಗಿ: ತಾಲೂಕಿನ ಬಾಡಗಂಡಿ ಗ್ರಾಮದ ಹೊರವಲಯದಲ್ಲಿನ ಶತಮಾನಗಳ ಇತಿಹಾಸಕ್ಕೆ ಸಾಕ್ಷಿಯಾಗಿರುವ ಹೈದರ್‌ಖಾನ್‌ ಬಾವಿ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಳಿವಿನಂಚಿಗೆ ತಲುಪಿದೆ.

ಗ್ರಾಮಸ್ಥರ ಹಿರೇಬಾವಿ: ಬಾಡಗಂಡಿ ಗ್ರಾಮಸ್ಥರು ಹಿರೇಬಾವಿ ಎಂದು ಕರೆಯುವ ಹೈದರ್‌ಖಾನ್‌ ಬಾವಿ ಶತಮಾನಗಳ ಇತಿಹಾಸ ಹೊಂದಿದೆ. ಸುಮಾರು 16 ನೇ ಶತಮಾನದ ಕೊನೆಯ ಕಾಲಘಟ್ಟದಲ್ಲಿ ಅಂದಿನ ಬಿಜಾಪುರದ ಎರಡನೇ ಇಬ್ರಾಹಿಂ ಆದಿಲ್‌ಶಾಹಿ ಆಳ್ವಿಕೆ ಅವಧಿಯಲ್ಲಿ ಇಲ್ಲಿನ ಹಸನ್‌ಡೋಂಗ್ರಿ ಸಾಹೇಬ ದರ್ಗಾ ಭಕ್ತರಿಗೆ ಕುಡಿವ ನೀರು ಸೌಲಭ್ಯಕ್ಕೆ ಮತ್ತು ದನಕರುಗಳಿಗೆ ನೀರಿಗೆ ಉಪಯೋಗವಾಗಲೆನ್ನುವ ಆಶಯದಿಂದ ಹೈದರ್‌ ಖಾನ್‌ ನಿರ್ಮಿಸಿದ ಬಾವಿಯೇ ಇಂದು ಹೈದರ್‌ ಖಾನ್‌ ಬಾವಿಯೆಂದು ಖ್ಯಾತಿಯಾಗಿದೆ.

ಗಚ್ಚು ಗಾರೆಯಿಂದ ಭದ್ರ: ಸುಮಾರು 10 ಸಾವಿರ ಚದರ ಅಡಿ ವಿಶಾಲ ಜಾಗದಲ್ಲಿ ಆವರಿಸಿದ ಬಾವಿಯು, ಗುಡ್ಡದ ಕೆಂಪುಕಲ್ಲು, ಗಚ್ಚು ಗಾರೆಯಿಂದ ನಿರ್ಮಿತವಾಗಿ ಭದ್ರವಾಗಿದೆ. ಆಳವಾದ ಬಾವಿಯ ತಳದವರೆಗೂ ಗಟ್ಟಿಯಾದ ನೂರಾರು ಮೆಟ್ಟಿಲುಗಳಿವೆ. ಹಲವು ಕಮಾನು ಹೊಂದಿದ ಬಾವಿಯ ಮೂರನೇ ಕಮಾನಿನಲ್ಲಿ ಇತಿಹಾಸ ಸಾರುವ ಶಿಲಾ ಶಾಸನವಿದೆ.

ಇಂತಹ ಐತಿಹಾಸಿಕ, ಇತಿಹಾಸ ಸಾರುವ ಬಾವಿ ಇದೀಗ ತನ್ನ ಗತವೈಭವ ಕಳೆದುಕೊಂಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ನಿರ್ಲಕ್ಷ್ಯಕ್ಕೊಳಗಾಗಿ ಬಾವಿ ಸುತ್ತಲೂ ಮುಳ್ಳುಗಂಟಿಗಳು ಬೆಳೆದಿವೆ. ಅದೆಷ್ಟೋ ದಶಕಗಳಿಂದ ಬಾವಿ ಹೂಳು ತೆಗೆಯದೇ ಮಲೀನ ನೀರು ತುಂಬಿದೆ. ವಿಶೇಷವೆಂದರೆ ಯಾವತ್ತೂ ಈ ಬಾವಿ ಬತ್ತಿದ ಉದಾಹರಣೆಯಿಲ್ಲ.

ಬೇಕಿದೆ ಇಚ್ಛಾಶಕ್ತಿ: ಸರಿಸುಮಾರು ಐದು ಶತಮಾನಗಳ ಇತಿಹಾಸ ಹೊಂದಿರುವ ಸುಂದರ ಬಾವಿ ಯಾರದ್ದೋ ಪಾಲಾಗುವ ಅಪಾಯಕ್ಕೂ ಸಿಲುಕಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ. ಐತಿಹಾಸಿಕ ಹಿನ್ನೆಲೆ, ದಾಖಲೆ ಹೊಂದಿರುವ ಬಾವಿಯ ಹೂಳು ತೆಗೆದು, ಸ್ವಚ್ಛಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ದೊರಕುವಂತೆ ಆಸಕ್ತಿವಹಿಸಬೇಕೆನ್ನುವುದು ಪ್ರಜ್ಞಾವಂತರ ಆಶಯ.

ರವೀಂದ್ರ ಕಣವಿ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.