ಹೊಟೇಲ್‌ ಉದ್ಯಮದಲ್ಲಿ ಬದಲಾವಣೆ ಅವಶ್ಯ

Team Udayavani, Sep 26, 2018, 4:09 PM IST

26-sepctember-14.gif

ಬಾದಾಮಿ: ಪ್ರವಾಸಿಗರಿಗೆ ಮೂಲಭೂತ ಸೌಲಭ್ಯಗಳ ಜತೆಗೆ ನಗರದಲ್ಲಿ ಸ್ವತ್ಛತೆ ಹಾಗೂ ರುಚಿಕರ ಊಟ ಉಪಹಾರ ಒದಗಿಸುವ ಹೊಟೇಲ್‌ ಉದ್ಯಮದಲ್ಲಿಯೂ ಬದಲಾವಣೆಯಾಗಬೇಕಿದೆ ಎಂದು ವೀರಪುಲಿಕೇಶಿ ವಿದ್ಯಾ ಸಂಸ್ಥೆ ಚೇರಮನ್‌ ಎ.ಸಿ.ಪಟ್ಟಣದ ಹೇಳಿದರು.

ಇಲ್ಲಿಯ ಖಾಸಗಿ ರಾಜಸಂಗಮ ಹೊಟೇಲ್‌ನಲ್ಲಿ ಆಯೋಜಿಸಿದ್ದ ಬಾದಾಮಿ ಹೊಟೇಲ್‌ ಮತ್ತು ಉಪಹಾರ ಮಂದಿರಗಳ ಸಂಘದ ಆಶ್ರಯದಲ್ಲಿ ನೂತನ ಪದಾಧಿ ಕಾರಿಗಳ ಪದಗ್ರಹಣ ಸಮಾರಂಭ ಬಾದಾಮಿ ಪುರಸಭೆ ಸರ್ವಸದಸ್ಯರಿಗೆ, ಬಾಗಲಕೋಟೆ ನಗರಸಭೆಗೆ ಆಯ್ಕೆಯಾದ ಸಂಘದ ಸದಸ್ಯರಿಗೆ ಹಾಗೂ ರಾಜ್ಯ ಕಾರ್ಯಕಾರಿಣಿ ಸಮಿತಿ ನೂತನ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಮೂಲಕ ಕೋಟಿ ಕೋಟಿ ಅನುದಾನದ ತೀವ್ರಗತಿಯಲ್ಲಿ ಪರಿಪೂರ್ಣ ಕಾಮಗಾರಿಗಳು ಮುಕ್ತಾಯಗೊಳಿಸಿ ಸ್ಥಳೀಯ ವ್ಯಾಪಾರ ವಹಿವಾಟು ಹೆಚ್ಚಿಸಬೇಕು. ಅಂದಾಗ ಮಾತ್ರ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಪುರಸಭೆ ಸದಸ್ಯರು ಪಕ್ಷಾತೀತವಾಗಿ ಬಾದಾಮಿ ಅಭಿವೃದ್ಧಿಗೆ ಪಣ ತೊಡಬೇಕು ಎಂದು ಸಲಹೆ ನೀಡಿದರು. ಮಾಜಿ ಅಧ್ಯಕ್ಷ ಹಾಲಿ ಸದಸ್ಯರ ರಾಜಮಹ್ಮದ ಬಾಗವಾನ ಮಾತನಾಡಿ, ಹೊಟೇಲ್‌ ಮಾಲೀಕರ ಸಂಘದಿಂದ ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿರುವುದು ಶ್ಲಾಘನೀಯ. ಅಲ್ಲದೆ ಮಾಲೀಕರು ಬಾದಾಮಿ ಸೇರಿದಂತೆ ಮಹಾಕೂಟ, ಪಟ್ಟದಕಲ್ಲು, ಐಹೊಳೆ ಹಾಗೂ ಧಾರ್ಮಿಕ ತಾಣಗಳಾದ ಶಿವಯೋಗ ಮಂದಿರ, ಬನಶಂಕರಿಗೆ ನಿತ್ಯವೂ ಸಾಕಷ್ಟು ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಾರೆ. ಆಗಮಿಸಿದ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಉತ್ತಮ ಊಟ ಉಪಹಾರ ನೀಡುವುದರ ಜತೆಗೆ ಸ್ವತ್ಛತೆಗೆ ಆದ್ಯತೆ ನೀಡಬೇಕು. ಮಹಿಳೆಯರಿಗೆ ಹಾಗೂ ಕುಟುಂಬ ವರ್ಗಕ್ಕೆ ಪ್ರತ್ಯೇಕತೆ ಸೌಲಭ್ಯ ಒದಗಿಸಬೇಕು ಎಂದ ಅವರು, ಪುರಸಭೆ ವತಿಯಿಂದ ಕಸ ನಿರ್ವಹಣೆಗೆಂದು ಪ್ರತ್ಯೇಕ ಕಸದ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನು ಸರಿಯಾಗಿ ಸದುಪಯೋಗ ಪಡೆದು ತಮ್ಮ ಹೊಟೇಲ್‌ ಸುತ್ತಮುತ್ತಲೂ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸುಬ್ರಹ್ಮಣ್ಯ ಹಾಗೂ ಸಿಬಿಕೆ ಹೆಗಡೆ ಮಾತನಾಡಿದರು. ಬಾದಾಮಿ ಪುರಸಭೆ 23 ವಾರ್ಡ್‌ನ ಸದಸ್ಯರಿಗೆ, ಬಾಗಲಕೋಟ ನಗರಸಭೆ ಸದಸ್ಯರಿಗೆ, ಸಂಘದ ಸಂಸ್ಥಾಪಕ ಅಧ್ಯಕ್ಷ ಮಾಧವರಾವ್‌ ನಾಯಕ ಹಾಗೂ ರಾಜ್ಯ ಕಾರ್ಯಕಾರಿಣಿಗೆ ಆಯ್ಕೆಗೊಂಡ ಸದಸ್ಯರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಗುರುರಾಜ ಉಪಾಧ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ನೂತನ ಅಧ್ಯಕ್ಷ ಅರುಣಕುಮಾರ ಶೆಟ್ಟಿ, ನಿಕಟಪೂರ್ವ ಗೌರವಾಧ್ಯಕ್ಷ ಎಸ್‌.ಪಿ. ರಾವ್‌ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ನಾಗರಾಜ ಕಾಚೆಟ್ಟಿ ಸ್ವಾಗತಿಸಿದರು. ಇಷ್ಟಲಿಂಗ ಶಿರ್ಸಿ ನಿರೂಪಿಸಿದರು. ಪ್ರವೀಣ ಪೂಜಾರಿ ವಂದಿಸಿದರು. ಈ ಸಂದರ್ಭದಲ್ಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿತು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.